ಕಾಂಗ್ರೆಸ್ ನ ಪೇ ಸಿಎಂ ಅಭಿಯಾನ ಕುರಿತು ಆಕ್ರೋಶ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಇದೊಂದು ವ್ಯವಸ್ಥಿತ ಷಡ್ಯಂತ್ರ. ಈ ರೀತಿ ಪೋಸ್ಟ್ ಹಾಕುವುದರಿಂದ ರಾಜ್ಯಕ್ಕೆ ಕೆಟ್ಟ ಹೆಸರು ಎಂದು ಕಿಡಿಕಾರಿದರು.
ಈ ಕುರಿತು ಮಾತನಾಡಿದ ಸಿಎಂ ಬಸವರಾಜ ಬೊಮ್ಮಾಯಿ, ಆಧಾರ ರಹಿತವಾಗಿ ಕ್ಯಾಂಪೇನ್ ಮಾಡಲಾಗುತ್ತಿದೆ. ಈ ರೀತಿ ಮಾಡುವುದಕ್ಕೆ ಎಲ್ಲರಿಗೂ ಬರುತ್ತದೆ. ವ್ಯವಸ್ಥಿತ ಅಪಪ್ರಚಾರದ ಬಗ್ಗೆ ಜನರಿಗೂ ಗೊತ್ತಾಗುತ್ತೆ. ಪೇಸಿಎಂ ಪೋಸ್ಟರ್ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಕಿಡಿಗೇಡಿಗಳು ಯಾರೇ ಇದ್ದರೂ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಇಂತಹ ಘಟನೆಗಳಿಗೆ ಕಡಿವಾಣ ಹಾಕಲು ತೀರ್ಮಾನಿಸಿದ್ದೇನೆ. ಪೋಸ್ಟರ್ ಹಾಕಿದವರ ವಿರುದ್ಧ ಕೇಸ್ ದಾಖಲಿಸಲು ಸೂಚನೆ ನೀಡಿದ್ದೇನೆ. ಇದರ ಹಿಂದೆ ಯಾರಿದ್ದಾರೆ ಎಂದು ಗೊತ್ತಾಗಬೇಕು ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


