ನೆಹರು ಕುಟುಂಬದ ಕಟ್ಟಕಡೆಯ ವ್ಯಕ್ತಿಗೂ ಅಧಿಕಾರ ಕೊಡುವುದೇ ಕಾಂಗ್ರೆಸ್ ಪಕ್ಷದ ಗುರಿ. ಡಾ. ಬಿ. ಆರ್. ಅಂಬೇಡ್ಕರ್ ಅವರ ಹೆಸರನ್ನು ನುಡಿಮುತ್ತಾಗಿ ಬಳಸುವ ಕಾಂಗ್ರೆಸ್ ಪಕ್ಷವು ಗೌರವಯುತವಾಗಿ ಅವರ ಶವಸಂಸ್ಕಾರವನ್ನೂ ಮಾಡಿಲ್ಲ. ಕಾಂಗ್ರೆಸ್ ಪಕ್ಷಕ್ಕೆ ಬಾಬಾಸಾಹೇಬ ಅಂಬೇಡ್ಕರ್ ಹೆಸರು ಹೇಳುವ ನೈತಿಕತೆ ಇದೆಯೇ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಪ್ರಶ್ನಿಸಿದ್ದಾರೆ.
ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಏರ್ಪಡಿಸಿದ್ದ ‘ಸಂವಿಧಾನ ಸಮರ್ಪಣಾ ದಿನ’ ಕಾರ್ಯಕ್ರಮದಲ್ಲಿ ಮಾತನಾಡಿದರು.
ಕಾಂಗ್ರೆಸ್ಸಿಗರಿಂದ ಅಂಬೇಡ್ಕರ್ ಅವರ ಬಗ್ಗೆ ತಿಳಿದುಕೊಳ್ಳುವ ಅಗತ್ಯ ಬಿಜೆಪಿಯವರಿಗೆ ಇಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತಿಳಿಸಿದರು.
ನಗರದಲ್ಲಿ ರಾಜ್ಯ ಎಸ್.ಸಿ. ಮೋರ್ಚಾ ವತಿಯಿಂದ ಏರ್ಪಡಿಸಿದ್ದ ಸಂವಿಧಾನ ಸಮರ್ಪಣಾ ದಿನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನೆಹರು ಸ್ಮಾರಕಕ್ಕೆ 30 ಎಕರೆ, ಇಂದಿರಾ ಗಾಂಧಿ ಅವರ ಸ್ಮಾರಕಕ್ಕೆ 20 ಎಕರೆ ನೀಡಿದ್ದರು. ಆದರೆ, ಸಂವಿಧಾನ ನೀಡಿದ ರಾಷ್ಟ್ರೀಯ ಸ್ಮಾರಕವನ್ನೇಕೆ ಮಾಡಿಲ್ಲ? ಅವರ ನೆನಪಾಗಲಿಲ್ಲವೇ ಎಂದರು.


