ಬೆಂಗಳೂರು: ಲೋಕಸಭಾ ಚುಣಾವಣೆ ಹಿನ್ನೆಲೆ ಕಾಂಗ್ರೆಸ್ ಬಿಡುಗಡೆ ಮಾಡಿರುವ ಪ್ರಣಾಳಿಕೆಯನ್ನು ದೇಶಾದ್ಯಂತ ಬಿಜೆಪಿ ನಾಯಕರು ಟೀಕೆ ಮಾಡುತ್ತಿದ್ದಾರೆ. ಅದರಂತೆ ರಾಜ್ಯ ಬಿಜೆಪಿ ನಾಯಕ ಸಿ. ಟಿ. ರವಿ ಕೂಡ ಟೀಕೆ ಮಾಡಿದ್ದು, “ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್” ಎಂದಿದ್ದಾರೆ.
ಈ ಬಗ್ಗೆ ಎಕ್ಸ್ ನಲ್ಲಿ, ಕಾಂಗ್ರೆಸ್ ಹೊಸ ಮುಸ್ಲಿಂ ಲೀಗ್ ಎಂದು ಬರೆದುಕೊಂಡಿದ್ದು, “1936ರ ಮುಸ್ಲಿಂ ಲೀಗ್ ಪ್ರಣಾಳಿಕೆ ಮತ್ತು 2024ರ ಪ್ರಣಾಳಿಕೆಯನ್ನು ಹೋಲಿಕೆ ಮಾಡಿದ್ದಾರೆ.
ಮುಸ್ಲಿಂ ಲೀಗ್ ಪ್ರಣಾಳಿಕೆ 1936: ಮುಸ್ಲಿಂ ಲೀಗ್ ಮುಸ್ಲಿಮರ ಷರಿಯಾ ವೈಯಕ್ತಿಕ ಕಾನೂನುಗಳನ್ನು ರಕ್ಷಿಸುತ್ತದೆ. ಮುಸ್ಲಿಂ ಲೀಗ್ ಬಹುಮತದ ವಿರುದ್ಧ ಹೋರಾಡಲಿದೆ. ಮುಸ್ಲಿಮರಿಗೆ ವಿಶೇಷ ವಿದ್ಯಾರ್ಥಿವೇತನ ಮತ್ತು ಉದ್ಯೋಗಕ್ಕಾಗಿ ಹೋರಾಡುತ್ತೇವೆ.
ಕಾಂಗ್ರೆಸ್ ಪ್ರಣಾಳಿಕೆ 2024: ಅಲ್ಪಸಂಖ್ಯಾತರಿಗೆ ವೈಯಕ್ತಿಕ ಕಾನೂನುಗಳನ್ನು ಕಾಂಗ್ರೆಸ್ ಖಚಿತಪಡಿಸುತ್ತದೆ. ಭಾರತದಲ್ಲಿ ಬಹುಸಂಖ್ಯಾತವಾದಕ್ಕೆ ಜಾಗವಿಲ್ಲ. ಮುಸ್ಲಿಂ ವಿದ್ಯಾರ್ಥಿಗಳಿಗೆ ವಿದೇಶದಲ್ಲಿ ಅಧ್ಯಯನ ಮಾಡಲು ವಿದ್ಯಾರ್ಥಿವೇತನ ಖಚಿತಪಡಿಸುತ್ತೇವೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296