ಚಿತ್ರದುರ್ಗ: ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಕಾಂಗ್ರೆಸ್ ಕಚೇರಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್ ನೇತೃತ್ವದಲ್ಲಿ 73ನೇ ಗಣರಾಜ್ಯೋತ್ಸವ ಕಾರ್ಯಕ್ರಮ ನಡೆಯಿತು.
ಮಾಜಿ ಸಚಿವ, ಮಾಜಿ ಶಾಸಕರಾದ ಡಿ.ಸುಧಾಕರ್ ಕಾರ್ಯಕ್ರಮದಲ್ಲಿ ಭಾಗವಹಿಸಿ, ಧ್ವಜಾರೋಹಣ ನಡೆಸಿದರು. ಬಳಿಕ ಮಾತನಾಡಿದ ಅವರು, ಜನವರಿ 26, 1950ರಂದು ಡಾ.ಬಿ.ಆರ್. ಅಂಬೇಡ್ಕರ್ ರವರು ನಮ್ಮ ಭಾರತ ದೇಶಕ್ಕೆ ಸಂವಿಧಾನವನ್ನು ಕೊಟ್ಟರು ಎಂದರು.
ಈ ಸಂದರ್ಭದಲ್ಲಿ ಶಾಸಕರಾದ ಡಿ.ಸುಧಾಕರ್ , ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಖಾದಿ ರಮೇಶ್, ನಗರಸಭೆ ಅಧ್ಯಕ್ಷರಾದ ಶಂಶದ್ ಉನ್ನಿಸಾ, ನಗರಸಭೆ ಉಪಾಧ್ಯಕ್ಷರಾದ ಬಿ.ಎನ್.ಪ್ರಕಾಶ್, ಕಾರ್ಮಿಕ ವಿಭಾಗದ ತಾಲ್ಲೂಕು ಅಧ್ಯಕ್ಷ ಶಿವಕುಮಾರ್, ಜ್ಯೋತಿಲಕ್ಷ್ಮಿ, ರವಿಚಂದ್ರನಾಯ್ಕ, ನಗರ ಸಭೆ ಸದಸ್ಯರಾದ ಜಗದೀಶ್ , ಸುರೇಖಾಮಣಿ, ಒಡ್ರು ಮಂಜುನಾಥ್, ಸನಾವುಲ್ಲಾ , ಶಿವರಂಜನಿ,ರಾಜೇಶ್ ಆಪ್ಟಿಕಲ್ ಹಾಗೂ ಕಾಂಗ್ರೆಸ್ ಪಕ್ಷದ ಗ್ರಾಮ ಪಂಚಾಯತಿ ಸದಸ್ಯರ , ಅಧ್ಯಕ್ಷರು, ಉಪಾಧ್ಯಕ್ಷರು, ಕಾರ್ಯಕರ್ತರು, ಮುಖಂಡರುಗಳು ಭಾಗವಹಿಸಿದರು.
ವರದಿ: ಮುರುಳಿಧರನ್ ಆರ್., ಹಿರಿಯೂರು ( ಚಿತ್ರದುರ್ಗ )
ನಮ್ಮತುಮಕೂರು.ಕಾಂನ ಕ್ಷಣ ಕ್ಷಣದ ಸುದ್ದಿಗಳನ್ನು ಪಡೆದುಕೊಳ್ಳಲು ನಿಮ್ಮ ವಾಟ್ಸಾಪ್ ಗ್ರೂಪ್ ಗಳಿಗೆ 9686399493 ನಂಬರ್ ಸೇರಿಸಿಕೊಳ್ಳಿ.
ವಾಟ್ಸಾಪ್ ಗ್ರೂಪ್ ಗೆ ಸೇರಿ: https://chat.whatsapp.com/L4EDpegaxhmLTkOnd50sAy