ಕನಕಪುರ: ಅಂಗನವಾಡಿ ಸಹಾಯಕಿಯೊಬ್ಬಳು ಎರಡೂವರೆ ವರ್ಷದ ಮಗುವಿನ ಮೇಲೆ ಕ್ರೌರ್ಯ ಮೆರೆದಿರುವ ಘಟನೆ ನಗರದ ಮಹಾರಾಜರಕಟ್ಟೆಯ ಅಂಗನವಾಡಿ ಕೇಂದ್ರದಲ್ಲಿ ನಡೆದಿದೆ.
ಜ್ಯೋತಿ ಮತ್ತು ರಮೇಶ್ ನಾಯ್ಕ್ ಅವರ ಮಗ ದೀಕ್ಷಿತ್ (2.5) ಸಂತ್ರಸ್ತ ಬಾಲಕನಾಗಿದ್ದಾನೆ. ಘಟನೆ ಸಂಬಂಧ ನಗರ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
ಮಗುವಿನ ಮೇಲೆ ಅಂಗನವಾಡಿ ಕಾರ್ಯಕರ್ತೆ ಕೈ ಮೇಲೆ ಕಾದ ಚಾಕುವಿನಿಂದ ಬರೆ ಹಾಕಿದ್ದಲ್ಲದೆ ಡೈಪರ್ ಗೆ ಖಾರದಪುಡಿ ಹಾಕಿದ್ದಾಳೆ. ಅಂಗನವಾಡಿ ಮುಗಿದ ಮೇಲೆ ಮಗನನ್ನು ಕರೆ ತರಲು ತಾಯಿ ಚೈತ್ರಬಾಯಿ ಅಂಗನವಾಡಿಗೆ ತೆರಳಿದ್ದು, ಈ ವೇಳೆ ಮಗು ಅಳುತ್ತಿರುವುದು ಕಂಡು ಗಮನಿಸಿದಾಗ ಕೈ ಮೇಲೆ ಬರೆ ಹಾಕಿರುವುದು ಹಾಗೂ ಡೈಪರ್‌ಗೆ ಖಾರದಪುಡಿ ತುಂಬಿರುವುದು ಕಂಡು ಬಂದಿದೆ ದೂರಿನಲ್ಲಿ ತಿಳಿಸಲಾಗಿದೆ.
ಅಂಗನವಾಡಿ ಸಹಾಯಕಿ ಮೇಲೆ ಶಿಸ್ತು ಕ್ರಮಕೈಗೊಳ್ಳುವಂತೆ ಮೇಲಧಿಕಾರಿಗೆ ಪತ್ರ ಬರೆಯಲಾಗಿದೆ ಎಂದು ಸಿಡಿಪಿಒ ವಿ.ನಾರಾಯಣ್ ತಿಳಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4