ತುರುವೇಕೆರೆ: ನಮ್ಮ ರಾಜ್ಯದ ಕಾಂಗ್ರೆಸ್ ನೇತೃತ್ವದ ಸರ್ಕಾರ ಎಲ್ಲಾ ಕ್ಷೇತ್ರಗಳಲ್ಲೂ ವಿಫಲವಾಗಿದೆ ಮತ್ತು ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಪಿ.ರಾಜೀವ್ ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು.
ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗಾಢ ನಿದ್ರೆಯಲ್ಲಿದೆ ನಿದ್ರೆಯಿಂದ ಎಬ್ಬಿಸಲು ನಮ್ಮ ಹೋರಾಟ. ಇದು ಒಬ್ಬರ ವಿರುದ್ಧ ಅಲ್ಲ ಕಾಂಗ್ರೆಸ್ ಸರ್ಕಾರದ ವಿರುದ್ಧ ಎಂದು ಅವರು ಹೇಳಿದರು.
ಪಟ್ಟಣದ ಸಮೀಪವಿರುವ ಮಾಜಿ ಶಾಸಕ ಮಸಾಲ ಜಯರಾಮ್ ರವರ ಫಾರ್ಮ್ ಹೌಸ್ ನಲ್ಲಿ ಏರ್ಪಡಿಸಿದ್ದ ಮೈಸೂರು ಚಲೋ ಪೂರ್ವಾಸಿದ್ದತಾ ಸಭೆಯ ನಂತರ ಅವರು ಮಾತನಾಡಿದರು.
ಶೋಷಿತ ಸಮುದಾಯವಾದ ಎಸ್ಸಿ ಎಸ್ಟಿ ಮೀಸಲಿಟ್ಟ 25,000 ಕೋಟಿ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದ 187 ಕೋಟಿ ಹಣವನ್ನು ಸಹ ಕೊಳ್ಳೆ ಹೊಡೆದಿದ್ದಾರೆ. ಚುನಾವಣಾ ಸಮಯದಲ್ಲಿ ಈ ಹಣವನ್ನು ಅಕ್ರಮವಾಗಿ ಬಳಸಿಕೊಂಡು ಲೂಟಿ ಮಾಡಿದ್ದಾರೆ. ರಾಜ್ಯದಲ್ಲಿ ಪ್ರಸ್ತುತ ಅತಿವೃಷ್ಟಿ ಮತ್ತು ಬರದಂತಹ ಪರಿಸ್ಥಿತಿಯಲ್ಲಿ ಈ ಸರ್ಕಾರ ಸಂತ್ರಸ್ತರ ನೆರವಿಗೆ ಬಾರದೆ ನಿರ್ಲಕ್ಷವನ್ನು ತೋರಿದೆ ಇಂತಹ ಲಜ್ಜೆಗಟ್ಟ ಸರ್ಕಾರವನ್ನು ನಾವು ಸ್ವತಂತ್ರ ಬಂದಾಗಿನಿಂದಲೂ ನೋಡಿಯೇ ಇಲ್ಲ ಎಂದು ವಾಗ್ದಾಳಿ ನಡೆಸಿದರು.
ಕರ್ನಾಟಕ ರಾಜ್ಯ ಕರ್ನಾಟಕ ರಾಜ್ಯದಲ್ಲಿ 1,700ಕ್ಕೂ ಹೆಚ್ಚುಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದು ಅವರ ನೆರವಿಗೆ ಸರ್ಕಾರ ಧಾವಿಸಲಿಲ್ಲ. ಕಾರ್ಮಿಕ ವರ್ಗಕ್ಕೆ ಮೀಸಲಿಟ್ಟಂತಹ ಕಟ್ಟಡ ಕಾರ್ಮಿಕರ ಕಲ್ಯಾಣ ನಿಧಿಯನ್ನು ದುರ್ಬಳಕೆ ಮಾಡಿಕೊಂಡು ಹಣವನ್ನು ಕೊಳ್ಳೆ ಹೊಡೆದಿದೆ. ಇವರ ಹಗರಣಗಳನ್ನು ಹಾಗೂ ಅಕ್ರಮಗಳನ್ನು ಜನರಿಗೆ ಮನದಟ್ಟು ಮಾಡಲು ಈ ಪಾದಯಾತ್ರೆಯನ್ನು ಮೈಸೂರಿನಿಂದ ಬೆಂಗಳೂರಿಗೆ ಹಮ್ಮಿಕೊಂಡಿದ್ದೇವೆ ಎಂದವರು ತಿಳಿಸಿದರು.
