ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಜವನಗೊಂಡನಹಳ್ಳಿ ಹೋಬಳಿಯ T. ನಾಗೇನಳ್ಳಿ ಗ್ರಾಮದ ವಾಲ್ಮೀಕಿ ಸಮಾಜದ ಮುಖಂಡರು, ಹಿರಿಯ ಕಾಂಗ್ರೆಸ್ ಮುಖಂಡ ನಾಗಣ್ಣ ಅವರು, ಶುಕ್ರವಾರ ರಾತ್ರಿ ಹೃದಯಾಘಾತದಿಂದ ನಿಧನರಾಗಿದ್ದಾರೆ.
ನಾಗಣ್ಣರವರು ರಂಗನಾಥಪುರ ಗ್ರಾಮ ಪಂಚಾಯಿತಿಯಲ್ಲಿ ಕಾಂಗ್ರೆಸ್ ಪಕ್ಷದಿಂದ ಸ್ಪರ್ಧಿಸಿದ್ದರು. ರಂಗನಾಥಪುರ ಗ್ರಾಮ ಪಂಚಾಯತಿಯ ಮಾಜಿ ಅಧ್ಯಕ್ಷರು ಕೂಡ ಆಗಿದ್ದರು. ನಾಗಣ್ಣ ಅವರ ನಿಧನಕ್ಕೆ ಹಿರಿಯೂರು ತಾಲ್ಲೂಕಿನ ಮಾಜಿ ಶಾಸಕ, ಮಾಜಿ ಸಚಿವರಾದ ಡಿ. ಸುಧಾಕರ್ ರವರು ಸಂತಾಪ ಸೂಚಿಸಿದ್ದಾರೆ.
ನಾಗಣ್ಣ ಅವರ ಅಂತಿಮ ಸಂಸ್ಕಾರ ಅವರ ಸ್ವಗ್ರಾಮದಲ್ಲಿ ಇಂದು ನೆರವೇರಿದೆ.
ವರದಿ: ಮುರುಳಿಧರನ್ ಆರ್., ಹಿರಿಯೂರು.
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy