ಔರಾದ್ : ನಗರದ ಪಟ್ಟಣ ಪಂಚಾಯತಿಯನ್ನು ಪುರಸಭೆ ಮೇಲ್ದರ್ಜೆಗೇರಿಸಲು ಕಾಂಗ್ರೆಸ್ ಸರಕಾರ ನಿರ್ಣಯ ಕೈಗೊಂಡಿದೆ ಎಂದು ನಿವೃತ್ತ ಸಿಎಂ ಅಪರ ಕಾರ್ಯದರ್ಶಿ, ಕಾಂಗ್ರೆಸ್ ಮುಖಂಡ ಡಾ.ಭೀಮಸೇನರಾವ್ ಶಿಂಧೆ ತಿಳಿಸಿದ್ದಾರೆ.
ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿದ ಅವರು, ಈ ಹಿಂದೆ ಬಿಜೆಪಿ ಅವಧಿಯಲ್ಲಿ ಪಟ್ಟಣ ಪಂಚಾಯತಿಯನ್ನು ಪುರಸಭೆ ಮಾಡಲು ಆಗಲಿಲ್ಲ. ಈ ಭಾಗದ ಜನರ ಬಹುದಿನಗಳ ಬೇಡಿಕೆ ಸರಕಾರದ ಗಮನಕ್ಕೆ ತಂದಿದ್ದೇನೆ. ಆದ್ದರಿಂದ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಜನರ ಬೇಡಿಕೆಗೆ ಸ್ಪಂದಿಸಿದ್ದಾರೆ. ಅಲ್ಲದೇ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರ ಪ್ರಯತ್ನದ ಫಲದಿಂದ ಔರಾದ ಪಟ್ಟಣ ಪಂಚಾಯತಿಯನ್ನು ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲಾಗುತ್ತಿದೆ ಎಂದು ಸಂತಸ ವ್ಯಕ್ತಪಡಿಸಿದ್ದಾರೆ.
ಬಿಜೆಪಿ ಸರಕಾರದ ಅವಧಿಯಲ್ಲಿ ಮಾಡದ ಕೆಲಸಗಳು ಕಾಂಗ್ರೆಸ್ ಸರಕಾರ ಮಾಡುತ್ತಿದೆ. ಆದರೆ ಕೆಲವರು ಎಲ್ಲವೂ ನಾನೇ ಮಾಡುತ್ತಿದ್ದೇನೆ ಎಂದು ಪ್ರಚಾರ ಮಾಡಿಕೊಳ್ಳಲು ಮುಂದಾಗಿದ್ದಾರೆ. ಬಿಜೆಪಿ ಅವಧಿಯಲ್ಲಿ ಅವರು ಯಾಕೆ ಮಾಡಿಲ್ಲ ಎಂದು ಪ್ರಶ್ನಿಸಿದ ಶಿಂಧೆ, ತಾಲೂಕಿನಲ್ಲಿ ಬಿಜೆಪಿ ಅವಧಿಯಲ್ಲಿ ಆಗದ ಕೆಲಸಗಳು ಕಾಂಗ್ರೆಸ್ ಸರಕಾರ ಮಾಡುತ್ತಿದೆ ಎನ್ನುವುದು ಜನರಿಗೆ ಅರಿವಾಗಿದೆ. ಜನರನ್ನು ದಾರಿ ತಪ್ಪಿಸಲು ಸಾಧ್ಯವಿಲ್ಲ. ಎಲ್ಲವನ್ನು ಕ್ಷೇತ್ರದ ಜನತೆ ಗಮನಿಸುತ್ತಿದ್ದಾರೆ ಎಂದಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ, ಪೌರಾಡಳಿತ ಮತ್ತು ಹಜ್ ಸಚಿವ ರಹೀಮ್ ಖಾನ್ ಅವರು ಹಾಗೂ ನಾವುಗಳು ಸರಕಾರದ ಮೇಲೆ ಒತ್ತಡ ಹಾಕದೇ ಬಿಜೆಪಿಯ ಶಾಸಕಯಿಂದ ಪುರಸಭೆ ಆಗಿದ್ದೇಯೇ.? ಶಾಸಕರು ಬಿಜೆಪಿ ಅವಧಿಯಲ್ಲಿ ಯಾಕೆ ಮಾಡಿಲ್ಲ. ಪುರಸಭೆ ಕಾಂಗ್ರೆಸ್ ಸರಕಾರದ ಕೊಡುಗೆ, ಬಿಜೆಪಿಯವರು ಹಾಗೂ ಬಿಜೆಪಿ ಸರಕಾರದ ಮಾಡಿಲ್ಲ ಎಂದು ಡಾ. ಶಿಂಧೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಅರವಿಂದ ಮಲ್ಲಿಗೆ, ಬೀದರ್
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC