ಕಾಂಗ್ರೆಸ್ ನ ಭಾರತ ಐಕ್ಯತಾ ನ್ಯಾಯ ಯಾತ್ರೆ ಬಿಜೆಪಿಗರ ನಿದ್ದೆಗೆಡಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ದೇಶದ ಜನರನ್ನು ಒಗ್ಗೂಡಿಸಲು ನಮ್ಮ ಹಮ್ಮೆಯ ನಾಯಕ ರಾಹುಲ್ ಗಾಂಧಿ ಅವರು ಕೈಗೊಂಡಿರುವ ಭಾರತ ಐಕ್ಯತಾ ನ್ಯಾಯ ಯಾತ್ರೆಗೆ ವ್ಯಕ್ತವಾಗುತ್ತಿರುವ ಅಭೂತಪೂರ್ವ ಬೆಂಬಲವು ಬಿಜೆಪಿಗರ ನಿದ್ದೆಗೆಡಿಸಿದೆ. ಈ ಕಾರಣದಿಂದಲೇ ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ನ್ಯಾಯಯಾತ್ರೆಗೆ ಅಡ್ಡಿಪಡಿಸಲಾಗುತ್ತಿದೆ ಎಂದು ಕಿಡಿ ಕಾರಿದರು.
ಕಾಂಗ್ರೆಸ್ ಯಾತ್ರೆಯಲ್ಲಿ ಭಾಗಿಯಾಗದಂತೆ ಅಸ್ಸಾಂ ಸರ್ಕಾರ ಜನರಿಗೆ ಬೆದರಿಕೆ ಒಡ್ಡುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ನಾವು ಪ್ರಜಾಪ್ರಭುತ್ವ ರಾಷ್ಟ್ರದಲ್ಲಿದ್ದೇವೋ ಅಥವಾ ಸರ್ವಾಧಿಕಾರಿ ರಾಷ್ಟ್ರದಲ್ಲಿದ್ದೇವೆಯೋ ಎಂಬ ಭಾವನೆ ಜನಸಾಮಾನ್ಯರಲ್ಲಿ ಮೂಡುತ್ತಿದೆ. ರಾಜಕೀಯ ಸ್ವಾರ್ಥಕ್ಕಾಗಿ ದೇವರ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸವನ್ನು ಬಿಜೆಪಿ ಮಾಡುತ್ತಿದೆ ಎಂದು ಕಿಡಿ ಕಾರಿದರು.


