nammatumakuru

    Subscribe to Updates

    Get the latest creative news from FooBar about art, design and business.

    What's Hot

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026
    Facebook Twitter Instagram
    ಟ್ರೆಂಡಿಂಗ್
    • ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ
    • ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!
    • ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ
    • ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ
    • ಕಳಚಿತು ಸ್ಟಾರ್ ಹೊಟೇಲ್ ಗಳ ಮುಖವಾಡ: ಕೊಳೆತ ಮಾಂಸ, ಬೂಸ್ಟ್ ಹಿಡಿದ ತರಕಾರಿ, ವಿಷ ಎಣ್ಣೆ ಪತ್ತೆ
    • ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’
    • ಬೆಳಕುಣಿ (ಚೌದ್ರಿ)–ಮುಂಗನಾಳ ರಸ್ತೆ ಹದಗೆಟ್ಟು ಸಂಚಾರಕ್ಕೆ ಸಂಚಕಾರ: ತಕ್ಷಣ ದುರಸ್ತಿಗೆ ಜೀವನ್ ಮಾಳೆಗೆ ಆಗ್ರಹ
    • ಕೇಂದ್ರ ಶಿಕ್ಷಣ ಸಚಿವ ಪ್ರಹ್ಲಾದ್ ಜೋಶಿ ಸಹೋದರ ಗೋಪಾಲ್ ಜೋಶಿ ವಿರುದ್ಧ ಲೈಂಗಿಕ ಕಿರುಕುಳ ಆರೋಪ: FIR ದಾಖಲು
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಮಾನವತೆಗೆ ಪೂರಕ ವೈಜ್ಞಾನಿಕ ಪ್ರಗತಿ ಇಂದಿನ ಅಗತ್ಯ: ರಾಜೇಶ್ ಪದ್ಮಾರ್
    ತಿಪಟೂರು August 22, 2024

    ಮಾನವತೆಗೆ ಪೂರಕ ವೈಜ್ಞಾನಿಕ ಪ್ರಗತಿ ಇಂದಿನ ಅಗತ್ಯ: ರಾಜೇಶ್ ಪದ್ಮಾರ್

    By adminAugust 22, 2024No Comments2 Mins Read
    tipaturu

    ತಿಪಟೂರು: ಸರ್ಕಾರಿ ಬಾಲಕರ ಪದವಿಪೂರ್ವ ಕಾಲೇಜಿನ ನೂತನ ಸೈನ್ಸ್ ಕ್ಲಬ್ ಮತ್ತು ಇಕೋ ಕ್ಲಬ್ ನ ಉದ್ಘಾಟನಾ ಕಾರ್ಯಕ್ರಮವನ್ನು ಗಿಡಕ್ಕೆ ನೀರೆರೆಯುವ ಮೂಲಕ ಚಾಲನೆ ನೀಡಲಾಯಿತು. ನಂತರ ಕಾಲೇಜು ಆವರಣದಲ್ಲಿ 10 ಗಿಡಗಳನ್ನು ಹಸಿರುಪಡೆ ವತಿಯಿಂದ ನೆಡಲಾಯಿತು. ಸೈನ್ಸ್ ಕ್ಲಬ್ ವತಿಯಿಂದ ಸೈನ್ಸ್ ರಂಗೋಲಿ ಸ್ಪರ್ಧೆ ಹಾಗೂ ಪೋಸ್ಟರ್ ಡ್ರಾಯಿಂಗ್ ಸ್ಪರ್ಧೆ ಏರ್ಪಡಿಸಲಾಗಿತ್ತು. ನೂರಾರು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪ್ರಾಚಾರ್ಯರಾದ ಎಂ.ಡಿ.ಶಿವಕುಮಾರ್ ರವರು ವಹಿಸಿದ್ದರು, ಮುಖ್ಯ ಅತಿಥಿಗಳಾಗಿ ರಾಜೇಶ್ ಪದ್ಮಾರ್ ರವರು ಆಗಮಿಸಿದ್ದರು. ಸೈನ್ಸ್ ಕ್ಲಬ್ ಕಾರ್ಯದರ್ಶಿಯಾದ ಡಾ. ಲೋಕೇಶ್ ಕೆ ಮತ್ತು ಸಹ ಕಾರ್ಯದರ್ಶಿ ಮಂಜುನಾಥ ಪಿ. ಎನ್. ರವರು ಎಲ್ಲರಿಗೂ ಸೈನ್ಸ್ ಕ್ಲಬ್ ನ ಪ್ರತಿಜ್ಞಾ ವಿಧಿ ಬೋಧಿಸಿದರು.

    ವಿದ್ಯಾರ್ಥಿಗಳು ವೈಜ್ಞಾನಿಕ ಮನೋಭಾವ ರೂಢಿಸುವುದರ ಜತೆಗೆ, ಮಾನವೀಯ ಸಂವೇದನೆಗಳನ್ನು ಅರ್ಥೈಸಿಕೊಂಡು ಪರಿಸರಪೂರಕ ಮಾದರಿಯಲ್ಲಿ ವೈಜ್ಞಾನಿಕ ಕ್ಷೇತ್ರದಲ್ಲಿ ಕಾರ್ಯಪ್ರವೃತ್ತರಾಗಬೇಕಿದೆ ಎಂದು ಉಪನ್ಯಾಸಕ ರಾಜೇಶ್ ಪದ್ಮಾರ್ ತಿಳಿಸಿದ್ದಾರೆ.

    ಭಾರತದಲ್ಲಿ ಪ್ರಾಚೀನ ಕಾಲದಿಂದಲೂ ವೈಜ್ಞಾನಿಕ ಸಾಧನೆಗಳು ಹೇರಳವಾಗಿತ್ತು. ಲೋಹಶಾಸ್ತ್ರದ ಸಂಶೋಧನೆಗಳಿಂದ ಪ್ರಾರಂಭಿಸಿ ಸುಶ್ರುತನ ಶಸ್ತ್ರಚಿಕಿತ್ಸೆಯ ಪ್ರಕಾರಗಳವರೆಗೆ ವಿಸ್ತೃತವಾಗಿ ವಿಜ್ಞಾನದ ಶಾಖೆಗಳು ಬೆಳೆದಿತ್ತು. ಪರಕೀಯರ ಆಕ್ರಮಣದ ತರುವಾಯ ಕುಂಠಿತಗೊಂಡ ವೈಜ್ಞಾನಿಕ ಆವಿಷ್ಕಾರಗಳು ಇದೀಗ ಸ್ವಾತಂತ್ರ್ಯೋತ್ತರ ಭಾರತದಲ್ಲಿ ಕ್ರಮೇಣ ವಿಕಸಿತಗೊಂಡಿವೆ. ಬಾಹ್ಯಕಾಶ ಕ್ಷೇತ್ರ, ಜೈವಿಕ ತಂತ್ರಜ್ಞಾನ ಕ್ಷೇತ್ರಗಳಲ್ಲಿ ಭಾರತೀಯರ ಸಾಧನೆ ಜಗತ್ತಿನ ಗಮನ ಸೆಳೆದಿವೆ. ವಿದ್ಯಾರ್ಥಿಗಳು ವೈಜ್ಞಾನಿಕ ಚಿಂತನೆ, ಸಂಶೋಧನಾ ಪ್ರವೃತ್ತಿ, ನಿತ್ಯಬದುಕಿನ ವಿಜ್ಞಾನದ ಬೆಳವಣಿಗೆಗಳ ಕುರಿತು ಕುತೂಹಲ, ನೈತಿಕ ಹಾಗೂ ಮನುಕುಲದ ಶಾಂತಿಗೆ ಪೂರಕವಾಗಿ ವಿಜ್ಞಾನ ಕ್ಷೇತ್ರದಲ್ಲಿ ನೂತನ ಸಾಧನೆಗಳನ್ನು ಮಾಡಬೇಕಿದೆ ಎಂದು ಅಭಿಪ್ರಾಯಪಟ್ಟರು.

    ಭಾರತೀಯ ದೃಷ್ಟಿಕೋನದಲ್ಲಿ ವೈಜ್ಞಾನಿಕ  ಪ್ರಗತಿಗಳೆಲ್ಲವೂ ಪ್ರಕೃತಿಗೆ ಪೂರಕವಾಗಿರಬೇಕು ಎಂಬುದು ಅನೇಕ ಸುಭಾಷಿತಗಳಲ್ಲಿ ವ್ಯಕ್ತಪಡಿಸಲಾಗಿದೆ. ಗಿಡವೊಂದನ್ನು ನೆಡುವುದು, ನೀರಿನ ಸಂರಕ್ಷಣೆ, ಪ್ಲಾಸ್ಟಿಕ್ ಕಡಿಮೆ ಬಳಕೆ ಎಲ್ಲರ ಕರ್ತವ್ಯವಾಗಬೇಕು ಎಂದು ರಾಜೇಶ್ ಪದ್ಮಾರ್ ತಿಳಿಸಿದರು.

    ಸೈನ್ಸ್ ಕ್ಲಬ್ ಅಧ್ಯಕ್ಷರಾದ ಎಂ ಡಿ ಶಿವಕುಮಾರ್ ರವರು ಪರಿಸರದ ಬಗ್ಗೆ ಕಾಳಜಿ ವಹಿಸುವಂತೆ ಹಾಗೂ ವಿಜ್ಞಾನಕ್ಕೆ ಸಂಬಂಧಿಸಿದ ಸ್ಪರ್ಧೆಗಳಲ್ಲಿ ಹೆಚ್ಚಾಗಿ ಭಾಗವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ಕೊಟ್ಟರು.

    ಪೋಸ್ಟರ್ ಸ್ಪರ್ಧೆಯಲ್ಲಿ  ಅನುಷಾ, ಮಾನಸ ಆರ್., ಉಮೆಹಾ  ಎಂಬ ವಿದ್ಯಾರ್ಥಿಗಳು ವಿಜೇತರಾದರು. ಸೈನ್ಸ್ ರಂಗೋಲಿ ಸ್ಪರ್ಧೆ ಯಲ್ಲಿ ಚಿನ್ಮಯಿ ಎಚ್.ಬಿ., ಮೇಘನಾ, ಗಗನಾ, ಭೈರವಿ ಮತ್ತು ಮಧುಶ್ರೀ ಎಂಬ ವಿದ್ಯಾರ್ಥಿಗಳು ವಿಜೇತರಾದರು. ಸೈನ್ಸ್ ಕ್ಲಬ್ ವತಿಯಿಂದ ವಿದ್ಯಾರ್ಥಿಗಳಿಗೆ ಬಹುಮಾನ ನೀಡಲಾಯಿತು.

    ಕಾಲೇಜಿನ ಪ್ರಾಚಾರ್ಯರಾದ ಎಂ.ಡಿ.ಶಿವಕುಮಾರ್, ಹಿರಿಯ ಉಪನ್ಯಾಸಕರಾದ ಸಚ್ಚಿದಾನಂದ ಮೂರ್ತಿ, ಸೈನ್ಸ್ ಕ್ಲಬ್ ಕಾರ್ಯದರ್ಶಿ ಡಾ.ಲೋಕೇಶ್ ಕೆ., ಸಹ ಕಾರ್ಯದರ್ಶಿ ಮಂಜುನಾಥ ಪಿ.ಎನ್.,  ಉಪನ್ಯಾಸಕರಾದ ರೇಣುಕಾ ಪ್ರಸಾದ್, ಹರ್ಷ ಕುಮಾರ್, ನೌಶಿನಾ ತರುನ್ನುಂ, ಕುಸುಮ, ಪನ್ನಗ, ಸಿಂದುಜಾ ಹಾಗೂ ಮತ್ತಿತರು ಉಪಸ್ಥಿತರಿದ್ದರು.

