ಮೈತ್ರಿ ಪಕ್ಷಗಳ ವೈಯಕ್ತಿಕ ವಿಚಾರ. ಅವರು ಏನೇ ತೀರ್ಮಾನ ಮಾಡಿ ಮೈತ್ರಿ ಮಾಡಿಕೊಂಡರೂ ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಸಂಸದ ಡಿ. ಕೆ. ಸುರೇಶ್ ಹೇಳಿದರು.
ನಮ್ಮ ಕಾಂಗ್ರೆಸ್ ಪಕ್ಷ ರಾಜ್ಯದಲ್ಲಿ ಆಡಳಿತದಲ್ಲಿದೆ. ದೇಶದಲ್ಲಿ ಬಿಜೆಪಿ ಆಡಳಿತ ನಡೆಸುತ್ತಿದೆ. ಕಾಂಗ್ರೆಸ್ ಜಾತ್ಯತೀತ ತತ್ವದ ಮೇಲೆ ಆಡಳಿತ ಮಾಡುತ್ತಿದೆ ಎಂದರು. ಯಾರು ಹೊಂದಾಣಿಕೆ ಮಾಡಿಕೊಂಡರೂ ನಮ್ಮ ಸಿದ್ಧಾಂತದ ಮೇಲೆ ನಾವು ಹೋರಾಟ ಮಾಡುತ್ತೇವೆ. ನಮ್ಮ ಒಕ್ಕೂಟ ವ್ಯವಸ್ಥೆ ಬಲಪಡಿಸಲು ಹೋರಾಟ ಮಾಡುತ್ತೇವೆ ಎಂದರು.


