ಔರಾದ್: ಸಮಾಜ ಕಲ್ಯಾಣ ಇಲಾಖೆ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ಶಿಕ್ಷಣ ಮತ್ತು ಅಭಿವೃದ್ಧಿ ಸೇವಾ ಸಂಘ (ರಿ) ಸಂಯುಕ್ತ ಆಶ್ರಯದಲ್ಲಿ ಪ.ಜಾತಿ ಮತ್ತು ಪಂಗಡಗಳ ಮೇಲಿನ ದೌರ್ಜನ್ಯ ತಡೆ ಕಾಯ್ದೆ ಕುರಿತು ಕೋಮು ಸೌಹಾರ್ದ ಜಾಗೃತಿ ಕಾರ್ಯಕ್ರಮವನ್ನು ತಾಲೂಕಿನ ಹೊಕ್ರಾಣ ಗ್ರಾಮದಲ್ಲಿ ನಡೆಸಲಾಯಿತು.
ಕಾರ್ಯಕ್ರಮವನ್ನು ಎ.ಎಸ್.ಐ. ಮಲ್ಲಿಕಾರ್ಜುನ ಉದ್ಘಾಟಿಸಿ ಮಾತನಾಡಿ, ದೌರ್ಜನ್ಯ ತಡೆ ಕಾಯ್ದೆಯ ಬಗ್ಗೆ ಗ್ರಾಮೀಣ ಪ್ರದೇಶದ ಜನರಿಗೆ ಸರಿಯಾದ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ. ಸಮಾಜದಲ್ಲಿ ಶಾಂತಿ, ಸಮಾನತೆ ಹಾಗೂ ಸೌಹಾರ್ದತೆಯನ್ನು ಕಾಪಾಡಲು ಕಾನೂನು ಜ್ಞಾನ ಪ್ರತಿಯೊಬ್ಬರಿಗೂ ಇರಬೇಕು ಎಂದು ಹೇಳಿದರು. ಅನ್ಯಾಯ ಅಥವಾ ದೌರ್ಜನ್ಯ ಎದುರಾದಲ್ಲಿ ತಕ್ಷಣವೇ ಕಾನೂನು ಸಹಾಯ ಪಡೆಯುವಂತೆ ಅವರು ಸಲಹೆ ನೀಡಿದರು.
ಕಾರ್ಯಕ್ರಮದಲ್ಲಿ ನಂದಮ್ಮ, ಅರ್ಜುನ್ ಕುಂಡೆ, ಲಕ್ಷ್ಮಣರಾವ್, ಚಿನ್ನಮ್ಮ ಸೇರಿದಂತೆ ಹಲವರು ಉಪಸ್ಥಿತರಿದ್ದು, ಜಾಗೃತಿ ಕಾರ್ಯಕ್ರಮಕ್ಕೆ ಗ್ರಾಮಸ್ಥರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