ಈ ಪಾದಯಾತ್ರೆಯಲ್ಲಿ ತುರುವೇಕೆರೆ ವಿಧಾನಸಭಾ ಕ್ಷೇತ್ರದಿಂದ ಎರಡು ಸಾವಿರ ಜನರನ್ನು ಸೇರಿಸಲು ನಿರೀಕ್ಷಸಲಾಗಿದೆ. ಇದರ ಪೂರ್ಣ ಜವಾಬ್ದಾರಿಯನ್ನು ಮಾಜಿ ಶಾಸಕ ಮಸಾಲ ಜಯರಾಮ್ ವಹಿಸಲಿದ್ದಾರೆ. ಒಂದೊಂದು ವಿಧಾನಸಭಾ ಕ್ಷೇತ್ರಕ್ಕೆ ಒಂದು ದಿನ ನಿಗದಿಪಡಿಸಲಾಗಿದ್ದು ಆಯಾ ಕ್ಷೇತ್ರದ ಜನ ಭಾಗವಹಿಸಲು ಮನವಿ ಮಾಡಲಾಗಿದೆ. ಸುಮಾರು 135 ಕಿಲೋಮೀಟರ್ ಪಾದಯಾತ್ರೆ ಸಾಗಲಿದ್ದು ಈ ಸರ್ಕಾರ ನಡೆಸಿರುವ ಹಗರಣ ಹಾಗೂ ಎಸ್ಸಿ ಎಸ್ಟಿ ನಿಗಮಗಳ ಹಣವನ್ನು ದುರ್ಬಳಕೆ ಮಾಡಿಕೊಂಡಿದ್ದು, ಇದು ಜನಗಳಿಗೆ ಜನರಿಗೆ ತಲುಪಿಸುವಂತಹ ಕೆಲಸ ಮಾಡುವುದು ನಮ್ಮ ಗುರಿಯಾಗಿದೆ. ಈ ಸರ್ಕಾರ ನೀತಿಯನ್ನು ಅನುಸರಿಸಿದ್ದು ಅಭಿವೃದ್ಧಿ ಸಾಧನೆಯನ್ನು ಇಡೀ ರಾಜ್ಯದ ಜನತೆಯ ಮುಂದೆ ಬಿಚ್ಚಿಡಲು ನಾವು ತಯಾರಿ ನಡೆಸಿದ್ದೇವೆ ಎಂದರು.
ಇದೇ ಸಂದರ್ಭದಲ್ಲಿ ಮಾಜಿ ಶಾಸಕ ಮಸಾಲ ಜಯರಾಮ್ ಮಾತನಾಡಿ, ನಮ್ಮ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನ ಕಾರ್ಯಕರ್ತರೊಂದಿಗೆ ಹೆಚ್ಚಿನ ಸಂಖ್ಯೆಯಲ್ಲಿ ಮೈಸೂರು ಚಲೋ ನಲ್ಲಿ ಭಾಗವಹಿಸಿ ಯಶಸ್ವಿಗೊಳಿಸುತ್ತೇವೆ ಎಂದರು.
ಈ ಸಂದರ್ಭದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯರಾದ ಎಂ.ಡಿ.ಲಕ್ಷ್ಮೀನಾರಾಯಣ್, ಮಾಜಿ ಶಾಸಕರಾದ ಮಸಾಲ ಜಯರಾಮ್, ಹಾಸನ ಜಿಲ್ಲಾ ಅಧ್ಯಕ್ಷರಾದ ಎಸ್.ನಾಗೇಂದ್ರ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಂಗರಾಜು, ಜಿಲ್ಲಾ ಕಾರ್ಯದರ್ಶಿ ಕೆಂಪೇಗೌಡ, ಜಿಲ್ಲಾ ಉಪಾಧ್ಯಕ್ಷರಾದ ವಿಜಯ್ ಕುಮಾರ್ ಹಾಗೂ ಅನಿತಾ ನಂಜುಂಡಯ್ಯ, ಮಹಿಳಾ ಮೋರ್ಚಾದ ಚೂಡಾಮಣಿ ಸೇರಿದಂತೆ ಬಿಜೆಪಿಯ ವಿವಿಧ ಮೋರ್ಚಾಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರುಗಳು ಉಪಸ್ಥಿತರಿದ್ದರು.
ವರದಿ: ಸುರೇಶ್ ಬಾಬು ಎಂ. ತುರುವೇಕೆರೆ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296