ಉಡುಪಿ: ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲು ಇಚ್ಚಿಸುವವರು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಿದ್ದು ಇದೀಗ ಕಾಂಗ್ರೆಸ್ನಲ್ಲಿ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ಜೋರಾಗಿದೆ. ಕೆಪಿಸಿಸಿ ಎಲೆಕ್ಷನ್ ಕಮಿಟಿ ಮಹತ್ವದ ಸಭೆ ನಡೆಸಿದ್ದು 37 ಅಭ್ಯರ್ಥಿಗಳ ಪಟ್ಟಿ ಸಭೆ ಮುಂದೆ ಬಂದಿದೆ, ಇದೀಗ ಮೊದಲ ಪಟ್ಟಿ ಸ್ಕ್ರೀನಿಂಗ್ ಕಮಿಟಿಗೆ ರವಾನಿಸಿದ್ದು, ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಪ್ರಕಟಿಸುವ ಸಾಧ್ಯತೆಗಳಿವೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಬಿ.ಕೆ.ಹರಿಪ್ರಸಾದ್ ಮಾಹಿತಿ ನೀಡಿದ್ದಾರೆ.
ಉಡುಪಿಯಲ್ಲಿ ಮಾದ್ಯಮಗಳೊಂದಿಗೆ ಮಾತನಾಡಿದ ಅವರು ವಿಧಾನಪರಿಷತ್ ಪ್ರದೇಶ ಎಲೆಕ್ಷನ್ ಕಮಿಟಿಯ ಜವಾಬ್ದಾರಿ ಮುಕ್ತಾಯವಾಗಿದೆ. ಅಭ್ಯರ್ಥಿಗಳ ಪಟ್ಟಿಗಳು ಈಗಾಗಲೇ ನಿನ್ನೆ ಪ್ರದೇಶ ಕಾಂಗ್ರೆಸ್ ಸಮಿತಿಯಲ್ಲಿ ೩೭ ಜನರ ಸಮ್ಮುಖ ಬಂದಿದೆ. ಸಭೆಯಲ್ಲಿ ಎಲ್ಲರೂ ತಮ್ಮ ಅಭಿಪ್ರಾಯ, ಶಿಫಾರಸುಗಳನ್ನು ಕೊಟ್ಟಿದ್ದಾರೆ. ಅಭ್ಯರ್ಥಿಗಳ ಪಟ್ಟಿಯನ್ನು ಎಐಸಿಸಿ ನಾಯಕರು ಘೋಷಿಸಲಿದ್ದಾರೆ. ಫೆಬ್ರವರಿ ಅಂತ್ಯದೊಳಗೆ ಅಭ್ಯರ್ಥಿಗಳ ಹೆಸರು ಘೋಷಣೆ ಸಾಧ್ಯತೆ ಇದೆ ಆಲ್ ಇಂಡಿಯಾ ಕಾಂಗ್ರೆಸ್ ಕಮಿಟಿ ಅವರು ಅಭ್ಯರ್ಥಿಗಳ ಪಟ್ಟಿ ಘೋಷಣೆ ಮಾಡಲಿದ್ದಾರೆ ಎಂದು ಸ್ಪಷ್ಟಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