    ವರದಿ: ಆನಂದ್,  ತಿಪಟೂರು


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q

    admin
    • Website

    Related Posts

    ಸಾರ್ಥವಳ್ಳಿಯ ಗಂಗಾಧರ್ ಕುಟುಂಬಕ್ಕೆ ಆಸರೆಯಾದ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ

    August 10, 2026

    ಆಗಸ್ಟ್ 9ರಂದು ತಿಪಟೂರಿನಲ್ಲಿ ಪ್ರಥಮ ಬಾರಿಗೆ ರಾಜ್ಯಮಟ್ಟದ ಯೋಗ ಚಾಂಪಿಯನ್ಷಿಪ್ ಸ್ಪರ್ಧೆ

    August 8, 2026

    ಶೆಟ್ಟಿಹಳ್ಳಿ ಹಾಲು ಉತ್ಪಾದಕರ ಸಂಘದ ಕಟ್ಟಡ ನಿರ್ಮಾಣಕ್ಕೆ ಶ್ರೀ ಕ್ಷೇತ್ರದಿಂದ ₹2 ಲಕ್ಷ ಧನಸಹಾಯ

    August 6, 2026

    Comments are closed.

    Our Picks

    ಇತಿಹಾಸದಲ್ಲೇ ಪ್ರಥಮ: 80ನೇ ಸ್ವಾತಂತ್ರ್ಯ ದಿನಾಚರಣೆಯಂದು ಕೆಂಪುಕೋಟೆಯ ಮೇಲೆ ಮೊಳಗಲಿದೆ ‘ವಂದೇ ಮಾತರಂ’

    August 11, 2026

    ನಕಲಿ ಐಡಿ ಬಳಸಿ 25 ಮಹಿಳೆಯರ ಮದುವೆ: ‘ವಂಚಕನಿಗೆ ಮಗಳನ್ನು ಕೊಟ್ಟು ಮೋಸಹೋದೆ’ ಎಂದ ಬಿಜೆಪಿ ಶಾಸಕ!

    August 9, 2026

    ಬಾಲಕಿಯನ್ನು ಪ್ರೇಮದ ಬಲೆಗೆ ಬೀಳಿಸಿ ವೇಶ್ಯಾವಾಟಿಕೆಗೆ ಮಾರಿದ ಪಾಪಿ: ಬಾಲಕಿಯ ರಕ್ಷಣೆ, ಇಬ್ಬರ ಬಂಧನ

    August 9, 2026

    36 ಕೋಟಿ ರೂಪಾಯಿಯಿಂದ 180 ಕೋಟಿ ರೂ.ಗೆ  ಹೆಚ್ಚಳವಾದ ಪ್ರಧಾನಿ ಮೋದಿ ವಿದೇಶ ಪ್ರವಾಸ ಖರ್ಚು ವೆಚ್ಚ!

    August 8, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ಜಿಲ್ಲಾ ಸುದ್ದಿ

    ಜಿಲೆಟಿನ್ ಕಡ್ಡಿ ಕಟ್ಟಿಕೊಂಡು ಸ್ಫೋಟಿಸಿಕೊಂಡ ವ್ಯಕ್ತಿ — ತಂದೆ, ಮಗಳು ದಾರುಣ ಸಾವು; ನಾಲ್ವರಿಗೆ ಗಂಭೀರ ಗಾಯ

    August 11, 2026

    ಕಲಬುರಗಿ: ಕೌಟುಂಬಿಕ ಕಲಹದಿಂದ ಬೇಸತ್ತ ವ್ಯಕ್ತಿಯೊಬ್ಬ ತನ್ನ ದೇಹಕ್ಕೆ ಜಿಲೆಟಿನ್ ಕಡ್ಡಿಗಳನ್ನು ಕಟ್ಟಿಕೊಂಡು ಸ್ಫೋಟಿಸಿಕೊಂಡ ಪರಿಣಾಮ ತಂದೆ ಹಾಗೂ ಪುತ್ರಿ…

    ಬೆಂಗಳೂರು ಮತದಾರರ ಪಟ್ಟಿಯಿಂದ ನಟ ಪ್ರಕಾಶ್ ರಾಜ್ ಹೆಸರು ಔಟ್!

    August 11, 2026

    ಬರದ ಮುನ್ಸೂಚನೆ; ಮುನ್ನೆಚ್ಚರಿಕೆ ವಹಿಸಲು ಡಾ. ಜಿ. ಪರಮೇಶ್ವರ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ

    August 11, 2026

    ಹೀಗೂ ಉಂಟೆ | ಹತ್ತಿಯಲ್ಲೇ ಮೊಳಕೆ ಬಂದ ಮರಿಗಿಡಗಳು, ಮರ ಅಣಬೆ

    August 11, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.