ಸುಮಾರು 60 ವರ್ಷಗಳ ಕಾಲ ಈ ದೇಶವನ್ನಾಳಿದ ಕಾಂಗ್ರೆಸ್ ಒಂದು ಕಣ್ಣಿಗೆ ಸುಣ್ಣ, ಮತ್ತೊಂದು ಕಣ್ಣಿಗೆ ಬೆಣ್ಣೆ ಎನ್ನುವಂತೆ ನಡೆದುಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕಕ್ಕೆ ಮಲತಾಯಿ ಧೋರಣೆ ಅನುಸರಿಸಿ ರಾಜ್ಯಕ್ಕೆ ಬಹುದೊಡ್ಡ ಅನ್ಯಾಯಗಳನ್ನು ಎಸಗಿರುವುದಕ್ಕೆ ಇತಿಹಾಸದ ಪುಟಗಳಲ್ಲಿ ದಾಖಲೆ ಇದೆ ಎಂದರು. ಇದನ್ನೆಲ್ಲ ನಾವು ಬಿಚ್ಚಿಟ್ಟು ಕಾಂಗ್ರೆಸ್ ನ ಅಸಲೀ ಮುಖವಾಡ ಕನ್ನಡಿಗರ ಮುಂದೆ ಕಳಚಿಡಲಿದ್ದೇವೆ ಎಂದರು.
ಸುಳ್ಳು ಮಾಹಿತಿ ನೀಡಿ ಜನರ ದಿಕ್ಕು ತಪ್ಪಿಸುವುದೂ ಕೂಡ ವಂಚನೆಯ ಇನ್ನೊಂದು ಮುಖ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಿಡಿಕಾರಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಕರ್ನಾಟಕದ ಬಿಜೆಪಿ ಇದನ್ನು ಗಂಭೀರವಾಗಿ ಪರಿಗಣಿಸಲಿದೆ, ಕಾಂಗ್ರೆಸ್ ಸರ್ಕಾರದ ಭಂಡವಾಳ ಸಾಕ್ಷಿ ಸಮೇತ ಬಯಲಿಗೆಳೆಯಲಿದೆ ಎಂದು ಬಿವೈ ವಿಜಯೇಂದ್ರ ಎಚ್ಚರಿಕೆ ನೀಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರವು ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಹುಡುಕಿಕೊಂಡಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಆರೋಪಿಸಿದರು. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳನ್ನು ನಿಭಾಯಿಸಲು ಸಾಧ್ಯವಾಗದೇ, ಆರ್ಥಿಕ ಸಮತೋಲನ ಕಾಯ್ದು ಕೊಳ್ಳುವಲ್ಲಿ ವಿಫಲವಾಗಿ ಬೊಕ್ಕಸ ಬರಿದು ಮಾಡಿಕೊಂಡಿರುವ ಕಾಂಗ್ರೆಸ್ ಸರ್ಕಾರ, ತನ್ನ ಆಡಳಿತ ವೈಫಲ್ಯ ಮುಚ್ಚಿಕೊಳ್ಳಲು ತೆರಿಗೆ ಬಾಕಿಯ ನೆಪ ಮಾಡಿಕೊಂಡು ಕೇಂದ್ರದ ವಿರುದ್ದ ಪ್ರತಿಭಟಿಸಲು ಹೊರಟಿದೆ ಎಂದರು.


