ಭಾರತ್ ಜೋಡೋ ಹೆಸರಿನಲ್ಲಿ ಕಾಂಗ್ರೆಸ್ ದೇಶದ ಚುನಾವಣಾ ವ್ಯವಸ್ಥೆಯನ್ನು ಗತಕಾಲಕ್ಕೆ ಕೊಂಡೊಯ್ಯಲು ನಿರ್ಧರಿಸಿದೆ. ಗೆದ್ದಾಗ ಇವಿಎಂ ಬಗ್ಗೆ ಮೌನ ವಹಿಸುವ ಕಾಂಗ್ರೆಸ್ ಪಕ್ಷ, ಸೋತಾಗ ಮಾತ್ರ ತನ್ನ ಕಳಪೆ ಪ್ರದರ್ಶನವನ್ನು ಇವಿಎಂ ಯಂತ್ರದ ಮೇಲೆ ಕಟ್ಟುತ್ತಾರೆ. ಮತಯಂತ್ರವನ್ನು ದೂಷಿಸಿ ಪಕ್ಷ ಪುನಶ್ಚೇತನಗೊಳಿಸಲು ಸಾಧ್ಯವೇ ಎಂದು ಬಿಜೆಪಿ ಪ್ರಶ್ನಿಸಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ಬಿತ್ತಿದ್ದೇ ಬೆಳೆಯುತ್ತದೆ! ಅಧಿಕಾರದ ಅಮಲಿನಲ್ಲಿ, ಕುಟುಂಬವಾದದ ಭದ್ರ ಕೋಟೆಯಲ್ಲಿ ಕುಳಿತ ಕಾಂಗ್ರೆಸ್ ನಾಯಕರು ಜನರಿಂದ ಬಹುದೂರ ಸಾಗಿದ್ದರು. ಕಾಂಗ್ರೆಸ್ ಜನಸಾಮಾನ್ಯರಿಂದ ದೂರವಾಗಿದೆ ಎಂಬ ಸತ್ಯ ಒಪ್ಪಿಕೊಳ್ಳುವ ಸ್ಥಿತಿ ಈಗ ನಿರ್ಮಾಣವಾಗಿದೆ.
ಕಾಂಗ್ರೆಸ್ ಹಾಗೂ ಜನಸಾಮಾನ್ಯರ ನಡುವೆ ದೊಡ್ಡ ಕಂದಕವಿದೆ. ಕಾಂಗ್ರೆಸ್ ಅಧಿಕಾರದಲ್ಲಿರುವಾಗ ವೋಟ್ ಬ್ಯಾಂಕ್ ರಾಜಕಾರಣಕ್ಕಾಗಿ ದೇಶವನ್ನು ಧರ್ಮ, ಜಾತಿ, ಭಾಷೆ ಎಂದು ವಿಭಜಿಸಿತ್ತು. ಅದರ ಪರಿಣಾಮವಾಗಿ ದೇಶದ ಜನತೆ ಅಧಿಕಾರದಿಂದ ಕೆಳಗಿಳಿಸಿದರು, ಈಗ ಅಧಿಕಾರವಿಲ್ಲದ ಹತಾಶೆ ಕಾಂಗ್ರೆಸ್ಸಿಗರನ್ನು ಕಾಡುತ್ತಿದೆ. ಅದಕ್ಕಾಗಿ ಭಾರತ್ ಜೋಡೋ ಎಂದು ಹೊರಟಿದೆ ಎಂದು ವ್ಯಂಗ್ಯವಾಡಿದೆ.
ಎಷ್ಟೊಂದು ನಾಟಕ ಮಾಡುವಿರಿ?: ದೇಶವನ್ನು ಭೌಗೋಳಿಕವಾಗಿ ವಿಭಜನೆ ಮಾಡಿದ್ದು ಮಾತ್ರವಲ್ಲ, ಜಾತಿ, ಧರ್ಮ, ಭಾಷೆ, ಪ್ರಾಂತ್ಯದ ಆಧಾರದ ಮೇಲೆ ವಿಭಜನೆ ಮಾಡಿದ ಕಾಂಗ್ರೆಸ್ ಈಗ ಹೊಸ ನಾಟಕ ಮಾಡುತ್ತಿದೆ. ಸೋತು ನೆಲೆ ಕಳೆದುಕೊಂಡು, ನೆಲಕಚ್ಚಿರುವ ಕಾಂಗ್ರೆಸ್ ಪಕ್ಷ ಭಾರತ್ ಜೋಡೋ ಹೆಸರಿನಲ್ಲಿ ಯಾತ್ರೆಗೆ ಹೊರಟಿರುವುದು ಈ ಶತಮಾನದ ದೊಡ್ಡ ವ್ಯಂಗ್ಯ! ಎಂದು ಅಪಹಾಸ್ಯ ಮಾಡಿದೆ.
ವರದಿ ಆಂಟೋನಿ ಬೇಗೂರು
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/Co3qCxRDyz3FBQg7y8GfBB