nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ

    July 17, 2026

    ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

    July 17, 2026

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ
    • ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ
    • ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ
    • 80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ
    • ಬಳ್ಳಾರಿ: ಎಸ್‌ ಐಆರ್ ಪ್ರಕ್ರಿಯೆ ಕುರಿತು ವಿದ್ಯಾರ್ಥಿಗಳಲ್ಲಿ ಜಾಗೃತಿ: ಗಣತಿ ನಮೂನೆ ಸಲ್ಲಿಕೆ ಕಡ್ಡಾಯ: ಜಿಪಂ ಸಿಇಒ
    • ಏಷ್ಯನ್ ಅಥ್ಲೆಟಿಕ್ಸ್ ನಲ್ಲಿ ಬೆಳ್ಳಿ ಪದಕ ವಿಜೇತೆ ಸುದೀಕ್ಷಾಗೆ ಬಳ್ಳಾರಿ ಜಿಲ್ಲಾಡಳಿತದಿಂದ ಅದ್ಧೂರಿ ಸನ್ಮಾನ
    • ಬಿಡದಿ ಟೌನ್‌ಶಿಪ್ ವಿಚಾರ: ಮುಖ್ಯಮಂತ್ರಿಗಳು ನಾಟಕದ ಸಂಭಾಷಣೆಗಳಂತೆ ಮಾತನಾಡುತ್ತಿದ್ದಾರೆ: ನಿಖಿಲ್ ಕುಮಾರಸ್ವಾಮಿ
    • ಬೀದಿ ನಾಯಿಗಳ ದಾಳಿ: ಒಂದೂವರೆ ವರ್ಷದ ಕಂದಮ್ಮ ಬಲಿ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಏ.16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ: ಪರೀಕ್ಷಾ ಕಾರ್ಯವಿಧಾನಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ನಿರ್ದೇಶನ
    ತುಮಕೂರು April 9, 2025

    ಏ.16, 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ: ಪರೀಕ್ಷಾ ಕಾರ್ಯವಿಧಾನಗಳನ್ನು ಕಡ್ಡಾಯವಾಗಿ ಪಾಲಿಸಲು ಜಿಲ್ಲಾಧಿಕಾರಿ ನಿರ್ದೇಶನ

    By adminApril 9, 2025No Comments2 Mins Read
    exam

    ತುಮಕೂರು: ಜಿಲ್ಲೆಯ ತುಮಕೂರು, ಶಿರಾ ಹಾಗೂ ತಿಪಟೂರು ತಾಲ್ಲೂಕಿನಲ್ಲಿ ಏಪ್ರಿಲ್ 16 ಹಾಗೂ 17ರಂದು ಸಾಮಾನ್ಯ ಪ್ರವೇಶ ಪರೀಕ್ಷೆ(KCET) ನಡೆಯಲಿದ್ದು, ಪರೀಕ್ಷೆಯನ್ನು ಲೋಪದೋಷವಿಲ್ಲದಂತೆ ನಡೆಸುವ ಹಿನ್ನೆಲೆಯಲ್ಲಿ ನಿಯೋಜಿತ ಅಧಿಕಾರಿ/ಸಿಬ್ಬಂದಿಗಳು ಕಡ್ಡಾಯವಾಗಿ ಪರೀಕ್ಷಾ ಕಾರ್ಯ ವಿಧಾನಗಳನ್ನು ಪಾಲಿಸಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ತಿಳಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿ ಕೇಸ್ವಾನ್ ಸಭಾಂಗಣದಲ್ಲಿ ಸೋಮವಾರ ಸಂಜೆ ಪೂರ್ವಭಾವಿ ಸಭೆ ನಡೆಸಿ ಮಾತನಾಡಿದ ಅವರು, ಜಿಲ್ಲೆಯ 25 ಕೇಂದ್ರಗಳಲ್ಲಿ ಕೆಸಿಇಟಿ ಪರೀಕ್ಷೆ ನಡೆಯಲಿದ್ದು, ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷಾ ವೇಳಾಪಟ್ಟಿ ಹಾಗೂ ಪರೀಕ್ಷಾರ್ಥಿಗಳ ಮಾಹಿತಿ ಲಭ್ಯವಿರಬೇಕು. ಪರೀಕ್ಷೆಗಾಗಿ ನಿಯೋಜಿಸಲಾದ ಅಧಿಕಾರಿ/ಸಿಬ್ಬಂದಿಗಳ ಹೊಣೆಗಾರಿಕೆಗೆ ಸಂಬಂಧಿಸಿದಂತೆ ಅಗತ್ಯ ತರಬೇತಿ ನೀಡಬೇಕೆಂದು ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ಅವರಿಗೆ ಸೂಚನೆ ನೀಡಿದರು.

    ಎಲ್ಲ ಪರೀಕ್ಷಾ ಕೇಂದ್ರಗಳಲ್ಲಿ ಪಿಯುಸಿ ಹಾಗೂ ಎಸ್‌ ಎಸ್‌ ಎಲ್‌ ಸಿ ಪರೀಕ್ಷೆಯಲ್ಲಿ ವ್ಯವಸ್ಥೆ ಮಾಡಿದಂತೆ ವೆಬ್‌ ಕಾಸ್ಟಿಂಗ್ ವ್ಯವಸ್ಥೆಯನ್ನು ಕೈಗೊಳ್ಳಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರವನ್ನು ಕಿಖ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ರೂಪಿಸಲಾಗಿದೆ. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರಸಂಹಿತೆಯನ್ನು ನೀಡಲಾಗಿದ್ದು, ಮಾಹಿತಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಿಂದ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.

    ಪದವಿ ಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕ ಬಾಲಗುರುಮೂರ್ತಿ ಸಭೆಗೆ ಮಾಹಿತಿ ನೀಡುತ್ತಾ, ಏಪ್ರಿಲ್ 16ರಂದು ಭೌತಶಾಸ್ತ್ರ(ಬೆಳಿಗ್ಗೆ 10.30 ರಿಂದ 11.50 ಗಂಟೆವರೆಗೆ) ಹಾಗೂ ರಸಾಯನ ಶಾಸ್ತç(ಮಧ್ಯಾಹ್ನ 2.30 ರಿಂದ 3.50), ಏಪ್ರಿಲ್ 17ರಂದು ಗಣಿತಶಾಸ್ತ್ರ(ಬೆಳಿಗ್ಗೆ 10:30 ರಿಂದ 11:50 ಗಂಟೆವರೆಗೆ) ಹಾಗೂ ಜೀವಶಾಸ್ತ್ರ(ಮಧ್ಯಾಹ್ನ 2:30 ರಿಂದ 3:50) ಪರೀಕ್ಷೆಗಳು ನಡೆಯಲಿವೆ. ತುಮಕೂರಿನ 18 ಪರೀಕ್ಷಾ ಕೇಂದ್ರಗಳಲ್ಲಿ 7726, ಶಿರಾ ತಾಲ್ಲೂಕಿನ 3 ಕೇಂದ್ರಗಳಲ್ಲಿ 1697 ಹಾಗೂ ತಿಪಟೂರು ತಾಲ್ಲೂಕಿನ 4 ಕೇಂದ್ರಗಳಲ್ಲಿ 2147 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು 11,570 ವಿದ್ಯಾರ್ಥಿಗಳು ಕೆಸಿಇಟಿ ಪರೀಕ್ಷೆ ಬರೆಯಲಿದ್ದಾರೆ. ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಾಗಲೇ ಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಸಭೆಯಲ್ಲಿ ವಿವಿಧ ಕಾಲೇಜುಗಳ ಪ್ರಾಂಶುಪಾಲರು ಹಾಗೂ ಮುಖ್ಯ ಅಧೀಕ್ಷರು ಸೇರಿದಂತೆ ಮತ್ತಿತರರು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/KN8LiGgEw492Ijygqm0dVW


    Provided by
    Provided by
    admin
    • Website

    Related Posts

    ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ

    July 17, 2026

    ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

    July 17, 2026

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026

    Comments are closed.

    Our Picks

    ಪಿಎಂ–ವಿಕಸಿತ್ ಭಾರತ್ ರೋಜ್‌ ಗಾರ್ ಯೋಜನೆಯಡಿ ₹2,400 ಕೋಟಿ ಪ್ರೋತ್ಸಾಹಧನ ವಿತರಣೆ: 15 ಲಕ್ಷ ಉದ್ಯೋಗಾವಕಾಶಗಳ ಸೃಷ್ಟಿ

    June 20, 2026

    ಮಗಳ ಗಂಡನನ್ನೇ ವರಿಸಿದ ಅತ್ತೆ: ಕದ್ದುಮುಚ್ಚಿ ಶುರುವಾದ ಪ್ರೀತಿಗೆ ಬಿತ್ತು ಮದುವೆ ಮುದ್ರೆ!

    June 8, 2026

    ಪೈಲ್ವಾನ್ ಜೊತೆ ಕುಸ್ತಿಯಾಡು ಎಂದು ಹೆಂಡತಿಯನ್ನೇ ಮುಂದೆ ಬಿಟ್ಟ ಖ್ಯಾತ ನಟ: ಮುಂದೇನಾಯ್ತು?

    June 8, 2026

    ಪತ್ನಿಗೆ ರಾಜ್ಯಸಭಾ ಆಫರ್ ನಿರಾಕರಿಸಿದ ಸಿದ್ದರಾಮಯ್ಯ; 3 ಡಿಸಿಎಂ ಹುದ್ದೆಗಾಗಿ ಪಟ್ಟು!

    June 1, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು: ಜು.18 ರಿಂದ 26ರವರೆಗೆ ಗಮಕ ಹಬ್ಬ

    July 17, 2026

    ತುಮಕೂರು: ಗಮಕ ಭಾರತೀ ಚಾರಿಟಬಲ್ ಟ್ರಸ್ಟ್ ತುಮಕೂರು, ಕರ್ನಾಟಕ ಗಮಕ ಕಲಾ ಪರಿಷತ್ತು ಬೆಂಗಳೂರು, ಜಿಲ್ಲಾ ಸಮಿತಿ ತುಮಕೂರು, ಸಂಸ್ಕಾರ…

    ತುಮಕೂರು: ಕೇಂದ್ರದ ವಿರುದ್ಧ ಇಪಿಎಸ್ ಪಿಂಚಣಿದಾರರ ಪ್ರತಿಭಟನೆ

    July 17, 2026

    ತುಮಕೂರು: ಜುಲೈ 17 ರಿಂದ 19ರವರೆಗೆ ಇಲಾಖಾ ಪರೀಕ್ಷೆ: ನಿಷೇಧಾಜ್ಞೆ ಜಾರಿ

    July 17, 2026

    80ನೇ ಭಾರತ ಸ್ವಾತಂತ್ರ್ಯ ದಿನಾಚರಣೆ ಕುರಿತು ಪೂರ್ವಭಾವಿ ಸಿದ್ಧತೆಗಳನ್ನು ಸಮರ್ಪಕವಾಗಿ ನಿರ್ವಹಿಸಲು ಸೂಚನೆ

    July 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.