ತಿಪಟೂರು: ಕಾಂಗ್ರೆಸ್ ಪಕ್ಷವು ಡಾ.ಬಿ.ಆರ್.ಅಂಬೇಡ್ಕರ್ ಅವರಿಗೆ ಮಾಡಿರುವ ಅಪಮಾನವು ಸಂಸತ್ ನಲ್ಲಿ ದಾಖಲಾಗಿದೆ ಭಾರತ ರತ್ನ ಸಂವಿಧಾನಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ರವರಿಗೆ ಸಂವಿಧಾನವನ್ನು ರಚನೆ ಮಾಡುವ ಯೋಗ್ಯತೆ ಇಲ್ಲ ಎಂದು ಹೀಯಾಳಿಸಿದ ಕಾಂಗ್ರೆಸ್ ಪಕ್ಷವು, ದಲಿತರ ಮತ್ತು ಹಿಂದುಳಿದ ಪರವಾಗಿ ಮಾತನಾಡುವ ನೈತಿಕತೆ ಕಳೆದುಕೊಂಡಿದೆ ಎಂದು ಕೇಂದ್ರ ಸಾಮಾಜಿಕ ಮತ್ತು ಸಬಲೀಕರಣ ಇಲಾಖೆಯ ರಾಜ್ಯ ಸಚಿವರಾದ ಎ.ನಾರಾಯಣಸ್ವಾಮಿ ವಾಗ್ದಾಳಿ ನಡೆಸಿದರು.
ನಗರದ ಅಗ್ನಿಶಾಮಕ ಠಾಣೆ ಎದುರು ಆಯೋಜಿಸಲಾಗಿದ್ದ ವಿವಿಧ ಕಾಮಗಾರಿಗಳನ್ನು ಉದ್ಘಾಟನೆ ಸಮಾರಂಭವನ್ನು ಉದ್ದೇಶಿಸಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ರವರು ಸಂಸತ್ತನ್ನು ಪ್ರವೇಶಿಸಬಾರದೆಂದು ಕಾಂಗ್ರೆಸ್ ಪಕ್ಷವು ಹಲವಾರು ತಂತ್ರಗಳನ್ನು ಹೆಣೆದು ಸಂಸತ್ತಿನಿಂದ ದೂರವಿಟ್ಟರು. ಅಂಬೇಡ್ಕರ್ ಅವರ ಅಂತ್ಯಸಂಸ್ಕಾರಕ್ಕೆ ಕನಿಷ್ಠ ಪಕ್ಷ ಭೂಮಿಯನ್ನು ನೀಡದೆ ಜೀವನದ ಪ್ರತಿಯೊಂದು ಹಾದಿಯಲ್ಲಿ ಕಾಂಗ್ರೆಸ್ ಅವಮಾನವನ್ನು ಮಾಡಿಕೊಂಡು ಬಂತು ಎಂದು ಅವರು ಹೇಳಿದರು.
ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಪ್ರಾರ್ಥಮಿಕ ಮತ್ತು ಪ್ರೌಢಶಿಕ್ಷಣ ಸಚಿವರಾದ ಬಿ ಸಿ ನಾಗೇಶ್, ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಜಯರಾಮ್, ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಧ್ಯಕ್ಷರಾದ ಅಶೋಕ್ ಗೌಡನಕಟ್ಟೆ, ಉಪಾಧ್ಯಕ್ಷರಾದ ಶಿವಕುಮಾರ್, ಘಟಕ ಅಧ್ಯಕ್ಷ ಗುರುಗದಹಳ್ಳಿ ಮಂಜುನಾಥ್ ಸೇರಿದಂತೆ ಪ್ರಮುಖ ಮುಖಂಡರು ಅಧಿಕಾರಿಗಳು ಹಾಜರಿದ್ದರು.
ವರದಿ: ಮಂಜು ಗುರುಗದಹಳ್ಳಿ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy