ಬೆಂಗಳೂರು: ಮುಡಾ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಪತ್ನಿ ಪಾರ್ವತಿ, ಅವರ ಸೋದರ ಮಲ್ಲಿಕಾರ್ಜುನ ಮತ್ತು ಜಮೀನು ಮಾಲೀಕ ದೇವರಾಜು ವಿರುದ್ಧ ದಾಖಲಾದ ಪ್ರಕರಣವನ್ನು ತಾನೇ ವಾದಿಸಲು ದೂರುದಾರ ಸ್ನೇಹಮಯಿ ಕೃಷ್ಣ ಸಿದ್ಧತೆ ನಡೆದಿದ್ದಾರೆ.
ಮುಡಾ 50:50 ಹಗರಣ ವಿಚಾರವಾಗಿ ಇದೀಗ ಸ್ನೇಹಮಯಿ ಕೃಷ್ಣ ಅವರು ಸಿಎಂ ಸಿದ್ದರಾಮಯ್ಯ ವಿರುದ್ಧ ವಾದ ಮಂಡಿಸಲು ವಿಶೇಷ ನ್ಯಾಯಾಲಯ ಅನುಮತಿ ನೀಡಿದೆ.
ತನಿಖೆಯ ಬಗ್ಗೆ ಅಗತ್ಯ ದಾಖಲೆಗಳನ್ನು ಮತ್ತು ಅಂತಿಮ ವರದಿಯನ್ನು ಮಾರ್ಚ್ 1, 2025 ರೊಳಗೆ ಕೃಷ್ಣ ಅವರಿಗೆ ಸಲ್ಲಿಸುವಂತೆ ನ್ಯಾಯಾಲಯ ಸೋಮವಾರ ಲೋಕಾಯುಕ್ತ ಪೊಲೀಸರಿಗೆ ನಿರ್ದೇಶನ ನೀಡಿದೆ.
ಲೋಕಾಯುಕ್ತ ಪೊಲೀಸರು ಇತ್ತೀಚೆಗೆ ನ್ಯಾಯಾಲಯಕ್ಕೆ ಬಿ ರಿಪೋರ್ಟ್ ಸಲ್ಲಿಸಿದ್ದರು. ಈ ನಡೆ ಬಗ್ಗೆ ದೂರುದಾರ ಸ್ನೇಹಮಯಿ ಕೃಷ್ಣ ತೀವ್ರ ಬೇಸರ ವ್ಯಕ್ತಪಡಿಸಿದ್ದರು. ತನಿಖಾ ಸಂಸ್ಥೆ ಪ್ರಭಾವಕ್ಕೆ ಒಳಗಾಗಿ ಈ ನಿರ್ಧಾರ ತೆಗೆದುಕೊಂಡಿದೆ ಎಂದು ಆರೋಪಿಸಿದ್ದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4