ಹಾಸನ: ಕಾಂಗ್ರೆಸ್ ಸರ್ಕಾರ ಸುಭದ್ರವಾಗಿ ಆಡಳಿತ ನಡೆಸುತ್ತಿದೆ. ಆದರೆ ಇದನ್ನು ಸಹಿಸದ ಬಿಜೆಪಿಗರು ರಾಜ್ಯ ಸರ್ಕಾರದ ಮೇಲೆ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು.
ಸ್ವಾಭಿಮಾನಿ ಒಕ್ಕೂಟಗಳ ಜಂಟಿ ಆಶ್ರಯದಲ್ಲಿ ಹಾಸನದಲ್ಲಿ ಆಯೋಜಿಸರುವ ಜನಕಲ್ಯಾಣ ಸಮಾವೇಶದಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ನಡೆದ ಲೋಕಸಭಾ ಚುನಾವಣೆಯಲ್ಲಿ ಹಾಸನದ ಜನರು ಕಾಂಗ್ರೆಸ್ ಪಕ್ಷಕ್ಕೆ ಆಶೀರ್ವಾದ ಮಾಡಿರುವುದು ನಿಜಕ್ಕೂ ಸಂತಸ ತಂದಿದೆ. ಕರ್ನಾಟಕದಲ್ಲಿ ಮತ್ತು ಹಾಸನದಲ್ಲಿ ಸ್ವಾಭಿಮಾನಕ್ಕೆ, ಸಂವಿಧಾನಕ್ಕೆ ಆದ್ಯತೆ ನೀಡಿರುವುದು ನಮಗೆಲ್ಲ ಹೆಚ್ಚಿನ ಶಕ್ತಿ ತುಂಬಿದೆ ಎಂದರು.
ಉತ್ತರ ಭಾರತದ ರಾಜ್ಯಗಳು ಸಹ ಕರ್ನಾಟಕದ ಗ್ಯಾರಂಟಿಗಳ ಬಗ್ಗೆ ಹೆಚ್ಚಿನ ಒಲವು ತೋರುತ್ತಿದ್ದಾರೆ. ಹೆಚ್ಚಿನ ಅಭಿವೃದ್ಧಿಯೊಂದಿಗೆ ಗ್ಯಾರಂಟಿಗಳನ್ನು ಸಹ ಮನೆಬಾಗಿಲಿಗೆ ತಲುಪಿಸುತ್ತಿರುವುದಕ್ಕೆ ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ. ನಮ್ಮ ಕಾಂಗ್ರೆಸ್ ಸರ್ಕಾರ ಅಭಿವೃದ್ಧಿಯೊಂದಿಗೆ ನವ ಕರ್ನಾಟಕ ನಿರ್ಮಾಣ ಮಾಡುವುದಕ್ಕೆ ಪ್ರತಿಯೊಬ್ಬರಿಗೂ ಸಾಮಾಜಿಕವಾಗಿ, ಆರ್ಥಿಕವಾಗಿ, ಸ್ವಾಭಿಮಾನದ ಬದುಕು ಕಟ್ಟಿಕೊಡುವುದಕ್ಕೆ ಮುಂದಾಗಿದೆ ಎಂದರು.
ಕಾಂಗ್ರೆಸ್ ಸರ್ಕಾರದ ಆಡಳಿತದಲ್ಲಿ ಪ್ರಗತಿಪರ ಆಲೋಚನೆಗಳು ಇರುತ್ತೇವೆ. ಆದರೆ ಬಿಜೆಪಿ ಸರ್ಕಾರದಲ್ಲಿ ಇದ್ಯಾವುದು ಇರುವುದಿಲ್ಲ ಎಂದು ಅವರು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx