ಚಿತ್ರದುರ್ಗ: ಬಿಜೆಪಿ ದುರಾಡಳಿತಕ್ಕೆ ರಾಜ್ಯದ ಜನರು ಬೇಸತ್ತು ಹೋಗಿದ್ದು, ಕಾಂಗ್ರೆಸ್ ಗೆ ಮತ ಹಾಕಲು ಕಾಯುತ್ತಿದ್ದಾರೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದರು.
ತಾಲ್ಲೂಕಿನ ಸೀಬಾರದಲ್ಲಿರುವ ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಸ್ಮಾರಕದಲ್ಲಿ ಭಾನುವಾರ ನಡೆದ ಪಕ್ಷದ ಸಭೆಯಲ್ಲಿ ಮಾತನಾಡಿದ ಅವರು, ಮತದಾರರ ಮನೆ ಬಾಗಿಲಿಗೆ ತೆರಳಿ ಅವರಿಗೆ ಧ್ವನಿಯಾಗಿ ಎಂದು ಕಾರ್ಯಕರ್ತರಿಗೆ ಕರೆ ನೀಡಿದರು.
ಜಿಎಸ್‌ಟಿ ಹೊರೆ ಹೆಚ್ಚಾಗಿದೆ. ಮೊಸರು, ಮಜ್ಜಿಗೆ, ಆಹಾರ ಧಾನ್ಯಗಳಿಗೂ ತೆರಿಗೆ ವಿಧಿಸಲಾಗಿದೆ. ಬ್ಯಾಂಕ್ ವ್ಯವಹಾರಕ್ಕೆ ಬಳಸುವ ಚೆಕ್ ಬುಕ್ ಗೂ ಜಿಎಸ್‌ಟಿ ವಿಧಿಸಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ತೆರಿಗೆ ಹೊರೆಗೆ ಜನರು ಹೈರಾಣಾಗಿದ್ದಾರೆ. ಮತದಾರರ ಮನೆಗೆ ಭೇಟಿ ನೀಡಿ ಬಿಜೆಪಿ ದುರಾಡಳಿತದ ಬಗ್ಗೆ ಮನವರಿಕೆ ಮಾಡಿಕೊಡಿ ಎಂದು ಕಾರ್ಯಕರ್ತರಿಗೆ ಅವರು ಮನವಿ ಮಾಡಿದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/JpBVbh0ffuQ4Xiseh6vKbz