ನವದೆಹಲಿ: ಕಾಂಗ್ರೆಸ್ ಹಿಂದೂಗಳನ್ನು ವಿಭಜಿಸಿ ಮುಸ್ಲಿಮರನ್ನು ಓಲೈಸುತ್ತಿದೆ ಎಂದು ಕೇಂದ್ರ ಸಚಿವ ಕಿರಣ್ ರಿಜಿಜು ಆರೋಪಿಸಿದರು.
ಸಂದರ್ಶನವೊಂದರಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಮುಸ್ಲಿಮರನ್ನು ವೋಟ್ ಬ್ಯಾಂಕ್ ಆಗಿ ಬಳಸಿಕೊಳ್ಳುತ್ತಿದೆ ಎಂದು ಅವರು ಆರೋಪಿಸಿದರು.
ಚುನಾವಣಾ ಸಮಯದಲ್ಲಿ ಕಾಂಗ್ರೆಸ್ ತನ್ನ ಶೇಕಡಾ 15ರಷ್ಟು ಮತಗಳನ್ನು (ಮುಸ್ಲಿಂ ಬೆಂಬಲವನ್ನು ಉಲ್ಲೇಖಿಸಿ) ಮೀಸಲಿಟ್ಟಿದೆ ಎಂದು ಹೇಳುತ್ತದೆ. ಇದು ಪಕ್ಷದ ಮನಸ್ಥಿತಿಯನ್ನು ಬಿಂಬಿಸುತ್ತದೆ. ಕಾಂಗ್ರೆಸ್ ಮುಸ್ಲಿಮರನ್ನು ತನ್ನ ಮತಬ್ಯಾಂಕ್ ಎಂದು ಪರಿಗಣಿಸುತ್ತದೆ ಎಂಬುದು ಎಲ್ಲರಿಗೂ ತಿಳಿದಿರುವ ವಿಷಯ ಎಂದು ಅವರು ಹೇಳಿದರು.
ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ತಮ ಸಂದರ್ಶನದ ಕ್ಲಿಪ್ ಅನ್ನು ಹಂಚಿಕೊಂಡಿರುವ ಅವರು, ಮುಸ್ಲಿಮರಿಗೆ ನನ್ನ ಎಚ್ಚರಿಕೆ: ಕಾಂಗ್ರೆಸ್ ನ ಮತ ಬ್ಯಾಂಕ್ ಆಗಬೇಡಿ! ಹಿಂದೂಗಳು ಮತ್ತು ಇತರರಿಗೆ ನನ್ನ ಎಚ್ಚರಿಕೆ: ಕಾಂಗ್ರೆಸ್ ಪಕ್ಷದ ಒಡೆದು ಆಳುವ ನೀತಿಗಳಿಗೆ ಬಲಿಯಾಗಬೇಡಿ ಎಂದು ಬರೆದುಕೊಂಡಿದ್ದಾರೆ.
ನಮ್ಮತುಮಕೂರಿನ ಕ್ಷಣ ಕ್ಷಣದ ಸುದ್ದಿಗಳನ್ನು ನಿರಂತರವಾಗಿ ಪಡೆಯಲು ನಿಮ್ಮ ವಾಟ್ಸಾಪ್ ಗ್ರೂಪ್ ಗೆ 8123382149 ಸಂಖ್ಯೆಯನ್ನು ಸೇರಿಸಿ.
ಗ್ರೂಪ್ ಗೆ ಜಾಯಿನ್ ಆಗಿ: https://chat.whatsapp.com/G7IPvItJj7JHrybOIW3296