ವಿದರ್ಭ: ಕಾಂಗ್ರೆಸ್ ಸಂವಿಧಾನವನ್ನು ತಿದ್ದುಪಡಿ ಮಾಡಿದ್ದು, ಇದೀಗ ಬಿಜೆಪಿ ವಿರುದ್ದ ಆರೋಪ ಮಾಡುತ್ತಿದೆ ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಕಾಂಗ್ರೆಸ್ ನಾಯಕರಿಗೆ ತಿರುಗೇಟು ನೀಡಿದ್ದಾರೆ.
ಮಹಾರಾಷ್ಟ್ರ ವಿಧಾನಸಭೆ ಚುನಾವಣೆ ಹಿನ್ನೆಲೆ ವಿದರ್ಭದ ವಾರ್ಧಾದಲ್ಲಿ ರ್ಯಾಲಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಸಂವಿಧಾನ ತಿದ್ದುಪಡಿ ಮಾಡಿದ್ದು, ಈಗ ಬಿಜೆಪಿಯ ವಿರುದ್ಧ ಆರೋಪ ಮಾಡ್ತಿದೆ ಎಂದರು.
ಬಿಜೆಪಿಗೆ ಲೋಕಸಭೆಯಲ್ಲಿ 400 ಸ್ಥಾನಗಳು ಬಂದರೆ ಸಂವಿಧಾನವನ್ನು ಬದಲಾಯಿಸಲಾಗುತ್ತದೆ ಎಂದು ಕಾಂಗ್ರೆಸ್ ನವರು ಭಾವನಾತ್ಮಕವಾಗಿ ಜನರನ್ನು ದಿಕ್ಕು ತಪ್ಪಿಸುತ್ತಿದ್ದಾರೆ ಎಂದು ಅವರು ಹೇಳಿದರು.
ಇಂದಿರಾ ಗಾಂಧಿ ಕಾಲದಲ್ಲಿ ಕಾಂಗ್ರೆಸ್ ಪಕ್ಷವು ಸಂವಿಧಾನದಲ್ಲಿ ತಿದ್ದುಪಡಿ ಮಾಡಿತ್ತು ಅವರು ಸಂವಿಧಾನವನ್ನು ಬದಲಿಸ್ತಾರೆ, ಆದರೆ ನಮ್ಮನ್ನು ದೂಷಿಸುತ್ತಾರೆ ಎಂದು ಗಡ್ಕರಿ ಆಕ್ರೋಶ ವ್ಯಕ್ತಪಡಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q