ಮಾಜಿ ಕೇಂದ್ರ ಸಚಿವ, ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಕಾಂಗ್ರೆಸ್ ನಾಯಕರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಾಗೂ ಪ್ರಚೋದನಕಾರಿ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ, ಅವರ ವಿರುದ್ಧ ಕ್ರಮ ಜರುಗಿಸಬೇಕೆಂದು ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಸ್. ಮನೋಹರ್ ಅವರು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಅಲೋಕ್ ಮೋಹನ್ ಅವರಿಗೆ ದೂರು ಸಲ್ಲಿಸಿದ್ದಾರೆ.
ಬಸನಗೌಡ ಪಾಟೀಲ್ ಯತ್ನಾಳ್ ಅವರು ರಾಹುಲ್ ಗಾಂಧಿ ವಿರುದ್ಧ ಅತ್ಯಂತ ಕೀಳು ಪದ ಬಳಸಿ ಅಪಮಾನ ಮಾಡಿದ್ದಾರೆ ಎಂದು ತಿಳಿಸಿದ್ದಾರೆ.


