ತುಮಕೂರು : ನಗರದಲ್ಲಿ ಕಾಂಗ್ರೆಸ್ ನ ಸಿಎಂ ಅಭ್ಯರ್ಥಿ ಯಾರು ಎಂದು ಪರ್ತಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಹುಲ್ ಗಾಂಧಿ, ಚುನಾವಣೆ ನಂತರವೇ ಸಿಎಂ ಯಾರೆಂದು ನಿರ್ಧರಿಸಲಾಗುತ್ತದೆ ಎಂದು ಹೇಳಿದರು.
ಜಿಲ್ಲೆಯಲ್ಲಿ ಭಾರತ್ ಜೋಡೋ ಪಾದಯಾತ್ರೆ ನಡೆಯುತ್ತಿದ್ದು, ಈ ವೇಳೆ ಮುಂದಿನ ಕಾಂಗ್ರೆಸ್ ಮುಖ್ಯಮಂತ್ರಿ ಅಭ್ಯರ್ಥಿ ಯಾರು ಎಂಬ ವಿಚಾರದ ಬಗ್ಗೆ ರಾಹುಲ್ ಗಾಂಧಿ ಮಾತನಾಡಿದ್ದಾರೆ.
ಸದ್ಯಕ್ಕೆ ಕಾಂಗ್ರೆಸ್ ನ ಮುಖ್ಯಮಂತ್ರಿ ಅಭ್ಯರ್ಥಿ ಘೋಷಣೆ ಇಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಎದುರೇ ಹೇಳಿದರು. ಈ ಮೂಲಕ ಮುಂದಿನ ಮುಖ್ಯಮಂತ್ರಿ ಯಾರೆಂಬ ವಿವಾದಕ್ಕೆ ತೆರೆಬಿದ್ದಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy