ಬೀದರ್: ಔರಾದ್ ತಾಲ್ಲೂಕು ಆರೋಗ್ಯ ಅಧಿಕಾರಿ ವಿರುದ್ಧದ ದೂರಿನ ಕುರಿತು ಅಗತ್ಯ ಕ್ರಮ ಕೈಗೊಳ್ಳುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವರು ಸೂಚಿಸಿದ್ದಾರೆ.
ಸಚಿವರ ಸೂಚನೆ ಮೇರೆಗೆ ಅವರ ಆಪ್ತ ಕಾರ್ಯದರ್ಶಿ ಕೆ.ಎ.ಹಿದಾಯತ್ತುಲ್ಲ ಈ ಕುರಿತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಆಯುಕ್ತರಿಗೆ ಪತ್ರ ಬರೆದಿದ್ದಾರೆ ಎಂದು ಔರಾದ್‍ನ ಸುಭಾಷ್ ಚಂದ್ರ ಬೋಸ್ ಯುವಕ ಸಂಘದ ಅಧ್ಯಕ್ಷ ರತ್ನದೀಪ್ ಕಸ್ತೂರೆ ಹಾಗೂ ಎ. ಐ. ಸಿ. ಸಿ ರಾಷ್ಟ್ರೀಯ ಕಿಸಾನ್ ಸೆಲನ್ ಜಂಟಿ ಸಂಯೋಜಕರಾದ ಜಾನಸನ್ ಘೋಡೆ ತಿಳಿಸಿದ್ದಾರೆ.
ತಾಲ್ಲೂಕು ಆರೋಗ್ಯ ಅಧಿಕಾರಿ ಡಾ.ಗಾಯತ್ರಿದೇವಿ ಅವರು 18 ವರ್ಷಗಳಿಂದ ಒಂದೇ ಸ್ಥಳದಲ್ಲಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಇತರ ಹುದ್ದೆಗಳ ಪ್ರಭಾರ ಹೊಂದಿದ್ದಾರೆ. ಸರ್ಕಾರಿ ಆಸ್ಪತ್ರೆಯಲ್ಲೇ ಖಾಸಗಿ ಆಸ್ಪತ್ರೆ ನಡೆಸುತ್ತಿದ್ದಾರೆ. ನಿಯಮ ಉಲ್ಲಂಘನೆ ಹಿನ್ನೆಲೆಯಲ್ಲಿ ಅವರನ್ನು ಬೇರೆ ಜಿಲ್ಲೆಗೆ ವರ್ಗಾವಣೆ ಮಾಡಬೇಕು ಎಂದು ರತ್ನದೀಪ ಕಸ್ತೂರೆ ಹಾಗೂ ಜಾನಸನ್ ಘೋಡೆ ಅವರು ಬುಧವಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡುರಾವ್ ಅವರಿಗೆ ಮನವಿ ಪತ್ರ ಸಲ್ಲಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC