ಕೊರಟಗೆರೆ: ಕಾಂಗ್ರೆಸ್ ಗೆ ವಲಸೆ ಬರೋರ ಸಂಖ್ಯೆ ಹೆಚ್ಚಾಗಿರೋದು ಶುಭ ಸೂಚನೆ. ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತೆ ಅನ್ನೋ ಸೂಚನೆ ಇರೋದರಿಂದ ಬರ್ತಾ ಇದ್ದಾರೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಜಿ. ಪರಮೇಶ್ವರ್ ತಿಳಿಸಿದ್ದಾರೆ.
ಕೊರಟಗೆರೆಯಲ್ಲಿ ನಾಮಪತ್ರ ಸಲ್ಲಿಸಿದ ನಂತರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ಜಗದೀಶ್ ಶೆಟ್ರು, ಸವದಿ ಅಂತಹ ಹಿರಿಯ ನಾಯಕರು ಬಂದಿರೋದು ಪಕ್ಷ ಅಧಿಕಾರಕ್ಕೆ ಬರುತ್ತೆ ಅನ್ನೋ ಮುನ್ಸೂಚನೆ ಇದೆ. ಇನ್ನೂ ಕೂಡ ತುಂಬಾ ಜನ ಕಾಂಗ್ರೆಸ್ ಗೆ ಬರುವವರಿದ್ದಾರೆ ಎಂದರು.
ರಾಮದಾಸ್ ಕೂಡಾ ಬಿಜೆಪಿ ತೊರೆದು ಕಾಂಗ್ರೆಸ್ ಬಂದರೆ ಆಶ್ಚರ್ಯ ಪಡಬೇಕಿಲ್ಲ. ತುಮಕೂರು ಜಿಲ್ಲೆಯ ಬೇರೆ ಬೇರೆ ಪಕ್ಷದ ಮುಖಂಡರು ನನ್ನ ಸಂಪರ್ಕದಲ್ಲಿದ್ದಾರೆ. ಸಿದ್ದರಾಮಯ್ಯ ಅವರು ಕೂಡಾ ಕೊರಟಗೆರೆ ಕ್ಷೇತ್ರದ ಪ್ರಚಾರಕ್ಕೆ ಬರ್ತಾರೆ, ಈಗ ತಾನೇ ಅವರಿಗೆ ಪೋನ್ ನಲ್ಲೂ ಮಾತನಾಡಿ ಶುಭ ಹಾರೈಸಿದ್ದೇನೆ. ಅವರು ಕೂಡಾ ನನಗೆ ಶುಭವಾಗಲಿ ಎಂದು ಹೇಳಿದ್ದಾರೆ. ದಲಿತ ಸಿಎಂ ಕುರಿತು ನಾನು ಪ್ರತಿಕ್ರಿಯೆ ಮಾಡಲು ಹೋಗಲ್ಲ. ನಮಗೆ ಬೇಕಾಗಿರೋದು ಕಾಂಗ್ರೇಸ್ ಅಧಿಕಾರಕ್ಕೆ ಬರೋದು. ಅದರ ಬಗ್ಗೆ ಟಿಪ್ಪಣಿ ಮಾಡೋದು ನನಗೆ ಇಷ್ಟ ಇಲ್ಲ ಎಂದರು.
ಸಿಎಂ ಬಸವರಾಜ್ ಬೊಮ್ಮಾಯಿ ಕಾಂಗ್ರೆಸ್ ಮುಳುಗುವ ಹಡಗು ಎಂಬ ಹೇಳಿಕೆ ನೀಡಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಅವರೇ ಹೇಳಿದ ಹಾಗೆ ಯಾರು ಮುಳುಗುತ್ತಾರೆ ಎನ್ನುವುದು 13ನೇ ತಾರೀಖು ಗೊತ್ತಾಗುತ್ತೆ ಎಂದರು.
ಕೊರಟಗೆರೆಯಲ್ಲಿ ಇಂದು ನಾಮಪತ್ರ ಸಲ್ಲಿಸಿದ್ದೇನೆ. ಕಾನೂನಿನ ಚೌಕಟ್ಟಿನಲ್ಲಿ, ಸಂವಿಧಾನ ಚೌಕಟ್ಟಿನಲ್ಲಿ ಚುನಾವಣೆ ನಡೆಸಲು ಒಪ್ಪಿಕೊಂಡಿದ್ದೇವೆ. ಅದರನ್ವಯ ನಾನು ಇಂದು ನಾಮಪತ್ರ ಸಲ್ಲಿಸಿದ್ದೇನೆ ಎಂದರು.
ಈ ಚುನಾವಣೆಯಲ್ಲಿ ನಾನು ಗೆದ್ದೇ ಗೆಲ್ಲುತ್ತೇನೆ ಎನ್ನುವ ಆತ್ಮವಿಶ್ವಾಸದಿಂದ ನಾಮಪತ್ರ ಸಲ್ಲಿಸಿದ್ದೇನೆ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವ ಎಲ್ಲಾ ಸೂಚನೆ ಇದೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/DsJTbZnfQe5FbEJqOlbyUL
ಯೂಟ್ಯೂಬ್ ಚಾನೆಲ್ ಸಬ್ಸ್ ಕ್ರೈಬ್ ಆಗಿ: https://www.youtube.com/channel/UCtrQuDOToxHu8dzMaHjoYXA