ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಮಾಡಿದ್ದ ಹಿನ್ನೆಲೆಯಲ್ಲಿ ನಟ ಚೇತನ್ ಅಹಿಂಸಾ ವಿರುದ್ಧ ಬೆಂಗಳೂರಿನ ಶೇಷಾದ್ರಿಪುರಂ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ನಟ ಚೇತನ್ ಫೇಸ್ ಬುಕ್ ನಲ್ಲಿ ಕೆಂಪೇಗೌಡರ ಬಗ್ಗೆ ಅವಹೇಳನಕಾರಿ ಪೋಸ್ಟ್ ಹಾಕಿ ಅಗೌರವ ತೋರಿದ್ದಾರೆ ಎಂದು ವಕೀಲ ಆರ್.ಎಲ್. ಎನ್ ಮೂರ್ತಿ ದೂರು ನೀಡಿದ್ದಾರೆ.
ಕೆಂಪೇಗೌಡ ಊಳಿಗಮಾನ್ಯ ಜಾತಿ ಲಾಬಿಗಳ ಪ್ರಭಾವದಿಂದಾಗಿ ಈಗ ಪ್ರಮುಖ ಕರ್ನಾಟಕದ ಐಕಾನ್ ಆಗಿರುವ ಅತ್ಯಲ್ಪ ಐತಿಹಾಸಿಕ ವ್ಯಕ್ತಿ ಎಂದು ಪೋಸ್ಟ್ ಮಾಡಿದ್ದರು.


