ಬೆಂಗಳೂರು: ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿಕೆ ನೀಡಿದ್ದಾರೆ.
ಎರಡು ದಿನಗಳ ದೆಹಲಿ ಪ್ರವಾಸದ ಹಿನ್ನೆಲೆ ವಿಧಾನಸೌಧದಲ್ಲಿ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿದ ಅವರು, ಕಾಂಗ್ರೆಸ್ ಹೈಕಮಾಂಡ್ ನಮಗೆ ದೇವಸ್ಥಾನ ಇದ್ದ ಹಾಗೆ, ಸಮಯ ಸಿಕ್ಕರೆ ಹೈಕಮಾಂಡ್ ಭೇಟಿಯಾಗಿ ಅವರಿಗೆ ಕೈ ಮುಗಿದು ಬರುತ್ತೇನೆ ಎಂದರು.
ಇನ್ನೂ ಎತ್ತಿನಹೊಳೆ ಯೋಜನೆ ಸಂಬಂಧಿಸಿದ ಪ್ರಶ್ನೆಗೆ ಉತ್ತರಿಸಿದ ಅವರು, ಕೇಂದ್ರ ಅರಣ್ಯ ಸಚಿವರನ್ನು ಭೇಟಿಯಾಗಬೇಕು. ತುಮಕೂರು ಮತ್ತು ಹಾಸನ ವಿಚಾರದಲ್ಲಿ ಕೇಂದ್ರ ಅನುಮತಿ ಕೊಡಬೇಕಿದೆ. ಈ ವಿಷಯದ ಕುರಿತು ಚರ್ಚೆಗೆ ಅವಕಾಶ ಕೊಟ್ಟಿದ್ದಾರೆ. ಅರಣ್ಯ ಸಚಿವರ ಜೊತೆ ಕೇಂದ್ರ ಜಲ ಸಂಪನ್ಮೂಲ ಸಚಿವರು ಸಮಯ ಕೊಟ್ಟಿದ್ದಾರೆ. ಅವರ ಜೊತೆಗೂ ಚರ್ಚೆ ಮಾಡುತ್ತೇನೆ ಎಂದು ತಿಳಿಸಿದರು.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC