nammatumakuru

    Subscribe to Updates

    Get the latest creative news from FooBar about art, design and business.

    What's Hot

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026
    Facebook Twitter Instagram
    ಟ್ರೆಂಡಿಂಗ್
    • ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ
    • ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ
    • ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ
    • ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ
    • ವರನಟ ಡಾ. ರಾಜ್‌ಕುಮಾರ್ ಸಮಾಧಿ ಬಗ್ಗೆ ಹೇಳಿಕೆ: ನಟ ಚೇತನ್ ವಿರುದ್ಧ ಪೊಲೀಸ್ ದೂರು
    • ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.
    • ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್
    • ಅಂಬೇಡ್ಕರ್ ರವರ ಚಿಂತನೆಗಳು ಸರ್ವಕಾಲಿಕ ಪ್ರಸ್ತುತ: ಚಾಮರಾಜನಗರ ವಿವಿಯ ಕುಲಪತಿ ಪ್ರೊ. ಬಿ.ಎಲ್. ಗಂಗಾಧರ್ ಅಭಿಮತ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಬಿಗಿ ಬಂದೋಬಸ್ತ್: ಪೊಲೀಸರಿಂದ ಪರೀಕ್ಷಾರ್ಥಿಗಳ ತಪಾಸಣೆ
    ತುಮಕೂರು October 27, 2024

    ಸ್ಪರ್ಧಾತ್ಮಕ ಪರೀಕ್ಷೆ ಹಿನ್ನೆಲೆ ಬಿಗಿ ಬಂದೋಬಸ್ತ್: ಪೊಲೀಸರಿಂದ ಪರೀಕ್ಷಾರ್ಥಿಗಳ ತಪಾಸಣೆ

    By adminOctober 27, 2024No Comments2 Mins Read
    shubha kalyan

    ತುಮಕೂರು: ನಗರದ 6 ಪರೀಕ್ಷಾ ಕೇಂದ್ರಗಳಲ್ಲಿ  ನಡೆಯುತ್ತಿರೋ   ಗ್ರಾಮ ಆಡಳಿತ ಅಧಿಕಾರಿ ಪ್ರವೇಶ ಪರೀಕ್ಷೆಗೆ 22,544 ಸೇರಿ ಒಟ್ಟು 25,216 ಪರೀಕ್ಷಾರ್ಥಿಗಳು ಪರೀಕ್ಷೆ ಬರೆಯುತ್ತಿದ್ದು, ಯಾವುದೇ ರೀತಿಯ ಅಕ್ರಮ ಚಟುವಟಿಕೆಗಳು ನಡೆಯದಂತೆ ಅವಕಾಶವಿದ್ದು, ಅಭ್ಯರ್ಥಿಗಳು ಪರೀಕ್ಷೆ ಬರೆಯಲು ಅನುವಾಗುವಂತೆ ಅಗತ್ಯ ಸಿದ್ಧತೆಗಳನ್ನು ಕೈಗೊಳ್ಳಬೇಕೆಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅಧಿಕಾರಿಗಳಿಗೆ ಸೂಚಿಸಿದರು.

    ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗುರುವಾರ ಜರುಗಿದ ಪೂರ್ವಭಾವಿ ಸಭೆಯ ಅಧ್ಯಕ್ಷತೆವಹಿಸಿ ಮಾತನಾಡಿದ ಅವರು, ಪರೀಕ್ಷಾರ್ಥಿಗಳಿಗೆ ಯಾವುದೇ ರೀತಿಯ ಅಡೆ ತಡೆ ಉಂಟಾಗದಂತೆ ಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶದಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಬೇಕು. ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾ ಮಟ್ಟದ ಹಾಗೂ ತಾಲ್ಲೂಕು ಮಟ್ಟದ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಪರೀಕ್ಷಾ ಕೇಂದ್ರಗಳಿಗೆ ಗೌಪ್ಯ ಸಾಮಗ್ರಿಗಳನ್ನು ವಿತರಿಸಲು ತಹಶೀಲ್ದಾರ್‌ ಗಳ ನೇತೃತ್ವದಲ್ಲಿ ತ್ರಿ–ಸದಸ್ಯ ಸಮಿತಿಯನ್ನು ನೇಮಕ ಮಾಡಲಾಗಿದ್ದು, ನಿಯೋಜಿತರು ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಣೆ ಮಾಡಬೇಕೆಂದು ನಿರ್ದೇಶನ ನೀಡಿದರು.


