ಬೆಂಗಳೂರು: ಭ್ರಷ್ಟ ಕಾಂಗ್ರೆಸ್‍ಮುಕ್ತ ಭಾರತ ಮಾಡಲು ವಿಜಯ ಸಂಕಲ್ಪ ಯಾತ್ರೆ ಕೈಗೊಳ್ಳಲಾಗಿದೆ. ಈ ಯಾತ್ರೆಯು ಬಿಜೆಪಿ ಜಯಭೇರಿಗೆ ಸಹಾಯಕ ಎಂದು ರಾಜ್ಯದ ಸಚಿವ ಗೋವಿಂದ ಕಾರಜೋಳ ಅವರು ಅಭಿಪ್ರಾಯಪಟ್ಟರು.
ಗೋಕಾಕ ನಗರದಲ್ಲಿ ಇಂದು ವಿಜಯ ಸಂಕಲ್ಪ ಯಾತ್ರೆ ಸಂಬಂಧಿಸಿದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದ ಅಸೆಂಬ್ಲಿ ಚುನಾವಣೆಯಲ್ಲಿ 150ಕ್ಕೂ ಹೆಚ್ಚು ಶಾಸಕ ಸ್ಥಾನ ಗೆಲ್ಲುವ ಮೂಲಕ ಮತ್ತೊಮ್ಮೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ರಚನೆ ಆಗಲಿದೆ ಎಂದು ನುಡಿದರು.
ಪತ್ರಿಕಾಗೋಷ್ಠಿಯಲ್ಲಿ ಶಾಸಕ ರಮೇಶ್ ಜಾರಕಿಹೊಳಿ, ಜಿಲ್ಲಾ ಅಧ್ಯಕ್ಷ ಸಂಜಯ ಪಾಟೀಲ, ಯಾತ್ರೆಯ ಸಂಚಾಲಕ ಅರುಣ ಶಾಹಾಪೂರ, ಸಹ ಸಂಚಾಲಕರಾದ ವೀವೆಕಾನಂದ ಡಬ್ಬಿ, ಡಾ.ಮಲ್ಲಿಕಾರ್ಜುನ ಬಾಳಿಕಾಯಿ, ಮಂಡಲ ಅಧ್ಯಕ್ಷರಾದ ಭಿಮಸಿ ಭರಮಣ್ಣವರ, ರಾಜೇಂದ್ರ ಗೌಡಪ್ಪಗೊಳ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸುಭಾμï ಪಾಟೀಲ, ಖಜಾಂಚಿ ಮಲ್ಲಿಕಾರ್ಜುನ ಮಾದಮ್ಮನವರ ಇದ್ದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


