ಮಾಜಿ ಡಿಸಿಎಂ ಬೆಳಗಾವಿಯ ಪ್ರಭಾವಿ ಬಿಜೆಪಿ ನಾಯಕ ಲಕ್ಷ್ಮಣ ಸವದಿ ಕಾಂಗ್ರೆಸ್ ಸೇರ್ಪಡೆಯಾದ ಬೆನ್ನಲ್ಲೇ ಮತ್ತೊಂದು ದೊಡ್ಡ ವಿಕೆಟ್ ಪತನವಾಗಿದೆ. ಹುಬ್ಬಳ್ಳಿ ಧಾರವಾಡ ಸೆಂಟ್ರಲ್ ಕ್ಷೇತ್ರದಲ್ಲಿ 7ನೇ ಬಾರಿ ಸ್ಪರ್ಧಿಸಲು ಟಿಕೆಟ್ ನೀಡಲಿಲ್ಲಎನ್ನುವ ಕಾರಣಕ್ಕೆ, ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಕಮಲ ಪಕ್ಷಕ್ಕೆ ಗುಡ್ ಬೈ ಹೇಳಿದ್ದಾರೆ.
ಅಲ್ಲದೇ ಕಾಂಗ್ರೆಸ್ ಸೇರ್ಪಡೆಗೆ ಸಜ್ಜಾಗಿದ್ದು, ರಾತ್ರಿ ಇಡೀ ಕಾಂಗ್ರೆಸ್ ನಾಯಕರ ಜೊತೆ ಸಭೆ ಮಾಡಿ ಚರ್ಚಿಸಿದ್ದು, ಕೈ ಹಿಡಿಯಲು ಮುಹೂರ್ತ ಫಿಕ್ಸ್ ಆಗಿದೆ.
ನಿರೀಕ್ಷೆಯಂತೆ ಶೆಟ್ಟರ್‌ಗೆ ಗಾಳ ಹಾಕಿ ಕಾದು ಕುಳಿತ್ತಿದ್ದ ಕೈ ನಾಯಕರು ಫುಲ್ ಅಲರ್ಟ್ ಆಗಿದ್ರು. ಕಾಂಗ್ರೆಸ್‌ನ ಪ್ರಭಾವಿ ವೀರಶೈವ ಲಿಂಗಾಯತ ಮುಖಂಡ ಶಾಮನೂರು ಶಿವಶಂಕರಪ್ಪರನ್ನೇ ಮುಂದೆ ಬಿಟ್ಟಿದ್ರು. ಬೆಂಗಳೂರಿನ ರಿಚ್ಮಂಡ್ಟೌನ್ನಲ್ಲಿರುವ ಶಾಮನೂರು ಶಿವಶಂಕರಪ್ಪ ಅವರ ಸ್ಕೈಗಾರ್ಡನ್ ಅಪಾರ್ಟ್ಮೆಂಟ್ನ ಫ್ಲ್ಯಾಟ್‌ನಲ್ಲಿ ಸಭೆ ನಡೆಸಿ ಮಾತುಕತೆ ನಡೆಸಿದ್ದಾರೆ.
ರಾಜ್ಯ ಕಾಂಗ್ರೆಸ್ ಉಸ್ತುವಾರಿ ಸುರ್ಜೇವಾಲ, ಸಿಎಲ್‌ಪಿ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕೆಪಿಸಿಸಿ ಪ್ರಚಾರ ಸಮಿತಿ ಅಧ್ಯಕ್ಷ ಎಂ.ಬಿ.ಪಾಟೀಲ್ ಉಪಸ್ಥಿತಿಯಲ್ಲಿ ನಿನ್ನೆ ರಾತ್ರಿ ಇಡೀ ಶೆಟ್ಟರ್ ಕಾಂಗ್ರೆಸ್ ಸೇರ್ಪಡೆ ಕುರಿತಂತೆ ಸುದೀರ್ಘ ಐದು ಗಂಟೆಗಳ ಕಾಲ ರಹಸ್ಯ ಚರ್ಚೆ ನಡೆಯಿತು ಎನ್ನಲಾಗಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA


