ಬೆಂಗಳೂರು : ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗೋ ಮೂತ್ರ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹೇಳಿದ್ದಾರೆ.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇನ್ನೂ 40-45 ದಿನಗಳು ಮಾತ್ರ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಇರುತ್ತೆ. ಆಮೇಲೆ ಈ ಬಿಜೆಪಿ ಸರ್ಕಾರವನ್ನ ಜನರೇ ಕಿತ್ತೊಗೆಯಲಿದ್ದಾರೆ ಎಂದರು.
ಕಾಂಗ್ರೆಸ್ 200 ಯುನಿಟ್ ವಿದ್ಯುತ್, 2 ಸಾವಿರ ಯೋಜನೆ ಜಾರಿಗೊಳಿಸುವ ಭರವಸೆ ನೀಡಿದೆ. ಇದರಿಂದ ಬಿಜೆಪಿಗೆ ನಡುಕ ಶುರುವಾಗಿದೆ. ಇದರಿಂದ ಬಿಜೆಪಿಯಲ್ಲಿ ಆಂತರಿಕ ಜಗಳ ಹೆಚ್ಚಾಗಿದೆ ಎಂದರು.
ಇನ್ನು ಕಾಂಗ್ರೆಸ್ ಅಧಿಕಾರಕ್ಕೆ ಬರ್ತಿದ್ದಂತೆ ಡೆಟಾಲ್, ಗೋ ಮೂತ್ರ ಹಾಕಿ ವಿಧಾನ ಸೌಧ ಕ್ಲೀನ್ ಮಾಡಿಸ್ತೀವಿ, ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


