ತುಮಕೂರು: ನಗರ ಸ್ವಚ್ಛವಾಗಿರಲು ಸ್ವಚ್ಛತಾ ಸೇನಾನಿಗಳಾದ ಪೌರ ಕಾರ್ಮಿಕರು ಪ್ರತಿನಿತ್ಯ ಶ್ರಮಿಸುತ್ತಿರುತ್ತಾರೆ. ಇಂತಹ ಪೌರ ಕಾರ್ಮಿಕರಿಗೆ ನಟ ದರ್ಶನ್ ನಟನೆಯ ಕಾಟೇರ ಚಿತ್ರವನ್ನು ವೀಕ್ಷಣೆ ಮಾಡುವ ಅವಕಾಶವನ್ನು ಪಾಲಿಕೆ ಆಯುಕ್ತ ಬಿ. ವಿ. ಅಶ್ವಿಜಾ ಕಲ್ಪಿಸಿದರು.
ಐನಾಕ್ಸ್ ನಲ್ಲಿ ಮಧ್ಯಾಹ್ನದ ಪ್ರದರ್ಶನದಲ್ಲಿ 196 ಪೌರ ಕಾರ್ಮಿಕರು ಕಾಟೇರ ಚಿತ್ರವನ್ನು ವೀಕ್ಷಿಸಿದರು.
ಕಳೆದ ಜನವರಿ 28 ರಂದು ಪಾಲಿಕೆ ಹಾಗೂ ಸ್ಮಾರ್ಟ್ ಸಿಟಿ ವತಿಯಿಂದ ತುಮಕೂರು ಎಂಬ ಕನ್ನಡ ಪದದ ಕಲಾಕೃತಿಯನ್ನು ರಚಿಸಿ ಗಿನ್ನಿಸ್ ದಾಖಲೆ ನಿರ್ಮಿಸುವಲ್ಲಿ ಪೌರಕಾರ್ಮಿಕರು ಪ್ರಮುಖ ಪಾತ್ರ ವಹಿಸಿದ್ದರು.
ಇದೀಗ ಪೌರ ಕಾರ್ಮಿಕರನ್ನು ಕಾಟೇರಾ ಚಿತ್ರ ವೀಕ್ಷಣೆಗೆ ಕರೆದೊಯ್ಯುವ ಮೂಲಕ ವಿಶೇಷವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗಿದೆ.