ತುರುವೇಕೆರೆ: ವಿಧಾನ ಪರಿಷತ್ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಆರ್.ರಾಜೇಂದ್ರ ಅವರ ಪರವಾಗಿ ಇಂದು ತುರುವೇಕೆರೆ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಮಾಜಿ ಉಪ ಮುಖ್ಯಮಂತ್ರಿ, ಹಿರಿಯ ಕಾಂಗ್ರೆಸ್ ನಾಯಕ ಡಾ.ಜಿ.ಪರಮೇಶ್ವರ್ ಅವರು ಚುನಾವಣಾ ಪ್ರಚಾರ ಸಭೆ ನಡೆಸಿದರು.
ಸಭೆಯಲ್ಲಿ ಮಾಜಿ ಕೇಂದ್ರ ಸಚಿವರಾದ ಕೆ.ಎಚ್.ಮುನಿಯಪ್ಪ, ಮಾಜಿ ಸಚಿವರಾದ ಟಿ.ಬಿ.ಜಯಚಂದ್ರ, ಮಾಜಿ ಸಂಸದರಾದ ಮುದ್ದಹನುಮೇಗೌಡ ,ಮಾಜಿ ಶಾಸಕರಾದ ಶಫಿ ಅಹಮದ್, ಕೆ.ಷಡಕ್ಷರಿ ಭಾಗಿಗಳಾಗಿ ಕಾಂಗ್ರೆಸ್ ಅಭ್ಯರ್ಥಿಯ ಪರ ಮತಯಾಚಿಸಿದರು.
ಈ ವೇಳೆ ಯುವ ಕಾಂಗ್ರೆಸ್ ಅಧ್ಯಕ್ಷರಾದ ಶಶಿಹುಲಿಕುಂಟೆ ಮುಖಂಡರಾದ ಚಂದ್ರಶೇಖರ್ ಗೌಡ, ಗೀತಾ ರಾಜಣ್ಣ, ತುರುವೇಕೆರೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ತುರುವೇಕೆರೆ ಸ್ಥಳೀಯ ಸಂಸ್ಥೆಗಳ ಹಾಲಿ ಹಾಗೂ ಮಾಜಿ ಸದಸ್ಯರು, ಮಾಜಿ ಜಿ.ಪಂ., ತಾ.ಪಂ. ಸದಸ್ಯರು, ಗ್ರಾ.ಪಂ.ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು, ಮತ್ತು ಕಾಂಗ್ರೆಸ್ ಕಾರ್ಯಕರ್ತರು ಜೊತೆಗಿದ್ದರು.
ನಿಮ್ಮ ಸುದ್ದಿಗಳನ್ನು ಕಳುಹಿಸಿ: nammatumakuru9@gmail.com
ವಾಟ್ಸಾಪ್ ಗ್ರೂಪ್ ಸೇರಿ:
https://chat.whatsapp.com/E7Brl0d8zXCJogP6c6GRcZ
ಜಾಹೀರಾತುಗಳಿಗಾಗಿ ಸಂಪರ್ಕಿಸಿ: 97417 17700