ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಬಾಲಿವುಡ್ ನ ಖ್ಯಾತ ಗಾಯಕ, ನಟ ಲಕ್ಕಿ ಅಲಿ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.
ಬೆಂಗಳೂರಿನ ನ್ಯೂ ಯಲಹಂಕ ಟೌನ್ ಬಳಿ ಇರುವ ಟ್ರಸ್ಟ್ ಒಂದಕ್ಕೆ ಸೇರಿರುವ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿ ಗಾಯಕ ಲಕ್ಕಿ ಅಲಿ ದೂರು ನೀಡಿದ್ದಾರೆ ಎನ್ನಲಾಗಿದೆ.
ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಅವರ ಪತಿ ಸುಧೀರ್ ರೆಡ್ಡಿ ಹಾಗೂ ಮಧುಸೂಧನ ರೆಡ್ಡಿ ವಿರುದ್ಧ ದೂರು ನೀಡಿದ್ದಾರೆ. ಜೊತೆಗೆ ಸಲ್ಲಿಸಿರುವ ದೂರಿನ ಪ್ರತಿಯನ್ನು ಎಕ್ಸ್ ನಲ್ಲಿ ಖ್ಯಾತ ಗಾಯಕ ಲಕ್ಕಿ ಆಲಿ ಅವರು ಪೋಸ್ಟ್ ಮಾಡಿದ್ದಾರೆ.
ಯಲಹಂಕ ನ್ಯೂ ಟೌನ್ ವ್ಯಾಪ್ತಿಯಲ್ಲಿರುವ ತಮ್ಮ ಟ್ರಸ್ಟ್ ಗೆ ಸಂಬಂಧಿಸಿದ ಭೂಮಿಯನ್ನು ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ, ಮಧುಸೂಧನ ಅವರು ಒತ್ತುವರಿ ಮಾಡಿಕೊಂಡಿದ್ದಾರೆ ಎಂದು ಆರೋಪಿಸಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296
ಯೂಟ್ಯೂಬ್ ಚಾನೆಲ್ Subscribe ಮಾಡಿ: https://www.youtube.com/channel/UCtrQuDOToxHu8dzMaHjoYXA


