ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಟೀಕಿಸಿದರು.
ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಜತೆ ಜಂಟಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಹಿಮಾಚಲ ಪ್ರದೇಶ, ಕೇರಳ ಸರ್ಕಾರ ದಿವಾಳಿಯ ದಿಕ್ಕಿನಲ್ಲಿ ಹೋಗುತ್ತಿವೆ. ಇದೀಗ ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವೂ ದಿವಾಳಿಯತ್ತ ಹೆಜ್ಜೆ ಇಡುತ್ತಿದೆ ಎಂದು ಆರೋಪಿಸಿದರು.
ಕಾಂಗ್ರೆಸ್ 60 ಪರ್ಸೆಂಟ್ ಕಮಿಷನ್ ಸರ್ಕಾರ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದಾರೆ. ಮೊದಲು 40 ಪರ್ಸೆಂಟ್ ಕಮಿಷನ್ ಪಡೆಯುತ್ತಿದ್ದರು, ಈಗ 60 ಪರ್ಸೆಂಟ್ ಕಮಿಷನ್ ಇದೆ. ಮುಂದೆ 65 ಪರ್ಸೆಂಟ್ ಪಡೆಯಬೇಕೆಂದು ಮಂತ್ರಿಮಂಡದಲ್ಲಿ ಚರ್ಚೆ ಆಗುತ್ತಿದೆ ಎಂದು ಆರೋಪಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/HirBanj7uz4I4A2vAG5yXx