ಸರಗೂರು: ಈ ದೇಶದ ಇತಿಹಾಸ ಕಂಡ ಪ್ರಮುಖ ರಾಜಕೀಯ ಪಕ್ಷ ಹಾಗೂ ಜನಪರತೆಯ ಆಧಾರದ ಮೇಲೆ ಎಲ್ಲ ವರ್ಗಗಳ ಏಳಿಗೆಗಾಗಿ ಶ್ರಮಿಸುತ್ತಾ ಸಮಾನ ಅವಕಾಶಗಳನ್ನು ಸೃಷ್ಟಿಸಿದ ಕಾಂಗ್ರೆಸ್ ಪಕ್ಷ. ಸ್ವಾತಂತ್ರ್ಯದ ನಂತರದಲ್ಲಿ ಅತ್ಯಂತ ಆರೋಗ್ಯಪೂರ್ಣವಾಗಿ ದೇಶವನ್ನು ಮುನ್ನಡೆಸಿದ ಶಕ್ತಿ ಕಾಂಗ್ರೆಸ್ ಪಕ್ಷಕ್ಕೆ ಸಲ್ಲುತ್ತದೆ ಎಂದು ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷ ಕಂದೇಗಾಲ ಶಿವರಾಜು ಎಂದರು.
ಪಟ್ಟಣ ಪ್ರವಾಸಿ ಮಂದಿರದಲ್ಲಿ ಸೋಮವಾರ ದಂದು 140ನೇ ಕಾಂಗ್ರೆಸ್ ಪಕ್ಷದ ಸಂಸ್ಥಾಪನ ದಿನದ ಅಂಗವಾಗಿ ರಾಜ್ಯ ಹಾಗೂ ಜಿಲ್ಲಾ ಅಧ್ಯಕ್ಷರ ಆದೇಶ ಮೇರೆಗೆ ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಶಿವರಾಜ್ ಹಾಗೂ ಸರಗೂರು ಯುವ ಕಾಂಗ್ರೆಸ್ ಅಧ್ಯಕ್ಷ ನವೀನ್ ರವರ ನೇತೃತ್ವದಲ್ಲಿ ಹಿರಿಯರಿಗೆ ಸನ್ಮಾನಿಸಿ ಮಾತನಾಡಿದರು.
ಕಾಂಗ್ರೆಸ್ ಪಕ್ಷ ರಾಷ್ಟ್ರನಿರ್ಮಾಣದಲ್ಲಿ ನಿರ್ವಹಿಸಿದ ಪಾತ್ರ ಅನನ್ಯ. ಸ್ವಾತಂತ್ರ್ಯದ ಬಳಿಕ ದೇಶದ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಕಾಂಗ್ರೆಸ್ ಪಕ್ಷದ ಕೊಡುಗೆ ಅಪಾರ ಎಂದರು.
ಕಾಂಗ್ರೆಸ್ ಇಂದಿಗೂ ಬಡವರು, ಶೋಷಿತರು, ಅವಕಾಶ ವಂಚಿತರು ಸೇರಿದಂತೆ ದೇಶದ ನಾಗರಿಕರ ಧ್ವನಿಯಾಗಿದ್ದು, ಸಂವಿಧಾನ, ಪ್ರಜಾಪ್ರಭುತ್ವ ಆಶಯಗಳನ್ನು ರಕ್ಷಿಸುವ ಕೆಲಸ ಮಾಡುತ್ತಿದೆ. ಬ್ರಿಟಿಷರ ದಾಸ್ಯದ ಸಂಕೋಲೆಯಿಂದ ಭಾರತವನ್ನು ಮುಕ್ತಗೊಳಿಸಲು ಕಾಂಗ್ರೆಸ್ ಮಹನೀಯರ ತ್ಯಾಗ, ಬಲಿದಾನ ಸ್ಮರಣೀಯ ಎಂದು ಹೇಳಿದರು.
ಸರಗೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಮನುಗನಹಳ್ಳಿ ಮಾದಪ್ಪ ಮಾತನಾಡಿ ಅದರಲ್ಲೂ ದೇಶ ವಿಭಜನೆಯ ತಂತ್ರಗಳನ್ನು ಅನುಸರಿಸುತ್ತಾ ಸದಾ ದೇಶದೊಳಗೆ ಕ್ಷೋಭೆ ಹಾಗೂ ಅಶಾಂತಿಯನ್ನೇ ಉಂಟುಮಾಡಲು ಶ್ರಮಿಸುತ್ತಿದ್ದ ದುಷ್ಟ ಮನುವಾದಿಗಳ ನಿಯಂತ್ರಣಕ್ಕೆ ದೇಶವನ್ನು ಒಪ್ಪಿಸದೇ ಸುದೀರ್ಘ ಕಾಲ ದೇಶದ ಅಧಿಕಾರ ಚುಕ್ಕಾಣಿ ಹಿಡಿದು ಬಾಬಾ ಸಾಹೇಬರ ಸಂವಿಧಾನದ ನೆರವಿನಿಂದ ವ್ಯವಸ್ಥಿತವಾಗಿ ದೇಶದ ಮುನ್ನಡೆಗೆ ಕಾರಣವಾದ ಕಾಂಗ್ರೆಸ್ ಪಕ್ಷವು ನೂರೆಂಟು ಜನಪರ ಕಾಯ್ದೆಗಳ ಮೂಲಕ ಜನರ ಬದುಕಿನ ಹಿತ ಕಾಯುವಂತಹ ಕೆಲಸ ಮಾಡಿತು.
60 ವರ್ಷಗಳ ತನ್ನ ಅಧಿಕಾರದ ಅವಧಿಯಲ್ಲಿ ಜನ ಸಮುದಾಯಗಳ ಸಮಾನ ಏಳಿಗೆಗಾಗಿ ಕಾಂಗ್ರೆಸ್ ಸರ್ಕಾರ ಜಾರಿ ಮಾಡಿದ ಕಾಯ್ದೆಗಳು ಮತ್ತು ಯೋಜನೆಗಳು ಅಪಾರವಾಗಿತ್ತು. ಇನ್ನು 60 ವರ್ಷಗಳಲ್ಲಿ ಕಾಂಗ್ರೆಸ್ ಮಾಡಿದ ಕೆಲಸಗಳು ಬೆಟ್ಟದಷ್ಟು ಎಂದರು.
ಪಪಂ ಸದಸ್ಯ ಶ್ರೀನಿವಾಸ.ಬ್ಲಾಕ್ ಕಾಂಗ್ರೆಸ್ ಪಕ್ಷದ ಮಾಜಿ ಅಧ್ಯಕ್ಷ ಮಂಜುನಾಥ ಮಾತನಾಡಿದರು .
ಈ ಸಂದರ್ಭದಲ್ಲಿ ಗ್ಯಾರಂಟಿ ಸಮಿತಿ ಅಧ್ಯಕ್ಷ ಚಲುವರಾಜು, ಮಂಜು, ತಿಮ್ಮಯ್ಯ, ಇದಿಯಪ್ಪ, ಹಿಬ್ರಾಹಿಂ,ಪಪಂ ಮಾಜಿ ಸದಸ್ಯ ರಂಗನಾಥ, ಮಾದೇವ, ಶಂಬುಲಿಂಗೆಗೌಡ್ರು, ಪುಟ್ಟಸ್ವಾಮಿ, ಅಕ್ರಮ ಸಕ್ರಮ ಸಮಿತಿ ಸದಸ್ಯ ಶಿವಶಂಕರ, ಬಿಲ್ಲಯ್ಯ, ಶ್ರೀನಿವಾಸ್, ಮಣಿಕಂಠ , ನಾಗೇಂದ್ರ ಮೊಳೆಯೂರು ಕಾವಲ್,ಕಳಸೂರು ಬಸವರಾಜ್, ಸಿದ್ದರಾಜು, ಚೈತ್ರ ಸ್ವಾಮಿ, ಮಫಿರುಲ್ಲಾ, ಮಹೇಶ್ ರವರು ಯಾಸಿನ್, ಮಹಮದ್ ಸೋಯಬ್ ಹಾಗೂ ಹಿರಿಯರು ಮುಖಂಡರು, ಯುವಕರು, ಪಕ್ಷದ ಕಾರ್ಯಕರ್ತರು, ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿದ್ದರು.
ವರದಿ: ಹಾದನೂರು ಚಂದ್ರ
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/ISmeQjik4LbG9KvWhKlbCC


