ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ 4ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಏಳು ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಿಸಿದೆ.
ನಿನ್ನೆಯಷ್ಟೇ ಬಿಜೆಪಿ ತೊರೆದು ಕಾಂಗ್ರೆಸ್ ಸೇರಿದ್ದ ಜಗದೀಶ್ ಶೆಟ್ಟರ್‌ಗೆ ಪಕ್ಷ ಸೇರಿದ ಕೆಲವೇ ಗಂಟೆಗಳಲ್ಲಿ ಬಿ ಫಾರಂ ನೀಡಲಾಗಿತ್ತು. ಅದರಂತೆ 4ನೇ ಪಟ್ಟಿಯಲ್ಲಿ ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಕ್ಷೇತ್ರದಿಂದ ಶೆಟ್ಟರ್‌ಗೆ ಟಿಕೆಟ್ ನೀಡಿದೆ.
ಲಿಂಗಸೂಗುರು ಕ್ಷೇತ್ರದಿಂದ ಹಾಲಿ ಶಾಸಕ ದುರ್ಗಪ್ಪ ಎಸ್ ಹುಲಗೇರಿ, ಚಿಕ್ಕಮಗಳೂರು – ಹೆಚ್.ಡಿ ತಮ್ಮಯ್ಯ, ಶ್ರವಣಬೆಳಗೊಳ – ಎಂ.ಎ ಗೋಪಾಲಸ್ವಾಮಿ, ಹರಿಹರ – ನಂದಗವಿ ಶ್ರೀನಿವಾಸ್, ಶಿಗ್ಗಾಂವಿ – ಯೂಸುಫ್ ಸವಣೂರು, ಹುಬ್ಬಳ್ಳಿ-ಧಾರವಾಡ ಪಶ್ಚಿಮ ಕ್ಷೇತ್ರದಲ್ಲಿ ದೀಪಕ್ ಚಿಂಚೋರ್ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ. ಅಲ್ಲದೇ ಇನ್ನೂ 8 ಕ್ಷೇತ್ರಗಳ ಅಭ್ಯರ್ಥಿಗಳ ಘೋಷಣೆ ಬಾಕಿ ಉಳಿಸಿಕೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


