ಮತದಾನ ನಡೆಯುವ ಎರಡು ದಿನದಂದು ರಜೆ ನೀಡದ ಕಂಪನಿಗಳ ವಿರುದ್ಧ ಕಾರ್ಮಿಕ ಕಾಯ್ದೆ ಪ್ರಕಾರ ಕ್ರಮ ಕೈಗೊಳ್ಳಲಾಗುವುದು ಎಂದು ಕರ್ನಾಟಕ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ತಿಳಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ನಾವು ಐಟಿ ವಲಯ ಸೇರಿದಂತೆ ಖಾಸಗಿ ಕಂಪನಿಗಳನ್ನು ಸಂಪರ್ಕ ಮಾಡಿದ್ದು, ಅಲ್ಲಿನ ಸಿಇಒ ಮತ್ತು ಮ್ಯಾನೇಜ್ ಮೆಂಟ್ ಗಳನ್ನು ಭೇಟಿಯಾಗಿ ಮತ ಚಲಾಯಿಸಲು ಸಿಬ್ಬಂದಿಗೆ ಉತ್ತೇಜಿಸುವಂತೆ ಹೇಳಿದ್ದೇವೆ ಎಂದು ತಿಳಿಸಿದರು.
ಶೇ35 ಅಥವಾ ಇದಕ್ಕಿಂತ ಕಡಿಮೆ ಮತದಾನವಾಗಿರುವ ಬಿಬಿಂಪಿ ವ್ಯಾಪ್ತಿಯ 1800 ಮತ್ತು ರಾಜ್ಯದ 5000 ಮತಗಟ್ಟೆಗಳನ್ನು ಗುರುತಿಸಿದ್ದೇವೆ. ನಾವು ಮನೆ ಮನೆಗೆ ತೆರಳಿ ಮತದಾನದ ಬಗ್ಗೆ ಅರಿವು ಮೂಡಿಸುತ್ತಿದ್ದೇವೆ. ಹಾಗೆ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ಗಳು ಮತ್ತು ರೆಸಿಡೆಂಟ್ ವೆಲ್ ಫೇರ್ ಅಸೋಸಿಯೇಷನ್ ಗಳನ್ನು ಸಂಪರ್ಕಿಸಿ ಮತದಾನದ ಬಗ್ಗೆ ತಿಳಿಸಿದ್ದೇವೆ. ಆದರೆ ನಾವು ಯಾರನ್ನೂ ಒತ್ತಾಯಿಸಲು ಸಾಧ್ಯವಿಲ್ಲ. ಏಪ್ರಿಲ್ 26 ಶುಕ್ರವಾರ ಆಗಿದ್ದು, ಮೊದಲು ಮತದಾನ ಮಾಡಿ ನಂತರ ರಜೆ ತೆಗೆದುಕೊಳ್ಳಬೇಕು ಅಂತ ಜನರಲ್ಲಿ ಮನವಿ ಮಾಡುತ್ತಿದ್ದೇವೆ ಎಂದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296