ಹುಬ್ಬಳ್ಳಿ: ರಾಜ್ಯದ ಜನರಿಗೆ ಮೋಸ ಮಾಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ಚುನಾವಣೆಗೂ ಮುನ್ನ 5 ಗ್ಯಾರಂಟಿ ಜಾರಿ ಮಾಡುತ್ತೇವೆ ಎಂದಿದ್ದರು. ಅಧಿಕಾರಕ್ಕೆ ಬಂದು ಒಂದು ತಿಂಗಳಾದರೂ ಗ್ಯಾರಂಟಿ ಜಾರಿಯಾಗಿಲ್ಲ. ಕೇಂದ್ರ ಸರ್ಕಾರದ ಮೇಲೆ ಗೂಬೆ ಕೂರಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಬಿಜೆಪಿ ಹಿರಿಯ ನಾಯಕ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ಮೊದಲನೇ ಕ್ಯಾಬಿನೆಟ್ನಲ್ಲಿ ಯುವಕರಿಗೆ ಮೋಸ ಮಾಡಿದ್ದಾರೆ. ರಾಜ್ಯದ ಒಬ್ಬ ಯವಕನಿಗೂ ಹಣ ಕೊಟ್ಟಿಲ್ಲ. ರಾಜ್ಯ ಸರ್ಕಾರ ಮನೆ ಯಜಮಾನಿ ಖಾತೆಗೆ ಇನ್ನೂ ಹಣ ಹಾಕಿಲ್ಲ. ಅಕ್ಕಿ ವಿತರಣೆ ಮಾಡಲು ಕೇಂದ್ರ ಪೂರೈಕೆ ಮಾಡುತ್ತಿಲ್ಲ ಅಂತಾರೆ. ಗ್ಯಾರಂಟಿ ಹೇಳಿ ಬಡಜನರಿಗೆ ಟೋಪಿ ಹಾಕಿ ಸರ್ಕಾರ ನಡೆಸುತ್ತಿದ್ದಾರೆ ಎಂದರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy


