nammatumakuru

    Subscribe to Updates

    Get the latest creative news from FooBar about art, design and business.

    What's Hot

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026
    Facebook Twitter Instagram
    ಟ್ರೆಂಡಿಂಗ್
    • ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ
    • ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ
    • ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    • ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ
    • ಕಿಡ್ನಿ ಸ್ಟೋನ್ಸ್ ತಡೆಯಲು ಎಷ್ಟು ನೀರು ಕುಡಿಯಬೇಕು? ಯಾವ ಆಹಾರಗಳನ್ನು ಸೇವಿಸಬೇಕು?
    • ಮಹಿಳೆಯರಲ್ಲೇ ಥೈರಾಯ್ಡ್ ಸಮಸ್ಯೆ ಹೆಚ್ಚು ಏಕೆ? ಈ 3 ಅಂಶಗಳ ಬಗ್ಗೆ ತಿಳಿಯಿರಿ
    • ‘ಗ್ರಂಥ’ ಚಿತ್ರಕ್ಕೆ ಮುಹೂರ್ತ, ಭೂಗತಲೋಕದ ಕುರಿತಾದ 90ರ ಕಾಲಘಟ್ಟದ ಚಿತ್ರ
    • ಸಂಪಾದಕೀಯ: ತೆರಿಗೆ ಹೊರೆಗಿಂತ ಅರಿವಿನ ಕೊರತೆಯೇ ಹೆಚ್ಚು ಅಪಾಯಕಾರಿ
    Facebook Twitter Instagram YouTube
    nammatumakuru nammatumakuru
    Demo
    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕು ಸುದ್ದಿ
      • ಚಿಕ್ಕನಾಯಕನಹಳ್ಳಿ
      • ಗುಬ್ಬಿ
      • ಕೊರಟಗೆರೆ
      • ಕುಣಿಗಲ್
      • ಮಧುಗಿರಿ
      • ಪಾವಗಡ
      • ಸಿರಾ
      • ತಿಪಟೂರು
      • ತುಮಕೂರು
      • ತುರುವೇಕೆರೆ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ
    Demo
    nammatumakuru
    Home » ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು
    ಕುಣಿಗಲ್ October 17, 2026

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    By Ganesh TumkuruOctober 17, 2026No Comments2 Mins Read
    l m ranganna gowda

    ಕುಣಿಗಲ್‌: ಸರ್ಕಾರದ 50 ಲಕ್ಷ ರೂ. ಹಣವನ್ನು ಕುಣಿಗಲ್‌ ಉತ್ಸವಕ್ಕೆ ಶಾಸಕ ಡಾ. ಎಚ್‌.ಡಿ. ರಂಗನಾಥ್‌ ಬಳಸಿಕೊಂಡಿದ್ದಾರೆ ಎಂಬ ಸುಳ್ಳು ಹೇಳಿಕೆ ನೀಡುವ ಮೂಲಕ ತಾಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಜನರನ್ನು ದಾರಿತಪ್ಪಿಸುವುದರ ಜೊತೆಗೆ ತಮ್ಮ ಸಣ್ಣತನವನ್ನು ಪ್ರದರ್ಶಿಸಿದ್ದಾರೆ ಎಂದು ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಎಂ.ಎಲ್‌. ರಂಗಣ್ಣಗೌಡ ತಿರುಗೇಟು ನೀಡಿದ್ದಾರೆ.

    ಪಟ್ಟಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ತಾಲೂಕು ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಅವರು ಯಾವುದೇ ಮಾಹಿತಿ ಇಲ್ಲದೆ ರಾಜಕೀಯ ದುರುದ್ದೇಶದಿಂದ, ಕುಣಿಗಲ್‌ ಉತ್ಸವ ಆಚರಿಸಲು ಶಾಸಕ ಡಾ. ಎಚ್‌.ಡಿ. ರಂಗನಾಥ್‌ ಅವರು 50 ಲಕ್ಷ ರೂ. ಪಡೆದಿದ್ದಾರೆ ಎಂದು ಆಧಾರರಹಿತ ಆರೋಪ ಮಾಡುವ ಮೂಲಕ ತಾಲೂಕಿನ ಮುಗ್ಧ ಜನರನ್ನು ದಾರಿತಪ್ಪಿಸುವ ಹೇಳಿಕೆ ನೀಡಿದ್ದಾರೆ ಎಂದು ದೂರಿದರು.

    ಅವರ ಈ ಹೇಳಿಕೆ ಸಣ್ಣತನ, ಕ್ಷುಲ್ಲಕ ಬುದ್ಧಿ ಹಾಗೂ ದಡ್ಡತನವನ್ನು ತೋರಿಸುತ್ತದೆ. ಶಾಸಕರು ಸರ್ಕಾರದಿಂದ ಒಂದು ನಯಾಪೈಸೆಯನ್ನೂ ಪಡೆದು ಕುಣಿಗಲ್‌ ಉತ್ಸವ ನಡೆಸಿಲ್ಲ. ಡಿ.ಕೆ.ಎಸ್‌. ಚಾರಿಟಬಲ್‌ ಟ್ರಸ್ಟ್‌ ವತಿಯಿಂದ ಡಾ. ದೊಡ್ಡಯ್ಯ ಅವರ ಸ್ಮರಣಾರ್ಥ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮ ಯಶಸ್ವಿಯಾದುದನ್ನು ಸಹಿಸದ ಬಿ.ಎನ್‌. ಜಗದೀಶ್‌ ಅವರು ಕಟ್ಟುಕಥೆ ಕಟ್ಟಿ ಸುಳ್ಳು ಆರೋಪ ಮಾಡುವ ಮೂಲಕ ಶಾಸಕರ ಹೆಸರಿಗೆ ಕೆಟ್ಟ ಹೆಸರು ತರಲು ಯತ್ನಿಸುತ್ತಿದ್ದಾರೆ ಎಂದು ಕಿಡಿಕಾರಿದರು.

    ದಸರಾ ಆಚರಣೆಗೆ ಸಲ್ಲಿಸಿದ್ದ ಪ್ರಸ್ತಾವನೆ:

    ಕುಣಿಗಲ್‌ ಉತ್ಸವ ಮತ್ತು ದಸರಾ ಉತ್ಸವದ ನಡುವಿನ ವ್ಯತ್ಯಾಸವೇ ಬಿ.ಎನ್‌. ಜಗದೀಶ್‌ ಅವರಿಗೆ ತಿಳಿದಿಲ್ಲ. 2025ರ ಸೆಪ್ಟೆಂಬರ್‌ 22ರಿಂದ ಅಕ್ಟೋಬರ್‌ 2ರವರೆಗೆ ನವರಾತ್ರಿ ಹಬ್ಬದ ಆಚರಣೆಯ ಅಂಗವಾಗಿ ಪುರಸಭೆಯ ಮಾಜಿ ಅಧ್ಯಕ್ಷ ರಂಗಸ್ವಾಮಿ ಅವರು ಮೈಸೂರು ಮತ್ತು ಶ್ರೀರಂಗಪಟ್ಟಣದ ಮಾದರಿಯಲ್ಲಿ ಕುಣಿಗಲ್‌ ಪಟ್ಟಣದಲ್ಲಿಯೂ ದಸರಾ ಆಚರಿಸೋಣ ಎಂದು ಶಾಸಕರ ಗಮನಕ್ಕೆ ತಂದಿದ್ದರು. ಈ ಹಬ್ಬದ ಆಚರಣೆಗೆ ಯಾರಿಂದಲೂ ದೇಣಿಗೆ ಪಡೆಯದೆ, ಸರ್ಕಾರದಿಂದ ಅನುದಾನ ತಂದು ಆಚರಣೆ ಮಾಡೋಣ ಎಂದು ಅವರು ಸಲಹೆ ನೀಡಿದ್ದರು. ಈ ಸಂಬಂಧ ಶಾಸಕರು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯೊಂದಿಗೆ ದೂರವಾಣಿ ಮೂಲಕ ಮಾತನಾಡಿದ್ದರು. ತಹಶೀಲ್ದಾರ್‌ ಅವರು 63 ಲಕ್ಷ ರೂ.ಗಳ ಪ್ರಸ್ತಾವನೆ ಸಲ್ಲಿಸಿದ್ದರು.  ಆದರೆ, ದಸರಾ ಆಚರಣೆ ಮುಗಿದ ಬಳಿಕ ಅಂದರೆ 2026ರ ಮಾರ್ಚ್‌ 26ರಂದು ಸರ್ಕಾರ 50 ಲಕ್ಷ ರೂ. ಅನುದಾನ ಬಿಡುಗಡೆ ಮಾಡಿತ್ತು. ಅಷ್ಟರಲ್ಲಿ ದಸರಾ ಮುಗಿದಿದ್ದರಿಂದ ಸರ್ಕಾರ ಆ ಹಣವನ್ನು ವಾಪಸ್‌ ಪಡೆದಿದೆ. ಹೀಗಿರುವಾಗ ಶಾಸಕರು ಆ ಹಣವನ್ನು ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಅಪಪ್ರಚಾರ ಮಾಡುವುದು ಸರಿಯಲ್ಲ ಎಂದು ರಂಗಣ್ಣಗೌಡ ಕಟುವಾಗಿ ಟೀಕಿಸಿದರು.

    ಎಚ್‌.ಡಿ. ಕುಮಾರಸ್ವಾಮಿ ವಿರುದ್ಧವೂ ವಾಗ್ದಾಳಿ: ಡಿ.ಕೆ. ಶಿವಕುಮಾರ್‌ ಅವರು ಮುಖ್ಯಮಂತ್ರಿ ಆಗುವುದನ್ನು ಸಹಿಸದ ಎಚ್‌.ಡಿ. ಕುಮಾರಸ್ವಾಮಿ ಅವರಿಗೆ ಹೊಟ್ಟೆಕಿಚ್ಚು ಉಂಟಾಗಿದೆ. ಅವರು ಬುದ್ಧಿಭ್ರಮಣೆಯಾದವರಂತೆ ವರ್ತಿಸುತ್ತಿದ್ದು, ‘ಸ್ಟಿಂಗ್‌ ಆಪರೇಷನ್‌’ ಸೃಷ್ಟಿಸಿ ಸುಳ್ಳು ಆರೋಪಗಳ ಮೂಲಕ ಕೇಂದ್ರ ಬಿಜೆಪಿ ನಾಯಕರನ್ನು ಮೆಚ್ಚಿಸಲು ಕಾಂಗ್ರೆಸ್‌ ನಾಯಕರ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದರು.

    ಜೆಡಿಎಸ್‌ ಅಧಿಕಾರ ಕಳೆದುಕೊಂಡು ಹತಾಶಗೊಂಡಿರುವುದರಿಂದ ವಿನಾಕಾರಣ ಶಾಸಕರ ವಿರುದ್ಧ ಹೇಳಿಕೆಗಳನ್ನು ನೀಡುತ್ತಿದ್ದಾರೆ ಎಂದು ರಂಗಣ್ಣಗೌಡ ಆಕ್ರೋಶ ವ್ಯಕ್ತಪಡಿಸಿದರು.


    ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.

    ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/CtZPUt7bwkaJkX2T6hAwZI

     

    Ganesh Tumkuru
    • Website

    Related Posts

    ಮುಜರಾಯಿ ದೇವಾಲಯಗಳ ಹಣ ದಸರಾಗೆ ಬೇಡ: ದಾಖಲೆ ಪ್ರದರ್ಶಿಸಿ ಒತ್ತಾಯಿಸಿದ ಜೆಡಿಎಸ್ ಅಧ್ಯಕ್ಷ ಬಿ.ಎನ್. ಜಗದೀಶ್

    October 16, 2026

    ಸ್ವೀಟ್ ಅಂಗಡಿ, ರೆಸ್ಟೋರೆಂಟ್, ಹೋಟೆಲ್ ಗಳ ಮೇಲೆ ದಾಳಿ: ಸ್ವಚ್ಛತೆ ಇಲ್ಲ, ಹಳೆ ತರಕಾರಿ ಬಳಕೆ ಪತ್ತೆ: ನೋಟಿಸ್

    October 15, 2026

    ಸ್ಪರ್ಧಾತ್ಮಕ ಯುಗದಲ್ಲಿ ಗೆಲುವು ಸಾಧಿಸಬೇಕಾದರೆ ಸ್ಪರ್ಧೆ ಮಾಡಲೇ ಬೇಕು: ಮಾಜಿ ಶಾಸಕ  ಬಿ.ವಿ.ರಾಮಸ್ವಾಮಿಗೌಡ

    October 9, 2026

    Leave A Reply Cancel Reply

    Our Picks

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    ಜಗನ್ನಾಥನ ರಥದ ಚಕ್ರ ಮನೆಗೆ ತರಬೇಕಾ? ಖರೀದಿಸಲು ಎಷ್ಟು ಹಣ ಕೊಡಬೇಕು?

    October 14, 2026

    ನಿಮ್ಮ ಮೊಬೈಲ್ ರೀಚಾರ್ಜ್‌ನಿಂದ ಟೆಲಿಕಾಂ ಕಂಪನಿಗಳಿಗೆ ಎಷ್ಟು ಲಾಭ?

    October 14, 2026

    ದೆಹಲಿಯ ಬೀದಿಯಲ್ಲಿ ಕಾರ್ಯಕರ್ತರೊಂದಿಗೆ ಸರಳತೆಯ ಸಹಭೋಜನ: ಜನರ ನಡುವಿನ ನಾಯಕ ಬಿ.ಕೆ. ಹರಿಪ್ರಸಾದ್

    October 13, 2026
    Stay In Touch
    • Facebook
    • Twitter
    • Pinterest
    • Instagram
    • YouTube
    • Vimeo
    Don't Miss
    ತಿಪಟೂರು

    ಎಸ್ ಐಆರ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳು ಆರೋಪ: ಕೇಂದ್ರ ಸಚಿವ ವಿ.ಸೋಮಣ್ಣ ಆರೋಪ

    October 17, 2026

    ತಿಪಟೂರು: ಎಸ್ ಐಆರ್ ವಿಚಾರದಲ್ಲಿ ರಾಹುಲ್ ಗಾಂಧಿ ಸೇರಿದಂತೆ, ಕಾಂಗ್ರೆಸ್ ಪಕ್ಷದ ಮುಖಂಡರು ಸುಳ್ಳು ಆರೋಪಗಳನ್ನು ಮಾಡುತ್ತಿದ್ದು, ದೊಂಬರಾಟ ನಡೆಸುತ್ತಿದ್ದಾರೆ.…

    ತುಮಕೂರು ಸ್ಕ್ವೇರ್ ಹೆಸರಿಗೆ ಭಕ್ತರು, ಶ್ರೀಗಳ ವಿರೋಧ: ಡಾ.ಶ್ರೀ ಶಿವಕುಮಾರಸ್ವಾಮೀಜಿ ಸ್ಕ್ವೇರ್’ ಎಂದೇ ಹೆಸರಿಸಲು ಆಗ್ರಹ

    October 17, 2026

    ಕುಣಿಗಲ್‌ ಉತ್ಸವಕ್ಕೆ ಸರ್ಕಾರದ ಹಣ ಬಳಸಿಲ್ಲ: ಜೆಡಿಎಸ್‌ ಅಧ್ಯಕ್ಷ ಬಿ.ಎನ್‌. ಜಗದೀಶ್‌ ಆರೋಪಕ್ಕೆ ಕಾಂಗ್ರೆಸ್‌ ತಿರುಗೇಟು

    October 17, 2026

    ಎಲ್ ನಿನೋ ಭೀತಿ: 10 ತಿಂಗಳು ನೀರಿನ ಬಿಕ್ಕಟ್ಟು? ರೈತರಿಗೆ ಇಲ್ಲಿದೆ ಮುಖ್ಯ ಸೂಚನೆ

    October 17, 2026

    Subscribe to Updates

    Get the latest creative news from SmartMag about art & design.

    ನಮ್ಮ ಬಗ್ಗೆ
    ನಮ್ಮ ಬಗ್ಗೆ

    Golana Enterprises
    Siddagirinagara, Madhugiri Road
    Yellapura, Tumakuru - 572 106

    ಉಪಯುಕ್ತ ಲಿಂಕ್ಸ್

    • ಮುಖಪುಟ
    • ರಾಜ್ಯ ಸುದ್ದಿ
    • ಜಿಲ್ಲಾ ಸುದ್ದಿ
    • ತಾಲೂಕುಸುದ್ದಿ
    • ಉದ್ಯೋಗ
    • ಸ್ಪೆಷಲ್ ನ್ಯೂಸ್
    • ಆರೋಗ್ಯ
    • ಲೇಖನ

    ನಮ್ಮನ್ನು ಸಂಪರ್ಕಿಸಿ

    nammatumakuru9@gmail.com
    +91 97417 17700
    Facebook Twitter Instagram Pinterest
    • Home
    • Lifestyle
    • Arts & Culture
    • Travel
    • Buy Now
    • Privacy Policy
    Copyright © 2026 | All Right Reserved nammatumakuru.com.
    Powerd By Eappsi.com

    Type above and press Enter to search. Press Esc to cancel.