ಹೆಚ್.ಡಿ.ಕೋಟೆಯ ಕೆ.ಎಡತೊರೆ ಗ್ರಾಮದಲ್ಲಿ ಪ್ರಚಾರದ ವೇಳೆ ಕಾಂಗ್ರೆಸ್ ಹಾಗೂ ಬಿಜೆಪಿ ಕಾರ್ಯಕರ್ತರು ಪರಸ್ಪರ ಕೈ ಕೈ ಮಿಲಾಯಿಸಿದ ಘಟನೆ ನಡೆದಿದೆ.
ಕೆ.ಎಡತೊರೆ ಗ್ರಾಮದಲ್ಲಿನ ಮುಖ್ಯ ರಸ್ತೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಕಾಂಗ್ರೆಸ್ ಅಭ್ಯರ್ಥಿ ಶಾಸಕ ಅನಿಲ್ ಚಿಕ್ಕಮಾದುರವರ ಬರುವಿಕೆಯನ್ನು ಕಾಯುತ್ತಿದ್ದರು. ಈ ವೇಳೆ ಇದೇ ಮಾರ್ಗವಾಗಿ ಟೈಗರ್ ಬ್ಲಾಕ್ ಬಿಜೆಪಿ ಕಾರ್ಯಕರ್ತರು ಬೈಕ್ ಗಳಲ್ಲಿ ತೆರಳುತ್ತಿದ್ದರು. ಇವರಿಗೆ ಕಾಂಗ್ರೆಸ್ ನ ಕಾರ್ಯಕರ್ತರು ರಸ್ತೆ ಬಿಟ್ಟಿಲ್ಲ ಎನ್ನಲಾಗಿದೆ. ಅಲ್ಲದೇ ಬೈಕ್ ನಲ್ಲಿದ್ದ ಬಿಜೆಪಿ ಬಾವುಟಗಳನ್ನು ಕಿತ್ತುಕೊಂಡು ಧ್ವಜವನ್ನು ತುಳಿದಿದ್ದಾರೆ ಎನ್ನುವ ಆರೋಪ ಕೇಳಿ ಬಂದಿದೆ.
ಕೆಲ ಕಾರ್ಯಕರ್ತರು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ಮಾಡಲು ಯತ್ನಿಸಿದ್ದಾರೆ. ಇದರಿಂದಾಗಿ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದ್ದು, ನಂತರ ಕೈ ಕೈ ಮಿಲಾಯಿಸಿದ್ದಾರೆ.
ಇದೇ ವೇಳೆ ಸ್ಥಳದಲ್ಲಿ ಪ್ರಚಾರದಲ್ಲಿ ತೊಡಗಿದ್ದ ಶಾಸಕ ಅನಿಲ್ ಚಿಕ್ಕಮಾದು ಗಲಾಟೆ ನಡೆಸುತ್ತಿದ್ದ ಕಾರ್ಯಕರ್ತರನ್ನು ಸಮಾಧಾನಪಡಿಸದೆ ಕಾರ್ ಹತ್ತಿ ಸ್ಥಳದಿಂದ ತೆರಳಿದ್ದಾರೆನ್ನಲಾಗಿದೆ.ಬಳಿಕ ಅಲ್ಲೇ ಇದ್ದ ಗ್ರಾಮಸ್ಥರು ಎರಡೂ ಪಕ್ಷದವರನ್ನು ಸಮಾಧಾನಪಡಿಸಿ, ಗಲಾಟೆಯನ್ನು ನಿಯಂತ್ರಣಕ್ಕೆ ತಂದರು.
ವರದಿ: ಮಲಾರ ಮಹದೇವಸ್ವಾಮಿ
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