    Provided by
    Provided by

    ವಸ್ತ್ರಸಂಹಿತೆ ಪಾಲನೆಗೆ ಸೂಚನೆ:

    ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ಅಭ್ಯರ್ಥಿಯು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು.

    ಪರೀಕ್ಷಾರ್ಥಿಗಳು ಅರ್ಧ ತೋಳಿನ ಹಾಗೂ ಸಾಧ್ಯವಾದಷ್ಟು ಕಾಲರ್ ರಹಿತ ಅಂಗಿ, ಕಡಿಮೆ ಸಂಖ್ಯೆಯ ಜೇಬುಗಳಿರುವ ಪ್ಯಾಂಟ್ ಧರಿಸಬೇಕು. ಕುರ್ತಾ, ಪೈಜಾಮ, ಜೀನ್ಸ್ ಪ್ಯಾಂಟ್ ಧರಿಸುವಂತಿಲ್ಲ. ಪರೀಕ್ಷಾ ಕೊಠಡಿಯೊಳಗೆ ಶೂ, ಕಿವಿಯೋಲೆ, ಉಂಗುರ, ಕಡಗ ಸೇರಿದಂತೆ ಯಾವುದೇ ರೀತಿಯ ಲೋಹದ ಆಭರಣಗಳನ್ನು ಧರಿಸುವಂತಿಲ್ಲ. ಮಹಿಳಾ ಅಭ್ಯರ್ಥಿಗಳು ವಿಸ್ತಾರವಾದ ಕಸೂತಿ, ಹೂಗಳು, ಬ್ರೂಚ್ ಅಥವಾ ಬಟನ್‌ಗಳು ಹೊಂದಿರುವ ಬಟ್ಟೆಗಳನ್ನು ಧರಿಸುವಂತಿಲ್ಲ. ಮಂಗಳಸೂತ್ರ ಮತ್ತು ಕಾಲುಂಗುರ ಹೊರತುಪಡಿಸಿ ಇತರೆ ಲೋಹದ ಆಭರಣಗಳನ್ನೂ ಧರಿಸುವಂತಿಲ್ಲ ಎಂದು ತಿಳಿಸಿದರು.

    ಎಲೆಕ್ಟ್ರಾನಿಕ್ ವಸ್ತು, ಮೊಬೈಲ್ ಫೋನ್, ಪೆನ್ ಡ್ರೈವ್, ಇಯರ್ ಫೋನ್, ಮೈಕ್ರೋಫೋನ್, ಬ್ಲೂ ಟೂತ್ ಸಾಧನಗಳು ಮತ್ತು ಕೈ ಗಡಿಯಾರಗಳನ್ನು ಪರೀಕ್ಷಾ ಕೊಠಡಿಯೊಳಗೆ ತರುವಂತಿಲ್ಲ. ಪರೀಕ್ಷಾ ಕೇಂದ್ರದಲ್ಲಿಯೇ ಕುಡಿಯುವ ನೀರಿಗೆ ವ್ಯವಸ್ಥೆ ಕಲ್ಪಿಸುವುದರಿಂದ ಕುಡಿಯುವ ನೀರಿನ ಬಾಟಲಿಗೂ ಸಹ ಅನುಮತಿ ಇರುವುದಿಲ್ಲ ಎಂದು ತಿಳಿಸಿದರು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಡಾ.ಎನ್. ತಿಪ್ಪೇಸ್ವಾಮಿ, ಡಿವೈಎಸ್‌ ಪಿ ಮರಿಯಪ್ಪ, ವಿವಿಧ ತಹಶೀಲ್ದಾರ್‌ ಗಳು, ಜಿಲ್ಲಾ ಖಜಾನೆ ಉಪನಿರ್ದೇಶಕ ಉಮಾ, ಬೆಸ್ಕಾಂ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಶಾಂತ್ ಕೂಡ್ಲಿಗಿ, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ಮಾರ್ಗಾಧಿಕಾರಿಗಳು, ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದ ತ್ರಿಸದಸ್ಯ ಸಮಿತಿ ಸದಸ್ಯರು, ಕ್ಷೇತ್ರ ಶಿಕ್ಷಣಾಧಿಕಾರಿಗಳು ಸೇರಿದಂತೆ ಮತ್ತಿತರ ಜಿಲ್ಲಾ/ತಾಲ್ಲೂಕು ಮಟ್ಟದ ಅಧಿಕಾರಿಗಳು ಹಾಜರಿದ್ದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಡಾ.ಬಿ.ಆರ್.ಅಂಬೇಡ್ಕರ್ ವಿಶ್ವಕ್ಕೆ ಮಾರ್ಗದರ್ಶಕರು: ಡಾ.ಅಶ್ವಿನಿ ಕೆ.ಪಿ.

    April 25, 2026

    ಮಾಜಿ ಶಾಸಕ ರಫೀಕ್ ಅಹಮದ್ ಅವರ ತಾಯಿ ನಿಧನ: ಅಂತಿಮ ದರ್ಶನ ಪಡೆದು ಶ್ರದ್ಧಾಂಜಲಿ ಸಲ್ಲಿಸಿದ ಸಚಿವ ಜಿ.ಪರಮೇಶ್ವರ್

    April 25, 2026

    Comments are closed.

    Our Picks

    ಸಂವಿಧಾನ ಮುಗಿಸುವುದೇ ಆರ್‌ ಎಸ್‌ ಎಸ್–ಬಿಜೆಪಿ ಉದ್ದೇಶ: ರಾಹುಲ್ ಗಾಂಧಿ ತೀವ್ರ ವಾಗ್ದಾಳಿ

    April 12, 2026

    ಗಾನ ಕೋಗಿಲೆ ಆಶಾ ಭೋಂಸ್ಲೆ ನಿಧನ: ಸಪ್ತ ದಶಕಗಳ ಗಾಯನ ಪಯಣ ಅಂತ್ಯ

    April 12, 2026

    ಎಲ್‌ ಪಿಜಿ ಸಂಕಷ್ಟ: ವಿದೇಶಾಂಗ ನೀತಿ ಬದಲಿಸಿ ಬೇರೆ ದೇಶಗಳಿಂದ ಅನಿಲ ಆಮದು ಮಾಡಿಕೊಳ್ಳಿ: ಕೇಂದ್ರಕ್ಕೆ ಮಲ್ಲಿಕಾರ್ಜುನ ಖರ್ಗೆ ಆಗ್ರಹ

    April 5, 2026

    ವರ್ಷಾಂತ್ಯಕ್ಕೆ ಮೋದಿ ಆಡಳಿತ ಅಂತ್ಯ: ಅರವಿಂದ ಕೇಜ್ರಿವಾಲ್ ಭವಿಷ್ಯ

    March 24, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಕೊರಟಗೆರೆ

    ಶಿಕ್ಷಣ ಜೀವನವನ್ನು ರೂಪಿಸುವ ಶಕ್ತಿ: ಶಿವರುದ್ರ ಮಹಾ ಸ್ವಾಮೀಜಿ

    April 26, 2026

    ಕೊರಟಗೆರೆ: ಶಿಕ್ಷಣವೇ ಜೀವನವನ್ನು ರೂಪಿಸುವ ಶಕ್ತಿಯಾಗಿದೆ. ವಿದ್ಯೆಯಿಂದ ವ್ಯಕ್ತಿಯ ಚಿಂತನೆ, ನಡೆ–ನುಡಿ ಎಲ್ಲವೂ ಬದಲಾಗುತ್ತದೆ. ಆದ್ದರಿಂದ ನಾವು ಶಿಕ್ಷಣ ಪಡೆದವರಾಗಿಯೂ,…

    ನಶಾ ಮುಕ್ತ ಭಾರತಕ್ಕೆ ತುಮಕೂರಿನಲ್ಲಿ ಚಾಲನೆ: ಯುವಜನತೆಗೆ ದೈಹಿಕ ಸ್ವಾಸ್ಥ್ಯದ ಕರೆ ನೀಡಿದ ಸಚಿವ ವಿ.ಸೋಮಣ್ಣ

    April 25, 2026

    ಮೊಬೈಲ್  ನೋಡಬೇಡ ಎಂದಿದ್ದಕ್ಕೆ ಹುಬ್ಬಳ್ಳಿಯಲ್ಲಿ 14 ವರ್ಷದ ಬಾಲಕ ಆತ್ಮಹತ್ಯೆ

    April 25, 2026

    ಯೋಗೇಶ್ ಗೌಡ ಕೊಲೆ ಕೇಸ್: ಜೀವಾವಧಿ ಶಿಕ್ಷೆ ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ ವಿನಯ್ ಕುಲಕರ್ಣಿ

    April 25, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.