ಬಿಜೆಪಿ ವಿಧಾನ ಪರಿಷತ್ ಸದಸ್ಯ ಎ.ಎಚ್. ವಿಶ್ವನಾಥ್ ಸದ್ಯದಲ್ಲೇ ಬಿಜೆಪಿ ತೊರೆದು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುವ ಸಾಧ್ಯತೆಯಿದೆ ಎಂದು ಹೇಳಲಾಗಿದೆ.
ಅವರು ದಿಲ್ಲಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ಭೇಟಿ ಮಾಡಿದ್ದು, ಪುತ್ರ ಪೂರ್ವಜ್ ವಿಶ್ವನಾಥ್ ಈಗಾಗಲೇ ಕಾಂಗ್ರೆಸ್ ಜತೆ ಗುರುತಿಸಿಕೊಂಡಿರುವುದರಿಂದ ಸದ್ಯದಲ್ಲೇ ವಿಶ್ವನಾಥ್ ಕೂಡ ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ಕೇಳಿ ಬರುತ್ತಿವೆ.
ವಿಶ್ವನಾಥ್ ಕಳೆದ ವಿಧಾನಸಭೆ ಚುನಾವಣೆ ವೇಳೆ ಜೆಡಿಎಸ್ ಪಕ್ಷ ಸೇರಿ ರಾಜ್ಯಾಧ್ಯಕ್ಷರೂ ಆಗಿದ್ದರು. ಹುಣಸೂರು ಕ್ಷೇತ್ರದಿಂದ ಸ್ಪರ್ಧಿಸಿ ಗೆದ್ದಿದ್ದರು. ಆಪರೇಷನ್ ಕಮಲದ ವೇಳೆ ಬಿಜೆಪಿಗೆ ಹಾರಿದ್ದ ಅವರು ಉಪ ಚುನಾವಣೆಯಲ್ಲಿ ಸೋತಿದ್ದರು. ಪರಿಷತ್ ಸದಸ್ಯರಾಗಿದ್ದ ಅವರಿಗೆ ಬಿಜೆಪಿ ಕೊಟ್ಟ ಮಾತಿನಂತೆ ಸಚಿವ ಸ್ಥಾನ ನೀಡಿಲ್ಲ ಎಂಬ ಅಸಮಾಧಾನವಿದೆ. ಪಠ್ಯ ಪರಿಷ್ಕರಣೆ ವಿಚಾರ, ಹಿಜಾಬ್ ವಿಚಾರ ಸೇರಿದಂತೆ ಹಲವು ವಿಚಾರಗಳಲ್ಲಿ ಬಿಜೆಪಿಗೆ ವಿರುದ್ಧವಾದ ಹೇಳಿಕೆ ನೀಡುತ್ತಿದ್ದ ವಿಶ್ವನಾಥ್ ಇತ್ತೀಚೆಗೆ ಬಿಜೆಪಿ ಜತೆ ಅಂತರ ಕಾಯ್ದುಕೊಂಡಿದ್ದರು.
ವಿಶ್ವನಾಥ್ ಪುತ್ರ ಪೂರ್ವಜ್ ನಂಜನಗೂಡು ತಾಲೂಕು ತಗಡೂರಿನಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಸ್ವಾತಂತ್ರ್ಯ ನಡಿಗೆಯಲ್ಲೂ ಭಾಗವಹಿಸಿದ್ದರು. ಪಕ್ಷ ಸೇರುವ ಬಗ್ಗೆ ಸಿದ್ದರಾಮಯ್ಯ ಅವರ ಗಮನಕ್ಕೆ ತಂದಿದ್ದೇನೆ. ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ಸಿದ್ದರಾಮಯ್ಯ ಕೈ ಬಲಪಡಿಸಲು ಸದ್ಯದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ. ಇದಕ್ಕೆ ತಂದೆಯೂ ಸಮ್ಮತಿ ಸೂಚಿಸಿದ್ದಾರೆ ಎಂದು ಹೇಳಿದ್ದರು. ಈಗ ವಿಶ್ವನಾಥ್ ಅವರ ಖರ್ಗೆ ಭೇಟಿ ಮಹತ್ವ ಪಡೆದುಕೊಂಡಿದೆ.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


