nammatumakuru

    Subscribe to Updates

    Get the latest creative news from FooBar about art, design and business.

    What's Hot

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026
    Facebook Twitter Instagram
    ಟ್ರೆಂಡಿಂಗ್
    • ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ
    • ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ
    • ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ
    • ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ
    • ಬೀದರ್ ಜಿಲ್ಲೆಯನ್ನು ಸಂಪೂರ್ಣ ಬರಪೀಡಿತ ಎಂದು ಘೋಷಿಸಿ: ಮುಖ್ಯಮಂತ್ರಿಗೆ ರೈತ ಸಂಘದ ಆಗ್ರಹ
    • ಔರಾದ್‌ ತಾಲೂಕು ‘ಬರ’ ಘೋಷಣೆಗೆ ಆಗ್ರಹಿಸಿ ಬೀದಿಗಿಳಿದ ರೈತರು: ಸರ್ಕಾರಕ್ಕೆ 10 ದಿನಗಳ ಗಡುವು ನೀಡಿದ ಶಾಸಕ ಪ್ರಭು ಚವ್ಹಾಣ್
    • ಬೋಧಕ ವರ್ಗ ಹಾಗೂ ಗ್ರಂಥಾಲಯದ ಜ್ಞಾನವನ್ನು ಸದುಪಯೋಗಪಡಿಸಿಕೊಳ್ಳಿ: ಡಾ. ಶಶಿಕುಮಾರ್ ಎಚ್.ಸಿ.
    • ಕೊರಟಗೆರೆ: ಬರಗಾಲದ ಹಿನ್ನೆಲೆ ‘ಹೊಲ ಹೂಳುವ ಗಣಪತಿ’ ಪ್ರತಿಷ್ಠಾಪನೆ; ಅದ್ದೂರಿಯಾಗಿ ಜರುಗಿದ ಶ್ರೀ ವಿದ್ಯಾ ಗಣಪತಿ ವಿಸರ್ಜನೆ!
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ
    ರಾಜ್ಯ ಸುದ್ದಿ May 29, 2024

    ಬೇರೆ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

    By adminMay 29, 2024No Comments2 Mins Read
    siddaramaiah

    ಬಿತ್ತನೆ ಬೀಜ ದರ ಏರಿಕೆಗೆ ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ ಕೊಟ್ಟಿದ್ದಾರೆ. 2023-24ನೇ ಸಾಲಿನ ಭೀಕರ ಬರಗಾಲದಿಂದಾಗಿ ರಾಜ್ಯದಲ್ಲಿ ಬೀಜೋತ್ಪಾದನೆ ಗಣನೀಯವಾಗಿ ಕುಂಠಿತವಾಗಿದ್ದು, ಬೀಜೋತ್ಪಾದಕರಿಂದ ಖರೀದಿಸುವ ಬಿತ್ತನೆ ಬೀಜದ ದರಗಳು ಸಹ ಗಣನೀಯವಾಗಿ ಏರಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಬಿತ್ತನೆ ಬೀಜದ ಮಾರಾಟದ ದರ ಏರಿಕೆಯಾಗಿದೆ. ಈ ದರ ಏರಿಕೆ ಮುಂಗಾರು ಬೆಳೆ ಬೆಳೆಯುವ ಎಲ್ಲ ರಾಜ್ಯಗಳಲ್ಲಿಯೂ ಆಗಿದ್ದು ಉಳಿದ ರಾಜ್ಯಗಳಿಗೆ ಹೋಲಿಸಿದರೆ ನಮ್ಮಲ್ಲಿ ಬೀಜಗಳ ದರ ಕಡಿಮೆ ಇದೆ  ಎಂದು ಅವರು ಸ್ಪಷ್ಟನೆ ನೀಡಿದ್ದಾರೆ.

    ಬಿತ್ತನೆ ಬೀಜಗಳ ಮಾರಾಟ ದರಗಳನ್ನು ನಿಗದಿಪಡಿಸುವ ಸಂದರ್ಭಗಳಲ್ಲಿ ಬಿತ್ತನೆ ಬೀಜ ಖರೀದಿ ದರಗಳು ಹಾಗೂ ಗರಿಷ್ಠ APMC ಮಾರಾಟ ದರಗಳನ್ನು ಆಧಾರವಾಗಿ ಪರಿಗಣಿಸಲಾಗುತ್ತದೆ. 2022-23ನೇ ಸಾಲಿಗೆ ಹೋಲಿಸಿದಾಗ 2023-24ನೇ ಸಾಲಿನಲ್ಲಿ ವಿವಿಧ ಬೆಳೆಗಳ ಖರೀದಿ ದರಗಳಲ್ಲಿ (Procurement Rates) ಗರಿಷ್ಠ ಶೇ.59.58ರಷ್ಟು ವ್ಯತ್ಯಾಸವಾಗಿರುತ್ತದೆ ಎಂದಿದ್ದಾರೆ.

    ರೈತರು ತಮ್ಮ ಜಮೀನಿನಲ್ಲಿಯೇ ಬೀಜಗಳನ್ನು ಉತ್ಪಾದನೆ ಮಾಡುತ್ತಾರೆ. ಇದನ್ನು ಕರ್ನಾಟಕ ರಾಜ್ಯ ಬೀಜ ನಿಗಮ ನಿ., ರಾಷ್ಟ್ರೀಯ ರಾಜ್ಯ ಬೀಜ ನಿ., ಕರ್ನಾಟಕ ಎಣ್ಣೆಬೀಜ ಬೆಳೆಗಾರರ ಮಹಾ ಮಂಡಳಿ ಹಾಗೂ ಖಾಸಗಿ ಸಂಸ್ಥೆಗಳು ಕೈಗೊಂಡು ಸರಬರಾಜು ಮಾಡುತ್ತವೆ ಎಂದು ತಿಳಿಸಿದ್ದಾರೆ.

    ಈ ಬಾರಿ ಹೆಸರು ಬೆಳೆಯ ಬಿತ್ತನೆ ಬೀಜಗಳ ಎಲ್‌-1 ದರವು ಶೇ.48.5, ಉದ್ದು ಬೆಳೆಯ ದರವು ಶೇ.37.72, ತೊಗರಿ ಬೆಳೆಯ ವಿವಿಧ ತಳಿಗಳ ಬಿತ್ತನೆ ಬೀಜಗಳ ದರದಲ್ಲಿ ಶೇ.28.29 ರಿಂದ 37.69ರಷ್ಟು ಮತ್ತು ಜೋಳದ ಬೆಳೆಯ ಎಲ್‌-1 ದರವು ಶೇ.7.66 ರಿಂದ ಶೇ.33.33ರಷ್ಟು ಹೆಚ್ಚಾಗಿರುತ್ತದೆ. ಬೀಜಗಳ ಖರೀದಿ ದರದಲ್ಲಿನ ಹೆಚ್ಚಳದ ಮೊತ್ತವು ಬೀಜೋತ್ಪಾದನೆಯಲ್ಲಿ ತೊಡಗಿರುವ ರೈತರಿಗೆ ವರ್ಗಾವಣೆಯಾಗಿರುತ್ತದೆ ಎನ್ನುವುದು ಗಮನಾರ್ಹ ಅಂಶವಾಗಿದೆ ಎಂದರು.

    ಇದಲ್ಲದೆ ಕೆಲ ಬಿತ್ತನೆ ಬೀಜದ ದರದಲ್ಲಿ ಇಳಿಕೆ ಹಾಗೂ ಯಥಾಸ್ಥಿತಿ ಕೂಡ ಕಂಡುಬಂದಿದೆ. 2024ರ ಮುಂಗಾರು ಹಂಗಾಮಿನ ಸೋಯಾಅವರೆ ಬಿತ್ತನೆ ಬೀಜದ ದರವು 2023ರ ಮುಂಗಾರು ಹಂಗಾಮಿನ ಎಲ್‌-1 ದರಗಳ ಹೋಲಿಕೆಯಲ್ಲಿ ಶೇ.8ರಷ್ಟು ಕಡಿತಗೊಂಡಿರುತ್ತದೆ. ಸೂರ್ಯಕಾಂತಿ ಬಿತ್ತನೆ ಬೀಜದ ದರ ಕಳೆದ ಸಾಲಿನಷ್ಟೇ ಇದ್ದು ಯಾವುದೇ ಬದಲಾವಣೆ ಇರುವುದಿಲ್ಲ ಎಂದು ತಿಳಿಸಿದ್ದಾರೆ.

    ಬಿ.ಟಿ. ಹತ್ತಿ ಬಿತ್ತನೆ ಬೀಜಗಳನ್ನು ರಾಜ್ಯ ಸರ್ಕಾರದ ಇಲಾಖಾ ವತಿಯಿಂದ ರಿಯಾಯತಿ ದರದಲ್ಲಿ ವಿತರಣೆ ಮಾಡುತ್ತಿರುವುದಿಲ್ಲ. ಬಿ.ಟಿ. ಹತ್ತಿ ಬಿತ್ತನೆ ಬೀಜಗಳ ಗರಿಷ್ಠ ದರಗಳನ್ನು ಕೇಂದ್ರ ಸರ್ಕಾರದ ವತಿಯಿಂದಲೇ ನಿಗದಿಪಡಿಸಲಾಗುತ್ತದೆ ಎಂದು ಸ್ಪಷ್ಟನೆ ನೀಡಿದರು.

    ರಾಜ್ಯದಲ್ಲಿನ ವಿವಿಧ ಬೆಳೆಗಳ ಬಿತ್ತನೆ ಬೀಜಗಳಲ್ಲಿನ ದರ ವ್ಯತ್ಯಾಸವು 2023ರ ಹೋಲಿಕೆಯಲ್ಲಿ ಈ ಬಾರಿ ಗರಿಷ್ಠ ಶೇ.48.50ರಷ್ಟಿದೆ. ಆದಾಗ್ಯೂ, ನೆರೆಯ ರಾಜ್ಯಗಳಲ್ಲಿನ ಪ್ರಸಕ್ತ ಸಾಲಿನ ಬಿತ್ತನೆ ಬೀಜಗಳ ದರಗಳ ಏರಿಕೆಯ ಹೋಲಿಕೆಯಲ್ಲಿ ರಾಜ್ಯದಲ್ಲಿನ ಬಿತ್ತನೆ ಬೀಜಗಳ ದರದ ಏರಿಕೆಯು ಕಡಿಮೆಯಾಗಿರುತ್ತದೆ ಎಂದು ತಿಳಿಸಿದ್ದಾರೆ.

    ಉದಾಹರಣೆಗೆ ಮಹಾರಾಷ್ಟ್ರದಲ್ಲಿ ಸೋಯಾಅವರೆ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ  ಎಲ್‌-1 ದರವು ರೂ.8500/- ನಿಗದಿಯಾಗಿದ್ದು ಕರ್ನಾಟಕದಲ್ಲಿ ಇದು ರೂ.7270/- ನಿಗದಿಯಾಗಿದೆ. ಅದೇ ರೀತಿ, ತೊಗರಿ ಬೆಳೆಗೆ ಮಹಾರಾಷ್ಟ್ರದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.25,000/- ಇದ್ದು ಕರ್ನಾಟಕದಲ್ಲಿ ಪ್ರತಿ ಕ್ವಿಂಟಾಲ್‌ಗೆ ರೂ.17,900/- ನಿಗದಿಪಡಿಸಲಾಗಿದೆ. ಹೆಸರು ಮತ್ತು ಜೋಳದ ಬೆಳೆಗೆ ಪ್ರತಿ ಕ್ವಿಂಟಾಲ್‌ಗೆ ಮಹಾರಾಷ್ಟ್ರದಲ್ಲಿ ಕ್ರಮವಾಗಿ ರೂ.23,500/- ರೂ. 14,000/- ಇದ್ದು ಕರ್ನಾಟಕದಲ್ಲಿ ಕ್ರಮವಾಗಿ ರೂ.18,600/- ರೂ.12,500/- ನಿಗದಿಪಡಿಸಲಾಗಿದೆ. ಈ ಹೋಲಿಕೆಯಲ್ಲಿ ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲಿ ವಿವಿಧ ಬೆಳೆಗಳ ಬಿತ್ತನೆ ಬೀಜಗಳ ದರಗಳು ಗಣನೀಯವಾಗಿ ಕಡಿಮೆ ಇರುವುದು ಕಂಡುಬರುತ್ತದೆ ಎಂದು ಮಾಹಿತಿ ನೀಡಿದ್ದಾರೆ.

    ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯು ಉತ್ತಮವಾಗಿ ಆಗುತ್ತಿದ್ದು ಕೃಷಿ ಚಟುವಟಿಕೆಗಳು ಗರಿಗೆದರಿವೆ. ಇದೇ ವೇಳೆ, ಬಿತ್ತನೆ ಬೀಜಗಳ ದರಗಳು ಏರಿಕೆಯಾಗಿರುವ ಬಗ್ಗೆ ವಿವಿಧ ಮಾಧ್ಯಮಗಳಲ್ಲಿ ವರದಿಯಾಗುತ್ತಿದ್ದು ಈ ಕುರಿತು ಕೃಷಿ ಇಲಾಖೆಯು ಸ್ಪಷ್ಟೀಕರಣ ನೀಡಿದ್ದು ವಾಸ್ತವ ಸ್ಥಿತಿಯನ್ನು ವಿವರಿಸಿದೆ ಎಂದು ತಿಳಿಸಿದ್ದಾರೆ.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296

    ಯೂಟ್ಯೂಬ್ ಗೆ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA

    admin
    • Website

    Related Posts

    ನಾಗಪುರ ದೀಕ್ಷಾಭೂಮಿ ಯಾತ್ರೆಗೆ ಸಮಾಜ ಕಲ್ಯಾಣ ಇಲಾಖೆಯಿಂದ ಆನ್ ಲೈನ್ ಮೂಲಕ ಅರ್ಜಿ ಆಹ್ವಾನ

    September 19, 2026

    ಯುಪಿಐ ಮೇಲಿನ ಶುಲ್ಕ ವಿಧಿಸುವ ನಿರ್ಧಾರ ಡಿಜಿಟಲ್ ಆರ್ಥಿಕತೆಗೆ ಹಿನ್ನಡೆ: ಡಿಸಿಎಂ ಡಾ.ಜಿ.ಪರಮೇಶ್ವರ್ ಆತಂಕ

    September 18, 2026

    ರಾಜ್ಯದಲ್ಲಿ ಮುಂದುವರಿದ ಬರ ಮೌಲ್ಯಮಾಪನ: ಒಟ್ಟು 124 ತಾಲೂಕುಗಳು ‘ಬರಪೀಡಿತ’ ಘೋಷಣೆ

    September 18, 2026

    Comments are closed.

    Our Picks

    ನೇಪಾಳ ಪ್ರವಾಹ: ತುಮಕೂರು ಮೂಲದ ಇಬ್ಬರು ನಾಪತ್ತೆ

    September 1, 2026

    ನೇಪಾಳದಲ್ಲಿ ಭೀಕರ ಪ್ರವಾಹದ ಅಬ್ಬರ: ಮತ್ತೊಂದು ಜಲಪ್ರಳಯದ ಭೀತಿ ಸೃಷ್ಟಿ

    August 28, 2026

    ಕಾವೇರಿ ನೀರು ವಿವಾದ: ಸುಪ್ರೀಂ ಕೋರ್ಟ್ ವಿಚಾರಣೆ ಬಳಿಕ ಮುಂದಿನ ನಡೆ ಕುರಿತು ನಿರ್ಧಾರ — ಸಚಿವ ರಾಮಲಿಂಗಾರೆಡ್ಡಿ

    August 13, 2026

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತುಮಕೂರು

    ತುಮಕೂರು ದಸರಾ ಉತ್ಸವ: ಅಕ್ಟೋಬರ್ 17ರಂದು ದಸರಾ ಕವಿಗೋಷ್ಠಿ – ಸ್ವರಚಿತ ಕವನಗಳ ಆಹ್ವಾನ

    September 20, 2026

    ತುಮಕೂರು: ಜಿಲ್ಲಾಡಳಿತದ ವತಿಯಿಂದ ಆಚರಿಸಲಾಗುವ ತುಮಕೂರು ದಸರಾ ಉತ್ಸವದ ಅಂಗವಾಗಿ ಅಕ್ಟೋಬರ್ 17ರಂದು ನಗರದ ಸರ್ಕಾರಿ ಪದವಿ ಪೂರ್ವ ಕಾಲೇಜು…

    ಸಾಧಕರಿಗೆ ರಾಜ್ಯ ಮಟ್ಟದ ‘ಶ್ರೀ ಮಹರ್ಷಿ ವಾಲ್ಮೀಕಿ ಪ್ರಶಸ್ತಿ’: ಅರ್ಜಿ ಆಹ್ವಾನ

    September 20, 2026

    ಬುಕ್ಕಾಪಟ್ಟಣದಲ್ಲಿ ಪ್ರಜಾಸೇವಾ ಆಂದೋಲನ ಸಭೆ: ತಹಶೀಲ್ದಾರ್ ಆನಂದ್ ಕುಮಾರ್ ವಿರುದ್ಧ ಎಂಎಲ್ಸಿ ಬೆಂಬಲಿಗರ ತೀವ್ರ ಆಕ್ರೋಶ

    September 20, 2026

    ನಾರಂಜಾ ಸಹಕಾರಿ ಸಕ್ಕರೆ ಕಾರ್ಖಾನೆ ಬಡ್ಡಿ ಮನ್ನಾ ಹಾಗೂ ಒಟಿಎಸ್ ಅವಕಾಶಕ್ಕೆ ಸೂರ್ಯಕಾಂತ್ ನಾಗಮಾರಪಳ್ಳಿ ಆಗ್ರಹ

    September 20, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.