ಮಹಿಳೆಯರ ಸುರಕ್ಷತೆ ಹಾಗೂ ಕಾನೂನು ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಗರದ ಕಮಿಷನರ್ ಕಚೇರಿ ಬಳಿ ಕಮಾಂಡ್ ಕೇಂದ್ರ ನಿರ್ಮಿಸಲಾಗಿದೆ. ಕೇಂದ್ರ ಸರ್ಕಾರ ನಿರ್ಭಯಾ ನಿಧಿಯಡಿ ರೂಪಿಸಲಾದ ₹ 450 ಕೋಟಿ ವೆಚ್ಚದ ಬಹುಮಹಡಿ ಕಟ್ಟಡದಲ್ಲಿ ಕಮಾಂಡ್ ಕೇಂದ್ರ ನಿರ್ಮಿಸಲಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಉದ್ಘಾಟಿಸಲಿದ್ದಾರೆ.
ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್, ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಹಾಗೂ ಗೃಹ ಸಚಿವ ಜಿ. ಪರಮೇಶ್ವರ್ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ನಿರ್ಭಯಾ ಯೋಜನೆಯಡಿ ಬೆಂಗಳೂರು, ಅಹಮದಾಬಾದ್, ಚೆನ್ನೈ, ದೆಹಲಿ, ಹೈದರಾಬಾದ್, ಕೋಲ್ಕತ್ತಾ, ಲಖನೌ, ಮುಂಬೈ ನಗರಗಳಲ್ಲಿ ಸೇಫ್ ಸಿಟಿ ಯೋಜನೆ ಜಾರಿಯಾಗುತ್ತಿದೆ. ಕಮಾಂಡ್ ಸೆಂಟರ್‌ನ್ನೂ ಅನುಷ್ಠಾನಗೊಳಿಸಲಾಗುತ್ತಿದೆ.
ವರದಿ: ಆಂಟೋನಿ


