ತುಮಕೂರು: ಪಂಚ ಯೋಜನೆಗಳಿಂದ ಅಸ್ತಿತ್ವಕ್ಕೆ ಬಂದಿರುವ ರಾಜ್ಯ ಸರ್ಕಾರ ಸಮರ್ಪಕವಾಗಿ ಗ್ಯಾರಂಟಿ ಯೋಜನೆಗಳನ್ನು ಅನುಷ್ಠಾನಕ್ಕೆ ತರುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಎಂದು ಜೆಡಿಎಸ್ ಪಕ್ಷದ ವತಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.
ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಾಚಾರ ಮುಗಿಲುಮುಟ್ಟಿದೆ. ಇದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವ ಐದು ಗ್ಯಾರಂಟಿ ಭರವಸೆಗಳಾದ ಗೃಹಲಕ್ಷ್ಮೀ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳ ಅನುಷ್ಠಾನದಲ್ಲಿ ರಾಜ್ಯ ಸರ್ಕಾರದ ವಿಫಲವಾಗಿದೆ ಮತ್ತು ಮೈಕ್ರೋ ಫೈನಾನ್ಸ್ ಹಾವಳಿಯಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಸಾಲಗಾರರ ಮತ್ತು ರೈತರ ಆತ್ಮಹತ್ಯೆ ಹೆಚ್ಚಾಗಿವೆ ಹಾಗೂ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4