ಪಾವಗಡ: ತಾಲೂಕಿನ ಪೋತಗಾನಹಳ್ಳಿ ಗ್ರಾ.ಪಂ. ವ್ಯಾಪ್ತಿಯ ದಳವಾಯಿ ಹಳ್ಳಿ ಗ್ರಾಮಕ್ಕೆ ಇಂದು ಹೆಚ್.ವಿ.ವೆಂಕಟೇಶ್ ರವರು ಭೇಟಿ ನೀಡಿ ಆಂಜನೇಯ ಸ್ವಾಮಿಗೆ ಪೂಜೆ ಸಲ್ಲಿಸಿದರು.
ಈ ವೇಳೆ ಗ್ರಾಮದ ಮಹಿಳೆಯರಿಗೆ ಕಾಂಗ್ರೆಸ್ ಪಕ್ಷದ ಸಾಧನೆಗಳನ್ನು ತಿಳಿಸಿ, ಮುಂಬರುವ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದರೆ ಗೃಹಲಕ್ಷ್ಮಿ, ಗೃಹ ಜ್ಯೋತಿ ಮತ್ತು ಅನ್ನ ಭಾಗ್ಯ ಯೋಜನೆಗಳನ್ನು ಜಾರಿಗೊಳಿಸುವ ಕಾಂಗ್ರೆಸ್ ಗ್ಯಾರಂಟಿ ಕಾರ್ಡ್ ಗಳನ್ನು ವಿತರಣೆ ಮಾಡಲಾಯಿತು.
ಬಾರೀ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದ ಮಹಿಳಾ ಕಾರ್ಯಕರ್ತರು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡುತ್ತೇವೆ ಎಂದು ಈ ಸಂದರ್ಭದಲ್ಲಿ ಭರವಸೆ ನೀಡಿದರು. ಈ ಭಾಗದ ಅನೇಕ ಮುಖಂಡ, ಕಾರ್ಯಕರ್ತರು, ಸಾರ್ವಜನಿಕರು ಈ ವೇಳೆ ಉಪಸ್ಥಿತರಿದ್ದರು.
ವರದಿ: ರಾಮಪ್ಪ. ಸಿ.ಕೆ.ಪುರ. ಪಾವಗಡ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy