ಕಾಂಗ್ರೆಸ್ ಟಿಕೆಟ್ಗಾಗಿ ಅರ್ಜಿ ಸಲ್ಲಿಸಲು ನ 15 ಕೊನೆಯ ದಿನವಾಗಿದ್ದು, ಸಾವಿರಾರು ಮಂದಿ ಅರ್ಜಿ ಸ್ವೀಕರಿಸಿದ್ದು, 400 ಮಂದಿ ಮಾತ್ರವೇ ಅರ್ಜಿ ಸಲ್ಲಿಸಿದ್ದಾರೆ. ಇವರಲ್ಲಿ 30 ಶಾಸಕರು ಸೇರಿದ್ದಾರೆ. ಹಲವು ಶಾಸಕರು ಮತ್ತು ಆಕಾಂಕ್ಷಿಗಳು ಇನ್ನೂ ಅರ್ಜಿ ಸಲ್ಲಿಸಿಲ್ಲ. ಈ ಹಿನ್ನೆಲೆಯಲ್ಲಿ ಕೊನೆಯ ದಿನಾಂಕ ವಿಸ್ತರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ಮೂಲಗಳು ಹೇಳಿವೆ. ಕಾಂಗ್ರೆಸ್ ಪಕ್ಷವು ಟಿಕೆಟ್ಗಾಗಿ ಅರ್ಜಿಗೆ ₹ 5,000 ಶುಲ್ಕ ನಿಗದಿಪಡಿಸಿದೆ. ಅರ್ಜಿಯೊಂದಿಗೆ ₹ 2 ಲಕ್ಷ ಡಿಡಿ ನೀಡಬೇಕು ಎಂದು ಷರತ್ತು ವಿಧಿಸಿದೆ.
ಕೋಲಾರ ಕ್ಷೇತ್ರಕ್ಕೆ ಮಾಜಿ ಸಭಾಪತಿ ವಿ.ಆರ್ ಸುದರ್ಶನ್ ಅರ್ಜಿ ಪಡೆದಿದ್ದರು. ಆದರೆ ಸಿದ್ದರಾಮಯ್ಯ ಸ್ಪರ್ಧೆ ಖಚಿತವಾದ ಬಳಿಕ ಅರ್ಜಿ ಸಲ್ಲಿಸಲು ಅವರು ಹಿಂದೇಟು ಹಾಕಿದ್ದಾರೆ. ವಿ.ಆರ್.ಸುದರ್ಶನ್ ಅವರ ಜೊತೆಗೆ ಗೋವಿಂದೇಗೌಡ, ಶ್ರೀನಿವಾಸ್ ಅರ್ಜಿ ಪಡೆದಿದ್ದರು ಎನ್ನಲಾಗಿದೆ. ವರುಣ ಹಾಗೂ ಚಾಮುಂಡೇಶ್ವರಿ ಕ್ಷೇತ್ರದಿಂದ ಅರ್ಜಿ ಸಲ್ಲಿಕೆಯಾಗಿಲ್ಲ. ನಂಜನಗೂಡು ಕ್ಷೇತ್ರಕ್ಕೆ ಎಚ್.ಸಿ.ಮಹಾದೇವಪ್ಪ, ಕೆಪಿಸಿಸಿ ಕಾರ್ಯಾಧ್ಯಕ್ಷ ಆರ್.ಧ್ರುವನಾರಾಯಣ ಅರ್ಜಿ ಸಲ್ಲಿಸಿದ್ದಾರೆ.
ಪುಲಕೇಶಿ ನಗರದಲ್ಲಿ ಶಾಸಕ ಅಖಂಡ ಶ್ರೀನಿವಾಸ್ ಮೂರ್ತಿ ಇರುವಾಗಲೇ ಮಾಜಿ ಶಾಸಕ ಪ್ರಸನ್ನ ಕುಮಾರ್ ಅರ್ಜಿ ಸಲ್ಲಿಸಿದ್ದಾರೆ. ಮೂಡಿಗೆರೆ ಕ್ಷೇತ್ರಕ್ಕೆ ಹಿರಿಯ ನಾಯಕಿ ಮೋಟಮ್ಮ ಅವರ ಪುತ್ರಿ ನಯನಾ ಅರ್ಜಿ ಸಲ್ಲಿಸಿದ್ದಾರೆ. ನಾಗರತ್ನ, ಬಿನ್ನಾಡಿ ಪ್ರಭಾಕರ್ ಅರ್ಜಿ ಸಲ್ಲಿಸಿದ್ದಾರೆ.
ಕಾಂಗ್ರೆಸ್ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಾ ಅಮರನಾಥ್ ಮಹಾದೇವಪುರ ಹಾಗೂ ಸಕಲೇಶಪುರ ಕ್ಷೇತ್ರಗಳಿಗೆ ಅರ್ಜಿ ಹಾಕಿದ್ದಾರೆ. ಕನಕಗಿರಿ ಕ್ಷೇತ್ರಕ್ಕೆ ಮಾಜಿ ಸಚಿವ ಶಿವರಾಜ್ ತಂಗಡಗಿ, ಟಿ.ನರಸೀಪುರ ಕ್ಷೇತ್ರಕ್ಕೆ ಮಾಜಿ ಸಚಿವ ಎಚ್.ಸಿ.ಮಹದೇವಪ್ಪ ಪುತ್ರ ಸುನೀಲ್ ಬೋಸ್, ಎಚ್.ಡಿ.ಕೋಟೆಗೆ ಶಾಸಕ ಅನಿಲ್ ಚಿಕ್ಕಮಾದು, ಮಂಗಳೂರು ದಕ್ಷಿಣಕ್ಕೆ ಐವನ್ ಡಿಸೋಜ, ಮಂಗಳೂರು ಉತ್ತರಕ್ಕೆ ಮೊಯ್ದಿನ್ ಬಾವಾ ಅರ್ಜಿ ಸಲ್ಲಿಸಿದ್ದಾರೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz