ಬೆಂಗಳೂರು: ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ನಾಡಿನ ಜನತೆಗೆ ಕೊಟ್ಟ ಏಕೈಕ ಗ್ಯಾರಂಟಿ ಎಂದರೆ ಅದು ಬೆಲೆ ಏರಿಕೆ ಎಂದು ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಲೆ ಏರಿಕೆಯ ಗ್ಯಾರಂಟಿಯನ್ನು ಈ ರಾಜ್ಯ ಸರಕಾರ ಸರಿಯಾಗಿ ಅನುಷ್ಠಾನಕ್ಕೆ ತರುತ್ತಿದೆ ಎಂದು ಟೀಕಿಸಿದರು.
ಕಾಂಗ್ರೆಸ್ ಸರಕಾರದ ಗ್ಯಾರಂಟಿಗಳು ವಿಫಲವಾಗಿದೆ. ಬೆಲೆ ಏರಿಕೆಯಿಂದ ನಾಡಿನ ಸಾಮಾನ್ಯ ಜನರು, ಬಡವರು, ರೈತರು ಸೇರಿ ಎಲ್ಲರೂ ತತ್ತರಿಸಿ ಹೋಗಿದ್ದಾರೆ ಎಂದು ತಿಳಿಸಿದರು.
ಮುಸಲ್ಮಾನರಿಗೆ ಸರಕಾರಿ ಗುತ್ತಿಗೆಗಳು, ಕಾಮಗಾರಿಗಳಲ್ಲಿ ಮೀಸಲಾತಿ ನೀಡುವ ಮಸೂದೆ ಸದನದಲ್ಲಿ ತರುತ್ತಿದ್ದಾರೆ. ಬಿಜೆಪಿ ಇದಕ್ಕೆ ಅವಕಾಶ ನೀಡುವುದಿಲ್ಲ ಎಂದು ಪುನರುಚ್ಚರಿಸಿದರು.
ಇದು ಕಾಂಗ್ರೆಸ್ ಸರಕಾರವೇ? ಸಿದ್ದರಾಮಯ್ಯರ ಸರಕಾರವೇ ಅಥವಾ ನಿಜಾಮರ ಆಡಳಿತವೇ ಎಂಬ ಭಾವನೆ ಜನರಲ್ಲಿ ಮೂಡುತ್ತಿದೆ ಎಂದು ಟೀಕಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/Bc4BbJiZ9pF3L0M4QgZdQ4