ರಾಮನಗರ: ಕಾಂಗ್ರೆಸ್ ಸರ್ಕಾರವನ್ನು ಮುಂದಿನ ಎಂಟೂವರೆ ವರ್ಷಗಳ ಕಾಲ ಯಾರೂ ಅಲುಗಾಡಿಸಲು ಆಗುವುದಿಲ್ಲ. ಕುಮಾರಸ್ವಾಮಿ ಮತ್ತೊಂದು ಜನ್ಮ ಎತ್ತಿ ಬಂದರೂ ಏನೂ ಮಾಡಲು ಸಾಧ್ಯವಿಲ್ಲ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಎಲೆ ತೋಟದ ಹಳ್ಳಿ, ಅಕ್ಕೂರು ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು, ಚುನಾವಣೆಗೆ ನಾಲ್ಕೈದು ದಿನವಿರುವಾಗ ಜನರ ಬಳಿಗೆ ಬರುವ ಕುಮಾರಸ್ವಾಮಿ ಅವರೇ, ನಿಮ್ಮ ಈ ಧೋರಣೆಯನ್ನು ಇನ್ನೆಷ್ಟು ದಿನ ಮುಂದುವರಿಸಿಕೊಂಡು ಹೋಗುತ್ತೀರಿ ಎಂದು ಪ್ರಶ್ನಿದರು.
ರಾಮನಗರದಿಂದ ಕುಮಾರಸ್ವಾಮಿ ಶಾಸಕ, ಮುಖ್ಯಮಂತ್ರಿ, ಸಂಸದರಾಗಿದ್ದರು. ಅವರ ತಂದೆ ಅದೇ ಕ್ಷೇತ್ರದಿಂದ ಮುಖ್ಯಮಂತ್ರಿ ಹಾಗೂ ಪ್ರಧಾನಮಂತ್ರಿಯಾಗಿದ್ದರು. ಅವರು ಕ್ಷೇತ್ರದಲ್ಲಿ ಕೆಲಸ ಮಾಡಿದ್ದರೆ ನಿಖಿಲ್ ಏಕೆ ಸೋಲುತ್ತಿದ್ದರು? ಇನ್ನೆಷ್ಟು ದಿನ ಈ ರಾಮನಗರ ಹಾಗೂ ಚನ್ನಪಟ್ಟಣ ಜನರಿಗೆ ಟೋಪಿ ಹಾಕಲು ಸಾಧ್ಯ ಎಂದು ಅವರು ಪ್ರಶ್ನಿಸಿದರು.
ಕಮಲ ಕೆರೆಯಲ್ಲಿ ಚೆಂದ, ತೆನೆ ಹೊಲದಲ್ಲಿದ್ದರೆ ಚೆಂದ, ದಾನ ಧರ್ಮ ಮಾಡುವ ಕೈ ಅಧಿಕಾರದಲ್ಲಿದ್ದರೆ ಚೆಂದ. ಇದನ್ನು ಯೋಗೇಶ್ವರ್ ಅವರು ಅರಿತುಕೊಂಡು ಕಾಂಗ್ರೆಸ್ ಸರ್ಕಾರದ ಜತೆ ಕೈಜೋಡಿಸಿದ್ದಾರೆ ಎಂದು ಡಿಕೆಶಿ ಹೇಳಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Gp0Feftn1c40sYuKY8HX2Q


